Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೈಸೂರಿನಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಯದುವೀರ್ ಒಡೆಯರ್ ವಿರೋಧ
  • Politics
  • State
  • ಯದಗಿರಿ

ಮೈಸೂರಿನಲ್ಲಿ ಫ್ಲೈಓವರ್ ನಿರ್ಮಾಣಕ್ಕೆ ಯದುವೀರ್ ಒಡೆಯರ್ ವಿರೋಧ

Praja Vahini November 5, 2025 1 minute read
WhatsApp Image 2025-11-05 at 13.16.33
Spread the love

ಮೈಸೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಬೆಂಗಳೂರ ನಗರದಲ್ಲಿ ಹಲವಾರು ರಸ್ತೆಗಳ ಕಾಮಗಾರಿಗೆ ಹಾಗೂ ಮೆಟ್ರೋ ಕಾಮಗಾರಿಗಳಿಗೆ ಸೇರಿದಂತೆ ಇನ್ನು ಹಲವಾರು ರೀತಿ ಕಾಮಗಾರಿಗಳು ನಡೆಸುತ್ತಿವೆ. ಅದರಂತೆ ಇದೀಗ ಮೈಸೂರಿನಲ್ಲೂ ಕೂಡ ಎರಡು ಫ್ಲೈ ಓವರ್ ನಿರ್ಮಾಣ ಮಾಡಲು ಸರಕಾರ ಮುಂದಾಗಿದ್ದು, ಇದಕ್ಕೆ ಬಿಜೆಪಿ ಸಂಸದ ಯದುವೀರ್ ಒಡೆಯರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿರುವ ಅವರು, ಜೆಎಲ್‌ಬಿ ರಸ್ತೆ, ವಿನೋಬಾ ರಸ್ತೆಗಳು ಪಾರಂಪರಿಕ ರಸ್ತೆಗಳಾಗಿವೆ. ಈ ರಸ್ತೆಗಳನ್ನು ಹಾಗೆಯೇ ಉಳಿಸಿಕೊಳ್ಳಬೇಕು. ಜನಾಭಿಪ್ರಾಯ ಪಡೆಯದೇ ಈ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ. ಡಿಪಿಆರ್ ಕೂಡ ಸಿದ್ಧಪಡಿಸುತ್ತಿದ್ದಾರೆ. ಇದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದಿದ್ದಾರೆ.

ವಿನೋಬಾ ರಸ್ತೆಯಲ್ಲಿ ಫ್ಲೈ ಓವರ್ ನಿರ್ಮಿಸಲು ಮುಂದಾದರೆ ಮರಗಳ ಹನನ ಆಗಲಿದೆ. ಹಾಗಾಗಿ ಈ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣ ಮಾಡಬಾರದು. ಅಭಿವೃದ್ಧಿ ನೆಪದಲ್ಲಿ ಮೈಸೂರಿನ ಸೌಂದರ್ಯ ಹಾಳು ಮಾಡಬಾರದು. ಪಾರಂಪರಿಕ ನಗರಿಯ ಗುರುತು ಉಳಿಸಿಕೊಳ್ಳಬೇಕು. ಸಿಎಂ ಕೂಡ ಗ್ರೇಟರ್ ಮೈಸೂರು ಸಭೆಯಲ್ಲಿ ಮೈಸೂರಿನ ಪಾರಂಪರಿಕತೆ ಉಳಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸಿಎಂ ಅವರ ಸಲಹೆಯಂತೆ ಅಧಿಕಾರಿಗಳು ನಡೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಫ್ಲೈಓವರ್ ನಿರ್ಮಾಣವೇ ಶಾಶ್ವತ ಪರಿಹಾರವಲ್ಲ. ಮೆಟ್ರೋ ಮಾರ್ಗ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಮುಂಬೈ ಮಾದರಿಯಲ್ಲಿ ಅಂಡರ್ ಗ್ರೌಂಡ್ ನಲ್ಲಿ ಮೆಟ್ರೋ ನಿರ್ಮಾಣ ಮಾಡಲಿ. ಮೈಸೂರಿನ ಜನಸಂಖ್ಯೆಗೆ ಅನುಗುಣವಾಗಿ ಕಾಮಗಾರಿ ಕೈಗೊಳ್ಳಲಿ. ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಸ್ಥಳೀಯರಿಗೆ ಅನುಕೂಲವಾಗುವಂತೆ ಅಭಿವೃದ್ಧಿ ಕಾಮಗಾರಿ ಮಾಡಲಿ. ಜನರ ವಿರೋಧದ ನಡುವೆ ಫ್ಲೈ ಓವರ್ ಕಾಮಗಾರಿ ಕೈಗೆತ್ತಿಕೊಂಡರೆ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಹಾಗೂ ಜನರ ಸಹಕಾರದೊಂದಿಗೆ ಹೋರಾಟ ರೂಪಿಸುತ್ತೇವೆ ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ:  ರೈತರ ಅಹೋರಾತ್ರಿ ಪ್ರತಿಭಟನೆ; ಕೊರೆಯುವ ಚಳಿಯಲ್ಲಿ ಮಲಗಿದ್ದ ಬಿಜೆಪಿ ನಾಯಕರು

ಗ್ರೇಟರ್ ಮೈಸೂರಿನಿಂದ ಒಳಿತಾಗಲಿದೆ. ಆದರೆ ಗ್ರೇಟರ್ ಮೈಸೂರು ನಿರ್ಮಾಣ ಮಾಡುವಾಗ ಪೂರ್ವ ತಯಾರಿ ಮಾಡಿಕೊಳ್ಳಬೇಕು. ಬೆಂಗಳೂರು ಮಾದರಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಬಾರದು ಎಂದು ಸಂಸದ ಯದುವೀರ್ ಒಡೆಯರ್ ಹೇಳಿದ್ದಾರೆ.

 

About the Author

Praja Vahini

Editor

View All Posts

Spread the love

Post navigation

Previous: ರೈತರ ಅಹೋರಾತ್ರಿ ಪ್ರತಿಭಟನೆ; ಕೊರೆಯುವ ಚಳಿಯಲ್ಲಿ ಮಲಗಿದ್ದ ಬಿಜೆಪಿ ನಾಯಕರು
Next: ಡಿಕೆಶಿ ಭೇಟಿ ಮಾಡಿದ ಉಪೇಂದ್ರ

Views:

21

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.