Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಜೆಪಿಗೂ RSS ಗೂ ಏನು ಸಂಬಂಧ?: ಪ್ರಿಯಾಂಕ್ ಖರ್ಗೆ
  • Politics
  • State
  • ಕಲಬುರಗಿ

ಬಿಜೆಪಿಗೂ RSS ಗೂ ಏನು ಸಂಬಂಧ?: ಪ್ರಿಯಾಂಕ್ ಖರ್ಗೆ

Praja Vahini October 31, 2025 1 minute read
WhatsApp Image 2025-10-31 at 16.45.23
Spread the love

ಕಲಬುರಗಿ: ಸರ್ಕಾರದ ಆದೇಶದ ನಂತರ, ಆರ್ ಎಸ್ ಎಸ್ ಹಾಗೂ ಬಿಜೆಪಿಯವರು ನನ್ನ ಮೇಲೆ‌ ಮುಗಿಬಿದ್ದರು. ಬಿಜೆಪಿಗೂ ಆರ್ ಎಸ್ ಎಸ್ ಗೂ ಏನು ಸಂಬಂಧ.? ನಾನು ಪತ್ರ ಬರೆದ ನಂತರ ಸಾವಿರಾರು ಕರೆಗಳು ಬಂದವು. ಖರ್ಗೆ ಇದನ್ನು ಬಿಜೆಪಿಯವರು ಪ್ರಚಾರಕ್ಕೆ ಮಾಡುತ್ತಿದ್ದಾರೆ ಎಂದರು. ನಾನು ಸರ್ಕಾರದಲ್ಲಿ‌ ಸಚಿವನಾಗಿದ್ದೇನೆ‌ ನನಗೆ ಯಾಕೆ ಪ್ರಚಾರ? ಒಬ್ಬ ಕಾಲ್ ಮಾಡಿ ನನಗೆ ಜೀವ ಬೆದರಿಕೆ ಹಾಕಿದ್ದಾನೆ. ನನ್ನ ಕುಟುಂಬ ವರ್ಗದವರನ್ನು ಕೂಡಾ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದನ್ನು ಬಿಜೆಪಿಯ ಯಾರೊಬ್ಬರೂ ಖಂಡಿಸಲಿಲ್ಲ ಯಾಕೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

ಕಲಬುರಗಿಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ಪೊಲೀಸರು ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಿಕೊಂಡು ಅವನನ್ನು ಅರೆಸ್ಟ್ ಮಾಡಿದ್ದಾರೆ. ನನಗೆ ಕರೆ ಮಾಡಿದ ವ್ಯಕ್ತಿ ತನ್ನ ಕಣಕಣದಲ್ಲಿಯೂ ಆರ್ ಎಸ್ ಎಸ್ ಇದೆ ಅಂದಿದ್ದಾನೆ. ಪೊಲೀಸರು ಸ್ವಯಂ ಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದಾರೆ. ತನಿಖೆ‌ ನಡೆಯುತ್ತಿದೆ. ಅರೆಸ್ಟ್ ಆದ ವ್ಯಕ್ತಿ ಬಡ ಕುಟುಂಬದವನು. ಆತನನ್ನು ಪ್ರಚೋದಿಸಿದವರು ಯಾರು ಅವರಿಗೂ ಶಿಕ್ಷೆಯಾಗಬೇಕಲ್ಲವೇ? ಎಂದರು.

ಆರ್ ಎಸ್ ಎಸ್ ನವರು ಪಥಸಂಚಲನೆ ವಿಚಾರ ಕುರಿತು ಪ್ರತಿಷ್ಠೆಯನ್ನಾಗಿ ಮಾಡಿಕೊಂಡಿದ್ದಾರೆ. ಅದೇ ದಿನದಂತೆ ಅಲ್ಲೇ ಪಥಸಂಚಲನ ಮಾಡುತ್ತೇವೆ ಎಂದು ಆರ್ ಎಸ್ ಎಸ್ ಹೇಳಿದೆ. ಈ ಬಗ್ಗೆ ಕೆಲವು ಸಂಘಟನೆಗಳು ಕೂಡಾ ಅದೇ ದಿನ ಅಲ್ಲೇ ತಾವೂ ಪಥಸಂಚಲನ ಮಾಡುವುದಾಗಿ ಅರ್ಜಿ ಸಲ್ಲಿಸಿವೆ.‌ ಪ್ರಸ್ತುತ ಈ ವಿಚಾರ ಹೈಕೋರ್ಟ್ ನಲ್ಲಿದೆ. ಹೈಕೋರ್ಟ್ ತಿರ್ಮಾನ ಏನು ಬರುತ್ತದೆಯೋ ಅದನ್ನು ಎಲ್ಲರೂ ಪಾಲಿಸಬೇಕಾಗುತ್ತದೆ ಎಂದರು.

ಪಥಸಂಚಲನದಲ್ಲಿ ಭಾಗವಹಿಸಲು ಕೆಲವರಿಗೆ ಕರೆ ನೀಡಲಾಗಿದೆ. ಅದರಲ್ಲೂ ವಿದ್ಯಾರ್ಥಿಗಳಿಗೆ ಕಾಲ್ ಮಾಡಿದ್ದಾರೆ. ಆ ಬಗ್ಗೆ ವಿಚಾರಿಸಲಾಗಿ, ಅವರಿಗೆ ದೇಶಭಕ್ತಿ ಇತ್ಯಾದಿ ಕುರಿತು ಹೇಳಲಾಗುತ್ತಿದೆ ಎನ್ನುವುದನ್ನು ಹೊರತುಪಡಿಸಿ ಬೇರೆ ಹೇಳಿರಲಿಲ್ಲ ಎನ್ನುವ ಮಾಹಿತಿ ಬಂದಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಹಾಗೂ ಸಮಾಜದ ಶಾಂತಿ ಕಾಪಾಡಲು ಆರ್ ಎಸ್ ಎಸ್ ಅಷ್ಟೇ ಅಲ್ಲ ಬೇರೆ ಯಾವುದೇ ಸಂಘಟನೆಗಳಿಗೂ ಸರ್ಕಾರಿ ಜಾಗ ಬಳಸಿಕೊಳ್ಳದಂತೆ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ ಅದರಲ್ಲೇನು ತಪ್ಪಿದೆ? ಎಂದರು. ಇದನ್ನೂ ಓದಿ: ಅಲೆಮಾರಿ ಸಮುದಾಯಕ್ಕೆ ಶೇ. 1 ರಷ್ಟು ಮೀಸಲಾತಿ ಒದಗಿಸಲು ಸರ್ಕಾರ ಬದ್ಧ : ಸಿಎಂ

ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಕಾರ್ಯಕ್ರಮ ನಡೆಸದಂತೆ ಹೈಕೋರ್ಟ್ ಆದೇಶ ಇದೆ. ಆದರೆ, ಬೆಂಗಳೂರಿನಲ್ಲಿ ಆರ್ ಎಸ್ ಎಸ್ ನವರು ಪೊಲೀಸರ ಅನುಮತಿ ಪಡೆಯದೆ ಕೇವಲ ಮಾಹಿತಿಗಾಗಿ ಎಂದು ಬರೆದಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಆಕ್ಷೇಪಿಸಿದ್ದಾರೆ. ಯಾರಾದರೂ ಸಾವಿರಾರು ಜನರು ಸೇರಬೇಕಾದರೆ ಪೊಲೀಸ್ ಇಲಾಖೆ ಅನುಮತಿ ಪಡೆಯಬೇಕೇ ಹೊರತು ಮಾಹಿತಿ ನೀಡುವಂತಿಲ್ಲ. ಆರ್ ಎಸ್ ಎಸ್ ಇದನ್ನು ಅನುಸರಿಸುವುದಾದರೆ, ನಾವೂ ಅನುಸರಿಸುತ್ತೇವೆ ಎಂದು ಇತರರು ಪ್ರಶ್ನೆ ಮಾಡಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

 

 

About the Author

Praja Vahini

Editor

View All Posts

Spread the love

Post navigation

Previous: ನಮ್ಮ ನೆರೆ ಹೊರೆಯವರೆ ನಮ್ಮನ್ನು ವೈಷ್ಯಮ್ಯದಿಂದ ನೊಡುತ್ತಾರೆ: ಬೊಮ್ಮಾಯಿ
Next: ಡಿ.ಕೆ.ಶಿವಕುಮಾರ್ ಗೆ ಬೇಗ ಸಿಎಂ ಆಗಬೇಕೆಂಬುದು ಬಿಟ್ಟರೆ ತಲೆಯಲ್ಲಿ ಇನ್ನೇನೂ ಇಲ್ಲ: ಶೋಭಾ ಕರಂದ್ಲಾಜೆ

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.