ಬೆಂಗಳೂರು: ಭಾರತ ತಂಡವು 52 ವರ್ಷಗಳ ಬಳಿಕ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಭಾರತ ಮಹಿಳಾ ತಂಡ ಚೊಚ್ಚಲ ಬಾರಿ ವಿಶ್ವಕಪ್ ಮುಡಿಗೇರಿಸಿಕೊಂಡಿದೆ. ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಮ್ಯಾಚ್ನಲ್ಲಿ ಸೌತ್ ಆಫ್ರಿಕಾ ತಂಡವನ್ನು ಸೋಲಿಸಿ ಟೀಮ್ ಇಂಡಿಯಾ ಐತಿಹಾಸಿಕ ಸಾಧನೆ ಮಾಡಿದೆ. ಇದರಿಂದ ಇಡೀ ದೇಶದಾದ್ಯಂತ ಕ್ರಿಕೆಟ್ ಅಭಿಮಾನಿಗಳ ಸಂಭ್ರಮ ಮನೆ ಮಾಡಿದೆ.
ಇನ್ನು ಭಾರತ ತಂಡವು ಏಕದಿನ ವಿಶ್ವಕಪ್ ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ.
ಯೆಸ್…ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾರತದ ಮಹಿಳಾ ತಂಡದ ಕ್ರಿಕೆಟ್ ಆಟಗಾರ್ತಿಯರಿಗೆ ಅಭಿನಂದನೆ ತಿಳಿಸಿದ್ದು, ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕುವ ಮೂಲಕ ಭಾರತೀಯ ಮಹಿಳಾ ಕ್ರಿಕೆಟ್ ಆಟಗಾರ್ತಿಯರಿಗೆ ಶುಭಕೋರಿದ್ದಾರೆ.
ಭಾರತೀಯ ಮಹಿಳಾ ಕ್ರಿಕೆಟ್ ತಂಡ ಅದ್ಭುತ ಆಟದ ಮೂಲಕ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ವಿಶ್ವವಿಜೇತ ಭಾರತೀಯ ಕ್ರಿಕೆಟ್ ಆಟಗಾರ್ತಿಯರಿಗೆ ಅಭಿನಂದನೆಗಳು. ಇದನ್ನೂ ಓದಿ: ಬಾಂಗ್ಲಾ ವಲಸಿಗರ ಗಡಿಪಾರಿಗೆ ಅರವಿಂದ ಲಿಂಬಾವಳಿ ಹೇಳಿದ್ದೇನು?
ಇಡೀ ಪಂದ್ಯಾವಳಿಯುದ್ದಕ್ಕೂ ಅತ್ಯಂತ ಸಂಘಟಿತ ಪ್ರದರ್ಶನ ನೀಡುತ್ತಾ ಬಂದಿದ್ದ ಭಾರತೀಯ ಆಟಗಾರ್ತಿಯರು ನಿಜಕ್ಕೂ ಈ ಪ್ರಶಸ್ತಿಗೆ ಅರ್ಹರು. ಕ್ರಿಕೆಟ್ ಪ್ರೇಮಿಯಾದ ನನಗಿದು ಹೆಚ್ಚು ಖುಷಿ ಕೊಟ್ಟಿದೆ. ಇತಿಹಾಸ ಸೃಷ್ಟಿಯಾದ ಈ ದಿನ ಬಹುಕಾಲ ನೆನಪಿನಲ್ಲಿ ಉಳಿಯುವಂತಹುದ್ದು ಎಂದು ಬರೆದುಕೊಂಡಿದ್ದಾರೆ.
