ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ ಇದೀಗ ಕೊನೆಯ ಹಂತ ತಲುಪಿದ್ದು, ಸತತ ಆರು ತಿಂಗಳಿಂದ ತನಿಖೆ ನಡೆಸುತ್ತಿರುವ ಡಿಆರ್ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ ನಡೆಸಿದೆ.
123 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮವಾಗಿ ಸಾಗಾಟ ಮಾಡಿರೋದು ಪ್ರಕರಣದ ತನಿಖೆಯ ವೇಳೆ ಬೆಳಕಿಗೆ ಬಂದಿದ್ದು, ಈಗಾಗಲೇ 5 ಜನ ಆರೋಪಿಗಳಿಗೂ ಕೂಡ ಶೋಕಾಸ್ ನೋಟಿಸ್ ನೀಡಿದ್ದ ಡಿಆರ್ಐ ಕೇವಲ ರನ್ಯಾ ರಾವ್ 102 ಕೋಟಿ ಮೌಲ್ಯದ ಚಿನ್ನವನ್ನ ಅಕ್ರಮ ಮಾಡಿದ್ದಾರೆ ಅನ್ನೋದು ಸ್ಪಷ್ಟವಾಗಿ ತನಿಖೆಯಲ್ಲಿ ಅನಾವರಣ ಆಗಿದೆ. ಇದನ್ನೂ ಓದಿ: ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್ ಫಿಕ್ಸ್!?
ಇನ್ನುಳಿದ ನಾಲ್ವರು ಆರೋಪಿಗಳಿಗೂ ಕೂಡ ಪ್ರತ್ಯೇಕ ಶೋಕಾಸ್ ನೋಟಿಸ್ ನೀಡಲಾಗಿತ್ತು. ಈಗ ಪ್ರಕರಣ ಕೊನೆಯ ಹಂತಕ್ಕೆ ತಲುಪಿದ್ದು ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲು ತಯಾರಿ ನಡೆದಿದೆ.
