Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅಲೆಮಾರಿ ಸಮುದಾಯಕ್ಕೆ ಶೇ. 1 ರಷ್ಟು ಮೀಸಲಾತಿ ಒದಗಿಸಲು ಸರ್ಕಾರ ಬದ್ಧ : ಸಿಎಂ
  • Bangalore
  • Front news
  • Politics
  • State

ಅಲೆಮಾರಿ ಸಮುದಾಯಕ್ಕೆ ಶೇ. 1 ರಷ್ಟು ಮೀಸಲಾತಿ ಒದಗಿಸಲು ಸರ್ಕಾರ ಬದ್ಧ : ಸಿಎಂ

Praja Vahini October 31, 2025
dec18672-664f-46d7-8469-725fcdf675e1
Spread the love

ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು ಶೇಕಡ 1 ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಒಳ ಮೀಸಲಾತಿ ಕುರಿತು ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗ ಇಂದು (ಶುಕ್ರವಾರ ಅ. 31) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಭೇಟಿ ಮಾಡಿ ಮನವಿ ಅರ್ಪಿಸಿತು.
ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಿ  ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸುಧಾರಣೆಗೆ ಎಸ್ ಸಿ ಪಿ /ಟಿ ಎಸ್ ಪಿ ಕಾರ್ಯ ಕ್ರಮಗಳನ್ನು ಜಾರಿಗೊಳಿಸಿದ್ದೇ ನಮ್ಮ ಸರ್ಕಾರ. ಪ್ರತಿಯೊಬ್ಬರಿಗೂ ಪರಿಹಾರ ಸಿಗಲಿ ಎನ್ನುವುದೇ ಸರ್ಕಾರದ ಉದ್ದೇಶ. ಯಾವುದೇ ಜಾತಿಯೊಳಗೆ ಇನ್ನೊಂದನ್ನು ಸೇರಿಸುವ, ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ.
ಇದಕ್ಕೊಂದು ಪರಿಹಾರ ಹುಡುಕಿ, ನ್ಯಾಯ ಒದಗಿಸಲಾಗುವುದು ಎಂದರು.

ಒಳಮೀಸಲಾತಿ ಕಲ್ಪಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಿದೆ. ಈಗ ಉಂಟಾಗಿರುವ ಗೊಂದಲಗಳಿಗೂ ಆದ್ಯತೆ ಮೇರೆಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಇದನ್ನೂ ಓದಿ: ನಮ್ಮ ನೆರೆ ಹೊರೆಯವರೆ ನಮ್ಮನ್ನು ವೈಷ್ಯಮ್ಯದಿಂದ ನೊಡುತ್ತಾರೆ: ಬೊಮ್ಮಾಯಿ

ಅಲೆಮಾರಿ ಸಮುದಾಯಗಳ ಮನವಿ
ನಿವೃತ್ತ ನ್ಯಾ. ನಾಗಮೋಹನ್  ದಾಸ್ ಅವರ ಶಿಫಾರಸಿನಂತೆ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ  ಅಲೆಮಾರಿ ಸಮುದಾಯಕ್ಕೆ ಪ್ರತ್ಯೇಕ ಶೇಕಡ 1 ರಷ್ಟು ಮೀಸಲಾತಿ ಕಲ್ಪಿಸಲು ಆದ್ಯತೆ ನೀಡುವಂತೆ, ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ  ಪ್ರತ್ಯೇಕ ನಿಗಮ ರಚನೆ  ಹಾಗೂ ಅಲೆಮಾರಿ ಸಮುದಾಯಗಳಿಗೆ ವಿಶೇಷ ಆರ್ಥಿಕ ಪ್ಯಾಕೇಜ್ ನೀಡುವ ಕುರಿತಂತೆ ಮುಖ್ಯಮಂತ್ರಿ ಅವರಲ್ಲಿ ನಿಯೋಗ ಮನವಿ ಮಾಡಿತು.

ಈ ಸಭೆಯಲ್ಲಿ ಸಚಿವರಾದ ಎಚ್ ಸಿ ಮಹದೇವಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಮಾಜಿ ಸಚಿವರಾದ ಎಚ್ ಆಂಜನೇಯ, ವಿವಿಧೆಡೆಗಳಿಂದ ಆಗಮಿಸಿದ್ದ ಅಲೆಮಾರಿ ಸಮುದಾಯಗಳ ಮುಖಂಡರುಗಳು ಉಪಸ್ಥಿತರಿದ್ದರು.

About the Author

Praja Vahini

Editor

View All Posts

Spread the love

Post navigation

Previous: ದರ್ಶನ್ ಪವಿತ್ರ ಗೌಡಗೆ ಮದುವೆಯಾಗಿದ್ರಾ? ಹಳೆ ಫೋಟೋ ವೈರಲ್!
Next: ನಮ್ಮ ನೆರೆ ಹೊರೆಯವರೆ ನಮ್ಮನ್ನು ವೈಷ್ಯಮ್ಯದಿಂದ ನೊಡುತ್ತಾರೆ: ಬೊಮ್ಮಾಯಿ

Views:

54

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.