ಬೆಂಗಳೂರು: ಕಳೆದ ಕೆಲವು ದಿನಗಳ ಹಿಂದೆ ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕರಾಗಿರುವಂತಹ ಉಪೇಂದ್ರ ಹಾಗೂ ಅವರ ಪತ್ನಿ ಪ್ರಿಯಾಂಕ ಅವರ ಮೊಬೈಲ್ ಅನ್ನು ಹ್ಯಾಕರ್ಸ್ ಗಳು ಹ್ಯಾಕ್ ಮಾಡಿ ಹಣ ದೋಚಲು ಪ್ರಯತ್ನಿಸಿದ್ದರು.
ಈ ಕುರಿತು ನೆಟ ಉಪೇಂದ್ರ ಹಾಗೂ ನಟಿ ಪ್ರಿಯಾಂಕಾ ಉಪೇಂದ್ರ ಅವರು ದೂರು ದಾಖಲಿಸಿದ್ದು, ಇದೀಗ ಹ್ಯಾಕ್ ಮಾಡಿದ ಆರೋಪಿಯನ್ನು ಕೊನೆಗೂ ಪೊಲೀಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.
ಹೌದು, ನಟ ಉಪೇಂದ್ರ ಮತ್ತು ಪತ್ನಿ ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಪ್ರಕರಣದಲ್ಲಿ ಬಿಹಾರ ಮೂಲದ ವಿಕಾಸ್ ಕುಮಾರ್ ಅವರನ್ನು ಬಂಧಿಸಲಾಗಿದೆ. ಸೆ. 15ರಂದು ಉಪೇಂದ್ರ ದಂಪತಿಯ ಮೊಬೈಲ್ ಹ್ಯಾಕ್ ಆಗಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಆರೋಪಿ ವಿಕಾಸ್ ನಿರ್ವಹಿಸುತ್ತಿದ್ದ ಸೈಬರ್ ವಂಚನೆ ಜಾಲ ಪತ್ತೆಯಾಗಿದೆ. ಇದನ್ನೂ ಓದಿ: ರಶ್ಮಿಕಾ-ವಿಜಯ್ ಜೊತೆ ಮದುವೆ ಇಂದು ಬಿಗ್ ಅನೌನ್ಸ್!
ಇನ್ನು ವಿಕಾಸ್ ಕುಮಾರ್ ಎನ್ನುವ ಆರೋಪಿಯ ಜಾಲದಲ್ಲಿ ವಿಕಾಸ್ ನ ಊರಿನ 150 ಮಂದಿ ಯುವಕರು ಸೈಬರ್ ಅಪರಾಧಗಳಲ್ಲಿ ತೊಡಗಿದ್ದ ವಿಷಯವೂ ಬೆಳಕಿಗೆ ಬಂದಿದೆ. ವಿಕಾಸ್ನನ್ನು ಕಸ್ಟಡಿಯಲ್ಲಿ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.
