Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜಕೀಯ ಹೊರತಾಗಿ ಇತರೇ ಕ್ಷೇತ್ರಗಳಲ್ಲೂ ಮಹಿಳಾ ನಾಯಕತ್ವ ಬಲಗೊಳ್ಳಬೇಕು: ಡಿಸಿಎಂ
  • Bangalore
  • Front news
  • Politics
  • State

ರಾಜಕೀಯ ಹೊರತಾಗಿ ಇತರೇ ಕ್ಷೇತ್ರಗಳಲ್ಲೂ ಮಹಿಳಾ ನಾಯಕತ್ವ ಬಲಗೊಳ್ಳಬೇಕು: ಡಿಸಿಎಂ

Praja Vahini November 12, 2025 1 minute read
0119e54a-da55-4a88-91fd-8dfee464f8a8
Spread the love

ಬೆಂಗಳೂರು: ಯಶಸ್ವಿ ಪುರುಷನ ಹಿಂದೆ ಮಹಿಳೆಯ ಪಾತ್ರ ಇದ್ದೇ ಇರುತ್ತದೆ ಎನ್ನುವುದು ನನ್ನ ನಂಬಿಕೆ. ಹೆಣ್ಣು ಕುಟುಂಬದ ಕಣ್ಣು. ಮಹಿಳೆಯರು ರಾಜಕೀಯ ನಾಯಕತ್ವದ ಜೊತೆಯಲ್ಲಿ ಉದ್ದಿಮೆ ಹಾಗೂ ಇತರೇ ಕ್ಷೇತ್ರಗಳಲ್ಲೂ ನಾಯಕತ್ವ ಬೆಳೆಸಿಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ನಗರದನಲ್ಲಿ ಬುಧವಾರ ನಡೆದ ಅಂತರರಾಷ್ಟ್ರೀಯ ಮಹಿಳಾ ಉದ್ಯಮಿಗಳ ಸಂಘಗಳ ಪ್ರತಿನಿಧಿಗಳ ಸಮಾವೇಶದಲ್ಲಿ ಭಾಗವಹಿಸಿ ಸಾಧಕಿಯರಿಗೆ ‘ಉಬುಂತು’ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು.

“ಮಹಿಳೆಯರು ಸಾಕಷ್ಟು ಸವಾಲುಗಳನ್ನು ಎದುರಿಸಿ ಬೆಳೆಯುವ ಪರಿಸ್ಥಿತಿಯಿದೆ‌. ನನಗೂ ಇದರ ಬಗ್ಗೆ ಅರಿವಿದೆ. ಯಾವುದೇ ವ್ಯವಹಾರ ತೆಗೆದುಕೊಂಡರು ಮಹಿಳೆಯರು ಎಂದು ಇತರರು ರಿಯಾಯಿತಿ ನೀಡುವುದಿಲ್ಲ. ಕಾರ್ಪೋರೇಟ್ ವಲಯದಲ್ಲಿಯೂ ಈಗ ಹೆಚ್ಚು ಮುಂದೆ ಬರುತ್ತಿದ್ದಾರೆ. ನಿಮ್ಮ ಖಾತೆಯಲ್ಲಿ ಹೆಚ್ಚು ಹಣವಿದ್ದರೆ ಮಾತ್ರ ಬ್ಯಾಂಕ್ ಗಳು ಸಹ ಹೆಚ್ಚು ಸಹಾಯ ಮಾಡಲು ಮುಂದೆ ಬರುತ್ತವೆ” ಎಂದರು.

“ರಾತ್ರಿ ಹೊತ್ತು ಹೋಟೆಲ್ ಸೇರಿದಂತೆ ಇತರೇ ಉದ್ದಿಮೆಗಳನ್ನು ನಡೆಸಲು ಪರವಾನಗಿ ನೀಡಬೇಕು ಎನ್ನುವ ಬೇಡಿಕೆಯಿದೆ‌. ಆಗ ಮಹಿಳಾ ಸುರಕ್ಷತೆಯೂ ಮುಖ್ಯವಾಗುತ್ತದೆ. ಈಗ ಎಐ ತಂತ್ರಜ್ಞಾನ ಸೇರಿದಂತೆ ಇತರೇ ತಂತ್ರಜ್ಞಾನ ಮಹಿಳಾ ರಕ್ಷಣೆಗೆ ನೆರವಾಗಿದೆ” ಎಂದರು.

“ಮಹಿಳೆಯರು ಒಟ್ಟಾಗಿ ಬೆಳೆಯಬೇಕು. ಜೊತೆಗೂಡುವುದು ಆರಂಭ, ಜೊತೆಗೂಡಿ ಚರ್ಚೆ ನಡೆಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸು. ಮಹಿಳೆಯರು ತಾವು ಕಂಡ ಕನಸನ್ನು ನನಸು ಮಾಡಿಕೊಳ್ಳಲು ಶ್ರಮ, ಬದ್ಧತೆ, ಶಿಸ್ತು ಹಾಗೂ ತೊಡಗಿಸಿಕೊಳ್ಳುವಿಕೆ ಮುಖ್ಯ. ನನ್ನ ಕುಟುಂಬದಲ್ಲಿಯೂ ಸಹ ನನ್ನ ಪತ್ನಿ, ಮಕ್ಕಳ ಹಾಗೂ ಇಡೀ ಸಂಸಾರದ ಜವಾಬ್ದಾರಿಯನ್ನು ಹೊತ್ತು ಮುನ್ನಡೆಸಿದ್ದಾರೆ” ಎಂದರು.

ಗ್ಯಾರಂಟಿ ಯೋಜನೆಯಿಂದ ಮಹಿಳೆಯರ ಮೇಲಿನ ಒತ್ತಡ ಕಡಿಮೆ

“ನಾ ನಾಯಕಿ ಎನ್ನುವ ಕಾರ್ಯಕ್ರಮ ರೂಪಿಸಿದ್ದೆ‌. ಅಂದರೆ ಪ್ರತಿಯೊಂದು ಕುಟುಂಬದ ಮಹಿಳೆಯರೂ ನಾಯಕಿಯರು ಎಂಬುದು ಅದರ ತಾತ್ಪರ್ಯ. ಈ ಕಾರಣಕ್ಕೆ ನಮ್ಮ ಸರ್ಕಾರ ಗೃಹಲಕ್ಷ್ಮೀ ಹಾಗೂ ಗ್ಯಾರಂಟಿ ಯೋಜನೆಯ ಮೂಲಕ ಮಹಿಯರ ಬೆನ್ನಿಗೆ ನಿಂತಿದೆ. ನಾವು ನೀಡುವ ಹಣದಿಂದ ಮಕ್ಕಳ ವಿದ್ಯಾಭ್ಯಾಸ, ಆರೋಗ್ಯ, ಪೌಷ್ಟಿಕ ಆಹಾರ ಸೇರಿದಂತೆ ಅನೇಕ ರೀತಿಯಲ್ಲಿ ಸಹಾಯವಾಗುತ್ತಿದೆ. ಒಂದಷ್ಟು ಜನ ಮಹಿಳೆಯರು ಸೋಮಾರಿಗಳಾಗುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಆದರೆ ಶಕ್ತಿ ಯೋಜನೆ ಮೂಲಕ ಅನೇಕ ಪುಣ್ಯಕ್ಷೇತ್ರಗಳಿಗೆ ಪ್ರಮಾಣ ಮಾಡುತ್ತಾ ಇರುವುದರಿಂದ ಮಾನಸಿಕ ಒತ್ತಡವೂ ದೂರವಾಗಿದೆ. ಈ ಗ್ಯಾರಂಟಿ ಯೋಜನೆಗಳಿಂದ 1 ಲಕ್ಷ ಕೋಟಿ ಹಣ ಮಹಿಳೆಯರ ಖಾತೆ ಸೇರಿದೆ” ಎಂದರು.

“ಎಫ್ ಕೆಸಿಸಿಐ ಸಾರಥ್ಯವನ್ನು ಮಹಿಳೆಯೊಬ್ಬರು ವಹಿಸಿಕೊಂಡಿದ್ದಾರೆ ಎನ್ನುವುದು ತಿಳಿಯಿತು. ಇವರ ಸಾರಥ್ಯದಲ್ಲಿ ಹೆಚ್ಚು ಬೆಳವಣಿಗೆಯಾಗಲಿ. ಮಹಿಳಾ ಸಾರಥ್ಯದಲ್ಲಿ ಯಶಸ್ಸು ಕಾಣಲಿ. ಈ ಸಮಾವೇಶದಲ್ಲಿ ಚರ್ಚೆಯಾದ ವಿಚಾರಗಳು ಸರ್ಕಾರಕ್ಕೆ ನೀಡಿ ಅದನ್ನು ಸಾಕಾರಗೊಳಿಸಲು ಚರ್ಚೆ ನಡೆಸಲಾಗುವುದು” ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಇನ್ಮುಂದೆ ದಾವಣಗೆರೆಗೂ ಸಂಚರಿಸಲಿರುವ ಕೆಎಸ್​ಆರ್​ಟಿಸಿ ಫ್ಲೈಬಸ್
Next: ಹಿಂದೆ ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿಯಿಂದ ಜೀವ ಬೆದರಿಕೆ ಇತ್ತು: ಸಿಎಂ

Views:

78

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.