ಬೆಳಗಾವಿ: ಸತತ ಏಳು ದಿನಗಳಿಂದ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರ ಗ್ರಾಮದಲ್ಲಿ ಕಬ್ಬು ಬೆಳೆಗಾರರು ಕಬ್ಬಿಗೆ ನಿಗದಿತ ಬೆಂಬಲ ಬೆಲೆ ಕೊಡಿಸಬೇಕು ಎಂದು ಪ್ರತಿಭಟನೆಯನ್ನು ಕೈಗೊಂಡಿದ್ದಾರೆ
ಹೌದು, ಬೆಳಗಾವಿಯಲ್ಲಿ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದೆ. ಕೇವಲ ರೈತರು ಪ್ರತಿಭಟನೆ ಮಾಡುವುದಲ್ಲದೆ ನಿನ್ನೆಯಿಂದ (ಮಂಗಳವಾರ ನ.03) ಬಿಜೆಪಿ ನಾಯಕರು ಕೂಡ ರೈತರಿಗೆ ಸಾತ್ ನೀಡಿದ್ದಾರೆ. ಇದನ್ನೂ ಓದಿ: ಬೆಂಗಳೂರು ಮೆಟ್ರೋ ಪ್ರಯಾಣ ದರಗಳ ಕುರಿತು ಚರ್ಚೆ
ಬಿಜೆಪಿ ರಾಜ್ಯಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಇನ್ನೂ ಹಲವಾರು ಬಿಜೆಪಿ ನಾಯಕರು ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಿ ಕೊರೆಯುವ ಚಳಿಯಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ಗುರ್ಲಾಪುರ ಕ್ರಾಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋರಾಟ ನಡೆಯುತ್ತಿದ್ದು, ಮನೆ, ಮಠ ಬಿಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲೇ ರೈತರು ಜೀವನ ನಡೆಸುತ್ತಿದ್ದಾರೆ. ರಸ್ತೆಯಲ್ಲಿಯೇ ಊಟ, ನಿದ್ದೆ ಎಲ್ಲವೂ ನಡೆಯುತ್ತಿದೆ.
