Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶಿಕ್ಷಣ, ಪ್ರತಿಭೆ ಯಾರ ಸ್ವತ್ತೂ ಅಲ್ಲ: ಸಿಎಂ
  • Politics
  • State
  • ಮೈಸೂರು

ಶಿಕ್ಷಣ, ಪ್ರತಿಭೆ ಯಾರ ಸ್ವತ್ತೂ ಅಲ್ಲ: ಸಿಎಂ

Praja Vahini November 3, 2025
WhatsApp Image 2025-11-03 at 13.21.56
Spread the love

ಮೈಸೂರು: ಶಿಕ್ಷಣ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಎಲ್ಲರಲ್ಲೂ ಪ್ರತಿಭೆ ಇದೆ. ಅಂಬೇಡ್ಕರ್ ಮತ್ತು ವಾಲ್ಮೀಕಿ, ವ್ಯಾಸರು ಇದಕ್ಕೆ ಉದಾಹರಣೆ ಎಂದರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ಸ್ಥಾಪಿಸಿರುವ ದೇವರಾಜ ಅರಸು ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದ ಅವರು, ಅವಕಾಶ ವಂಚಿತರಿಗೆ ಅವಕಾಶ ಒದಗಿಸಿಕೊಡುವುದು ಪ್ರತಿಯೊಬ್ಬ ರಾಜಕಾರಣಿಯ ಹೊಣೆಗಾರಿಕೆ ಆಗಬೇಕು. ಅರಸು ಅವರು ಅತ್ಯಂತ ಕೆಳಮಟ್ಟದಲ್ಲಿರುವ ಜನ ಸಮುದಾಯಗಳ ಪ್ರತಿನಿಧಿಗಳನ್ನು ವಿಧಾನಸೌಧದ ಮೆಟ್ಟಿಲು ಹತ್ತಿಸುವಂತೆ ಮಾಡಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅರಸು ಅವರು ತಳ ಸಮುದಾಯಗಳಿಗೆ ಅವಕಾಶಗಳನ್ನು ಸೃಷ್ಟಿಸಿದರು. ಆ ಅವಕಾಶಗಳಿಂದ ಬಹಳ ಮಂದಿ ಸಮಾಜದ ಮುಖ್ಯವಾಹಿನಿಗೆ ಬಂದರು. ಸುದೀರ್ಘ ಅವಧಿಯ ಕಾಲ ಮುಖ್ಯಮಂತ್ರಿಗಳಾಗಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸಿದ್ದರು ಎಂದು ವಿವರಿಸಿದರು. ಇದನ್ನೂ ಓದಿ:  ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿದವರ ಗುರುತಿಸಿ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ: ಸಿಎಂ

ಬಹುಸಂಖ್ಯಾತ ಶೂದ್ರ ಸಮುದಾಯವನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಿದ್ದರಿಂದ ಅಸಮಾನತೆ ಸೃಷ್ಟಿಯಾಗಿದೆ. ನಮ್ಮ ಸರ್ಕಾರ ಅಸಮಾನತೆ ನಿವಾರಿಸಿ ಸಮಾನ ಅವಕಾಶಗಳನ್ನು ಸೃಷ್ಟಿಸಲು ನಿರಂತರವಾಗಿ ಶ್ರಮಿಸುತ್ತಿದೆ, ಜನಪರ, ಸಾಮಾಜಿಕ ನ್ಯಾಯದ ಪರ ಯೋಜನೆಗಳನ್ನು ರೂಪಿಸಿ ಜಾರಿಗೆ ತರುತ್ತಿದೆ ಎಂದರು.

ನಮ್ಮ ರಾಜ್ಯಕ್ಕೆ “ಕರ್ನಾಟಕ” ಎಂದು ನಾಮಕರಣ ಆಗಿದ್ದು ಅರಸು ಅವರ ಕಾಲದಲ್ಲಿ. ಇದರ ಸುವರ್ಣ ಸಂಭ್ರಮ ಮಾಡಿದ್ದು ನಮ್ಮ ಸರ್ಕಾರ ಎಂದು ಸ್ಮರಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಎಲೆಮರೆಕಾಯಿಯಂತೆ ಸೇವೆ ಸಲ್ಲಿಸಿದವರ ಗುರುತಿಸಿ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ: ಸಿಎಂ
Next: ಇಂದಾದ್ರೂ ನಿರ್ಧಾರವಾಗುತ್ತಾ ದರ್ಶನ್ ಭವಿಷ್ಯ?

Views:

42

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.