Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸರ್ಕಾರದ ಮೇಲೆ ಜನರಿಗೆ ಭ್ರಾಂತಿಯಾಗುತ್ತಿದೆ: ಬೊಮ್ಮಾಯಿ
  • Politics
  • State
  • ಗದಗ

ಸರ್ಕಾರದ ಮೇಲೆ ಜನರಿಗೆ ಭ್ರಾಂತಿಯಾಗುತ್ತಿದೆ: ಬೊಮ್ಮಾಯಿ

Praja Vahini October 29, 2025 1 minute read
WhatsApp Image 2025-10-29 at 18.28.32
Spread the love

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಸದಸ್ಯರು ಹಾಗೂ ಅಧಿಕಾರಿಗಳ ಮೇಲೆ ತಮ್ಮ ನಿಯಂತ್ರಣ ಕಳೆದುಕೊಂಡಿದ್ದಾರೆ. ಎರಡುವರೆ ವರ್ಷದಲ್ಲಿ ಒಂದೂ ಅಭಿವೃದ್ಧಿ ಕೆಲಸವಾಗಿಲ್ಲ. ಯಾವ ಪುರುಷಾರ್ಥಕ್ಕೆ ಈ ಎರಡುವರೆ ವರ್ಷ ಅವಧಿ ಮುಗಿಸಿದರು ಎಂಬುದು ಜನತೆಗೆ ಹೇಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನವೆಂಬರ್ ಕ್ರಾಂತಿ ಭ್ರಾಂತಿ ಎಲ್ಲ ನೋಡಿದರೆ, ಸರ್ಕಾರದ ಮೇಲೆ ಕರ್ನಾಟಕದ ಜನತೆಗೆ ಭ್ರಾಂತಿಯಾಗುತ್ತಿದೆ. ಕಾಂಗ್ರೆಸ್’ನವರು ಆಡಳಿತವನ್ನೇ ಮರೆತುಬಿಟ್ಟಿದ್ದಾರೆ. ಅಭಿವೃದ್ದಿಯಂತೂ ಮರಿಚಿಕೆಯಾಗಿದೆ. ಹಣಕಾಸು ವ್ಯವಸ್ಥೆ ಇಲ್ಲ, ಹೀಗಾಗಿ ಡ್ರಾಮಾ ಮಾಡಿಕೊಂಡು ಹೊರಟಿದ್ದಾರೆ. ಸಿಎಂ ಸಿದ್ದರಾಮಯ್ಯ ಒಂದು ಹೇಳುತ್ತಾರೆ, ಡಿಸಿಎಂ ಡಿ.ಕೆ.ಶಿವಕುಮಾರ್  ಅದಕ್ಕೆ ತದ್ವಿರುದ್ಧವಾಗಿ ಹೇಳುತ್ತಾರೆ.

ಮಂತ್ರಿಗಳು ಇನ್ನೊಂದು ಹೇಳುತ್ತಾರೆ. ಸಿಎಂ ಗೆ ಸಚಿವ ಸಂಪುಟದ ಸದಸ್ಯರ ಮೇಲೆ ನಿಯಂತ್ರಣ ತಪ್ಪಿದೆ. ಹೈಕಮಾಂಡ್ ಸಿಎಂ ಬದಲಾವಣೆಯ ಬಗ್ಗೆ ಹೇಳಬೇಡಿ ಅಂದರೂ ಹೇಳುತ್ತಿದ್ದಾರೆ, ಸಿಎಂ ಅವರಿಗೆ ನಿಯಂತ್ರಣ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು.

ಹಣ ಕಳುಹಿಸುವ ಪರಂಪರೆ

ಬಿಹಾರ ಚುನಾವಣೆಗೆ ರಾಜ್ಯದಿಂದ ಹಣ ಸಂದಾಯವಾಗುತ್ತಿರುವ  ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು,  ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿದ್ದಾಗ ಯಾವಾಗಲೂ ಕೂಡ ಇಲ್ಲಿಂದ ಹಣ ಕಳಿಸುವ ಪರಂಪರ ಇದೆ. ಅದಕ್ಕೆ ಬೇಕಾದಂತಹ ಸಾಕಷ್ಟು ಘಟನೆ ನಡೆದಿವೆ. ತೆಲಂಗಾಣ ರಾಜ್ಯದಲ್ಲೂ ದುಡ್ಡಿಲ್ಲ. ಕಾಂಗ್ರೆಸ್ ನವರಿಗೆ ಕರ್ನಾಟಕ ಹಿಂಡುವ ಆಕಳಾಗಿದೆ‌ ಎಂದರು. ಇದನ್ನೂ ಓದಿ: ಟನಲ್ ರಸ್ತೆ ವಿಚಾರದಲ್ಲಿ ನಾನು ತಾಂತ್ರಿಕ ತಜ್ಞ ಅಲ್ಲ: ಡಿಕೆಶಿ

ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂಬ ಕೂಗು ಕೇಳಿ ಬರುತ್ತಿರುವ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದಲಿತ ಸಿಎಂ ಆಗಲಿ ಅದಕ್ಕೆ ಸಂತೋಷ. ಆದರೆ, ಇದ್ದ ಸಿಎಂ ಅವರೇ ಕೆಲಸ ಮಾಡುತ್ತಿಲ್ಲ. ಕರ್ನಾಟಕದ ಹಣೆಬರಹ ಕಾಂಗ್ರೆಸ್‌ ಕೈಯಲ್ಲಿ ಎಂದೆಂದೂ ಉದ್ದಾರವಾಗಲು ಸಾದ್ಯವಿಲ್ಲ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಟನಲ್ ರಸ್ತೆ ವಿಚಾರದಲ್ಲಿ ನಾನು ತಾಂತ್ರಿಕ ತಜ್ಞ ಅಲ್ಲ: ಡಿಕೆಶಿ
Next: ಹೆಡಗಾಪೂರ ಪಿಡಿಒ ಕುಮಾರಿ ಮಹಾಲಕ್ಷ್ಮಿ ಅಮಾನತ್ತು

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.