ಬೆಂಗಳೂರು: ಸ್ಯಾಂಡಲ್ ವುಡ್ ನ ಡಿಂಪಲ್ ಕ್ವೀನ್ ರಚಿತರಾಮ್ ಅವರು ತಮ್ಮದೇ ಆದ ಅಭಿಮಾನಿಗಳ ಬಳಗವಿದೆ. ಕೇವಲ ಸಿನಿಮಾ ಮಾತ್ರವಲ್ಲದೆ ಹಲವಾರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವರು ಇದೀಗ ಆಟೋ ಚಾಲಕರ ಸಂಘದ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ.
ಹೌದು, ನಟಿ ರಚಿತಾ ರಾಮ್ ಅವರು ಇತ್ತೀಚಿಗಷ್ಟೇ ಆಟೋ ಚಾಲಕರ ಸಂಘದ ರಾಯಭಾರಿಯಾಗಿ ನೇಮಕಗೊಂಡಿದ್ದು, ಖಾಕಿ ತೊಟ್ಟು ಆಟೋ ಓಡಿಸುವ ಫೋಟೋಗಳನ್ನು ತಮ್ಮ ಸೋಶಿಯಲ್ ಮೀಡಿಯಾ ಗಳಲ್ಲಿ ಹಂಚಿಕೊಂಡಿದ್ದಾರೆ.
ಇನ್ನು ಬೆಂಗಳೂರಿನಿಂದ ನೂರಾರು ಆಟೋ ಚಾಲಕರು ಆರ್.ಆರ್ ನಗರದ ಅವರ ನಿವಾಸದ ಬಳಿ ಜಮಾಯಿಸಿ ರಚಿತಾರನ್ನ ಅಫಿಷಿಯಲ್ ಆಗಿ ಚಾಲಕರ ಸಂಘದ ರಾಯಭಾರಿಯನ್ನಾಗಿ ಮಾಡಿಕೊಳ್ಳುವ ಕಾರ್ಯಕ್ರಮ ಮಾಡಿದ್ದಾರೆ. ಆಟೋ ಎದುರು ಆಟೋ ಚಾಲಕರ ವಸ್ತ್ರದಲ್ಲೇ ನಿಂತು ಫೋಟೋಗೆ ಪೋಸ್ ಕೊಟ್ಟಿದ್ದಾರೆ ರಚಿತಾ ರಾಮ್. ಈ ವಿಚಾರವನ್ನ ತಮ್ಮ ಸೋಷಿಯಲ್ ಮೀಡಿಯಾ ಇನ್‌ಸ್ಟಾ ಖಾತೆಯಲ್ಲೂ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಉಮಾಶ್ರೀಗೆ ಒಲಿದು ಬಂತು ಡಾ. ರಾಜ್ ಕುಮಾರ್ ಪ್ರಶಸ್ತಿ
ಅತಿರಥ ಮಹಾರಥ ಸಾರಥಿಗಳಿಗೆ ನನ್ನ ಸಮಸ್ಕಾರ, ನನ್ನನ್ನು ಆಟೋ ಚಾಲಕರ ಸಂಘದ ಬ್ರ್ಯಾಂಡ್ ಅಂಬಾಸಿಡರ್ ಆಗಿ ನೇಮಕ ಮಾಡಿದ್ದಕ್ಕೆ ಧನ್ಯವಾದಗಳುʼ ಎಂದು ಬರೆದುಕೊಂಡಿದ್ದಾರೆ.
