Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಬ್ಬು ಬೆಳೆಗಾರರ ಹಠಕ್ಕೆ ಮಣಿದ ಸರ್ಕಾರ
  • Bangalore
  • Politics
  • State

ಕಬ್ಬು ಬೆಳೆಗಾರರ ಹಠಕ್ಕೆ ಮಣಿದ ಸರ್ಕಾರ

Praja Vahini November 8, 2025 1 minute read
WhatsApp Image 2025-11-08 at 11.40.14
Spread the love

ಬೆಂಗಳೂರು: ಬೆಳಗಾವಿಯಲ್ಲಿ ಪ್ರತಿಭಟನಾನಿರತ ಕಬ್ಬು ಬೆಳೆಗಾರರುಮತ್ತು ರೈತ ಸಂಘಟನೆಗಳ ಪರವಾಗಿ ಸತತ 7 ಗಂಟೆಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತರ ಪರ ಖಚಿತ ನಿಲುವು ತೆಗೆದುಕೊಂಡು, ಟನ್ ಕಬ್ಬಿಗೆ 3300 ರೂ ಕೊಡಲು ನಿರ್ಧರಿಸಿದೆ.  ಸತತ ಏಳು ಗಂಟೆಗಳ ನಿರಂತರ ಸಭೆ ಬಳಿಕ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ನಿರ್ಧಾರ ಪ್ರಕಟಿಸಿದರು.

ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು ತಲಾ 50ರೂ ಸೇರಿಸಿ ರೈತರಿಗೆ ಟನ್ ಗೆ 3300 ಕೊಡಲು ತೀರ್ಮಾನ ಮಾಡಲಾಗಿದೆ ಎಂದರು. ರಾಜ್ಯದಲ್ಲಿ 81 ಸಕ್ಕರೆ ಕಾರ್ಖಾನೆಗಳಿವೆ. ಇವುಗಳಲ್ಲಿ 11 ಸಹಕಾರಿ ಕಾರ್ಖಾನೆಗಳು ಒಂದು ಕಾರ್ಖಾನೆ ಮಾತ್ರ ಸರ್ಕಾರಿ ಸೌಮ್ಯದ್ದು. ಉಳಿದವೆಲ್ಲಾ ಖಾಸಗಿ ಸಕ್ಕರೆ ಕಾರ್ಖಾನೆಗಳಾಗಿವೆ.

ಅಕ್ಟೋಬರ್ 30ರಿಂದ ಬೆಳಗಾವಿ ರೈತರು ಕೇಂದ್ರ ಸರ್ಕಾರದ FRP ದರ ವಿರೋಧಿಸಿ ಇನ್ನೂ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಪ್ರತಿಭಟನಾ ನಿರತ ರೈತ ಮುಖಂಡರ ಜೊತೆಗೆ ಬೆಳಗಾವಿ ಜಿಲ್ಲಾಧಿಕಾರಿಗಳು ಮಾತುಕತೆ ನಡೆಸಿದ್ದರು. ಆದರೆ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಸಚಿವರನ್ನು ಮಾತುಕತೆಗೆ ಕಳುಹಿಸಿದ್ದೆ.

ಪ್ರತಿಭಟನಾ 10.25 ಇಳುವರಿ ಇರುವ ಕಬ್ಬಿಗೆ 3100 ರೂ, 11.25 ಇಳುವರಿ ಕಬ್ಬಿಗೆ 3200 ರೂ ಕೊಡುವುದಾಗಿ ತಿಳಿಸಿದ್ದಾರೆ. ಇದಕ್ಕೆ ಪ್ರತಿಭಟನಾ ರೈತರು ಒಪ್ಪಿಲ್ಲ. ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್ ರಾದ, ಸಕ್ಕರೆ ಸಚಿವರಾದ ಶಿವಾನಂದ ಪಾಟೀಲರು ಮತು ಕತೆ ನಡೆಸಿದರೂ ರೈತರು ಒಪ್ಪಿಲ್ಲ. ಬಳಿಕ ಕ್ಯಾಬಿನೆಟ್ ನಲ್ಲಿ ಚರ್ಚಿಸಿ, “ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಮುಖಂಡರ ಜೊತೆ ಚರ್ಚೆ ನಡೆಸುವ ಜೊತೆಗೆ ಸಮಸ್ಯೆ ಸೃಷ್ಟಿಸಿರುವ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ತೀರ್ಮಾನಿಸಲಾಗಿತ್ತು ಎಂದರು.

ಕ್ಯಾಬಿನೆಟ್ ತೀರ್ಮಾನದಂತೆ ನಿನ್ನೆ( ಶುಕ್ರವಾರ ನ 07) ಬೆಳಗ್ಗೆಯಿಂದ ಸತತ 7 ಗಂಟೆ ಕಾಲ ಸಭೆ ನಡೆಸಿದ್ದೇವೆ. ಈ ವೇಳೆ ಕಾರ್ಖಾನೆ ಮಾಲೀಕರು ಮತ್ತು ರೈತರು ತಮ್ಮ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಇಬ್ಬರೂ ಕೇಂದ್ರ ಸರ್ಕಾರದ ನೀತಿಗಳಿಂದ ಆಗಿರುವ ನಷ್ಟ ಮತ್ತು ಸಮಸ್ಯೆಗಳನ್ನೂ ಹೇಳಿಕೊಂಡಿದ್ದಾರೆ. ಕೇಂದ್ರದಿಂದ ಆಗುತ್ತಿರುವ ತೊಂದರೆ ಬಗ್ಗೆ ಚರ್ಚಿಸಲು ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನಿಸಿದ್ದೇವೆ. ಇದಕ್ಕೆ ಮಾಲೀಕರುಗಳೂ ಒಪ್ಪಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ಕಬ್ಬು ಬೆಳೆಗಾರರ ವಿಚಾರದಲ್ಲಿ ಸಿಎಂ ಆಲಸ್ಯ ಮಾಡಿದ್ದಾರೆ: ಬಿವೈವಿ

ಕಬ್ಬಿನ ಇಳುವರಿ ಪ್ರಮಾಣ ಜಿಲ್ಲೆಯಿಂದ ಜಿಲ್ಲೆಗೆ ವ್ಯತ್ಯಾಸ ಆಗುತ್ತದೆ. ಆದರೆ, ಎಲ್ಲಾ ಇಳುವರಿಗೂ 100ರೂ ಹೆಚ್ಚಳ ಆಗಲಿದೆ ಎಂದು ಸ್ಪಷ್ಟಪಡಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಮೈಸೂರು ಜಿಲ್ಲೆಯಲ್ಲಿ ಒಂದೇ ತಿಂಗಳಲ್ಲಿ ಹುಲಿ ದಾಳಿಗೆ ಮೂರು ಬಲಿ
Next: ಕೀರ್ತನೆಗಳ ಮೂಲಕ ಸಮಾನತೆಯ ಕಿಡಿ ಹಚ್ಚಿದವರು ಕನಕದಾಸರು: ಸಿಎಂ

Views:

41

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.