Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ಆಲಸ್ಯ ಮಾಡಿದ್ದಾರೆ: ಬಿವೈವಿ
  • Bangalore
  • Politics
  • State

ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ಆಲಸ್ಯ ಮಾಡಿದ್ದಾರೆ: ಬಿವೈವಿ

Praja Vahini November 7, 2025 1 minute read
WhatsApp Image 2025-11-07 at 17.26.14
Spread the love

ಬೆಂಗಳೂರು: ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಯುದ್ಧ ಬಂದಾಗ ಶಸ್ತ್ರಾಭ್ಯಾಸ ಮಾಡುವ ಬದಲಾಗಿ ಕಬ್ಬು ಅರೆಯುವ ಒಂದು ಅಥವಾ ಎರಡು ತಿಂಗಳ ಮೊದಲೇ ಈ ಸಂಧಾನ ಸಭೆ ಕರೆಯಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುರ್ಚಿಗೆ ಎಷ್ಟು ತಲೆ ಕೆಡಿಸಿಕೊಂಡಿದ್ದೀರೋ ಅದರ ಶೇ. 10ರಷ್ಟನ್ನು ಕಬ್ಬು ಬೆಳೆಗಾರರ ಬಗ್ಗೆ ತಲೆ ಕೆಡಿಸಿಕೊಳ್ಳಿ. ಆಗ ರೈತರು ನಿಮ್ಮನ್ನು ಪೂಜೆ ಮಾಡುತ್ತಾರೆ. ನನಗೆ ಇದರಲ್ಲಿ ರಾಜಕೀಯ ಮಾಡುವ ಅವಶ್ಯಕತೆ ಖಂಡಿತ ಇಲ್ಲ ಎಂದು ನುಡಿದರು. ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡುವುದಷ್ಟೇ ನಮ್ಮ ಬದ್ಧತೆ ಎಂದರು.

ಕಬ್ಬು ಬೆಳೆಗಾರರು ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ಬರಬಾರದಿತ್ತು. ಕಬ್ಬು ಬೆಳೆಗಾರರ ವಿಚಾರದಲ್ಲಿ ಮುಖ್ಯಮಂತ್ರಿಗಳು ಆಲಸ್ಯ ಮಾಡಿದ್ದಾರೆ. ಅಸಡ್ಡೆ ತೋರಿದ್ದಾರೆ. ಈಗ ಹೋರಾಟ ತೀವ್ರಗೊಂಡಿದೆ. ಬೀದಿಗಿಳಿದು ಪ್ರತಿಭಟನೆ ನಡೆಯುತ್ತಿದೆ. ಈಗ ನೀವು ಪ್ರಧಾನಿಯವರಿಗೆ ಪತ್ರ ಬರೆದು ಕೇಂದ್ರ ಸರಕಾರದ ಮೇಲೆ ದೂರುವ ಪ್ರಯತ್ನ ಮಾಡುತ್ತೀರಾ ಎಂದು ವಿಜಯೇಂದ್ರ ಅವರು ಪ್ರಶ್ನಿಸಿದರು. ಇದನ್ನೂ ಓದಿ:  ನಾವು ರೈತರ ಪರವಾಗಿ ನಿಲ್ಲುತ್ತೇವೆ: ಸಿಎಂ

ಎಫ್‍ಆರ್‍ ಪಿ ಯನ್ನು ಪ್ರಧಾನಿಯವರೊಬ್ಬರೇ ತೀರ್ಮಾನ ಮಾಡುವುದಿಲ್ಲ. ಎಲ್ಲ ರಾಜ್ಯಗಳ ಅಧಿಕಾರಿಗಳು, ತಜ್ಞರ ಅಭಿಪ್ರಾಯ ಪಡೆದು ಇದನ್ನು ತೀರ್ಮಾನ ಮಾಡುತ್ತಾರೆ. ಕೇಂದ್ರ ಎಷ್ಟೇ ಎಫ್‍ಆರ್‍ಪಿ ನಿಗದಿ ಮಾಡಿದರೂ ರಾಜ್ಯ ಸಲಹಾ ಬೆಲೆ (ಎಸ್‍ಎಪಿ) ಹೆಚ್ಚು ದರ ಕೊಡಲು ಅವಕಾಶವಿದೆ ಎಂದು ತಿಳಿಸಿದರು. ಮುಖ್ಯಮಂತ್ರಿಗಳು ಮಾನವೀಯತೆ ದೃಷ್ಟಿಯಿಂದ ಯೋಚಿಸಬೇಕು ಎಂದು ಒತ್ತಾಯಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ನಾವು ರೈತರ ಪರವಾಗಿ ನಿಲ್ಲುತ್ತೇವೆ: ಸಿಎಂ
Next: ಮೈಸೂರು ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ಹುಲಿ ದಾಳಿಗೆ ಮೂರು ಬಲಿ

Views:

27

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.