Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಏಷ್ಯಾದಲ್ಲೇ ಮೊದಲ ಬಾರಿಗೆ ಸಹಕಾರಿ ಬ್ಯಾಂಕ್ ಸ್ಥಾಪನೆಯಾಗಿದ್ದು ಕರ್ನಾಟಕದಲ್ಲಿ: ಸಿಎಂ
  • Bangalore
  • Politics
  • State

ಏಷ್ಯಾದಲ್ಲೇ ಮೊದಲ ಬಾರಿಗೆ ಸಹಕಾರಿ ಬ್ಯಾಂಕ್ ಸ್ಥಾಪನೆಯಾಗಿದ್ದು ಕರ್ನಾಟಕದಲ್ಲಿ: ಸಿಎಂ

Praja Vahini November 14, 2025 1 minute read
IMG_20251114_162403
Spread the love

ಬೆಂಗಳೂರು: ಗ್ರಾಮೀಣ ಭಾರತದ ಪ್ರಗತಿಗಾಗಿ ನೆಹರೂ ಅವರು ಸಹಕಾರ ಕ್ಷೇತ್ರಕ್ಕೆ ಚೈತನ್ಯ ನೀಡಿದರು. ಹೀಗಾಗಿ ಸಹಕಾರಿ ಚಳವಳಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಮೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಸಹಕಾರಿ ರಂಗದ ಸಾಧಕರಿಗೆ ‘ಸಹಕಾರ ರತ್ನ’ ಪ್ರಶಸ್ತಿಯನ್ನು ವಿತರಿಸಿ ಮಾತನಾಡಿದ ಅವರು, ಏಷ್ಯಾದಲ್ಲೇ ಮೊದಲ ಬಾರಿಗೆ ಸಹಕಾರಿ ಬ್ಯಾಂಕ್ ಸ್ಥಾಪನೆಯಾಗಿದ್ದು ರಾಜ್ಯದಲ್ಲಿ. ಹೀಗಾಗಿ ಕರ್ನಾಟಕವನ್ನು ಭಾರತದ ಸಹಕಾರ ಕ್ಷೇತ್ರದ ರಾಜಧಾನಿ ಎಂದು ಕರೆಯುತ್ತಾರೆ.

ಯಾವುದೇ ಗ್ರಾಮ ಉದ್ಧಾರ ಆಗಬೇಕಾದರೆ ಆ ಗ್ರಾಮದಲ್ಲಿ ಒಂದು ಶಾಲೆ, ಒಂದು ಸಹಕಾರಿ ಸಂಘ, ಒಂದು ಆಸ್ಪತ್ರೆ ಇರಬೇಕು ಎನ್ನುವುದು ನೆಹರೂ ಅವರ ಸ್ಪಷ್ಟ ಕಲ್ಪನೆಯಾಗಿತ್ತು. ಈ ಕಲ್ಪನೆಯನ್ನು ಗುರಿಯಾಗಿಸಿಕೊಂಡು ಕೆಲಸ ಮಾಡಿ ಸಹಕಾರ ಚಳವಳಿಗೆ ನೆಹರೂ ಮತ್ತು ಮಹಾತ್ಮ ಗಾಂಧಿ ಅವರು ಶಕ್ತಿ ನೀಡಿದರು.

ರಾಜ್ಯದಲ್ಲಿ ವಾರ್ಷಿಕ ವಹಿವಾಟು ₹25,000 ಕೋಟಿ ಜೊತೆಗೆ ಪ್ರತೀ ದಿನ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು, ಇದು ಸಹಕಾರಿ ಚಳವಳಿ ಮೂಲಕ ಬೆಳೆದ ಹಾಲು ಮಹಾಮಂಡಳಗಳ ಮಹತ್ ಸಾಧನೆ. ಹಾಲು ಉತ್ಪಾದಕರ ಸಂಘಗಳು ಚಳವಳಿ ಸ್ವರೂಪದಲ್ಲಿ ನಡೆದು ಮಧ್ಯವರ್ತಿಗಳ ಹಾವಳಿ ಇಲ್ಲದೆ ರೈತರು ಹಾಲನ್ನು ನೇರವಾಗಿ ಉತ್ಪಾದಕರ ಸಂಘಗಳಿಗೆ ಸರಬರಾಜು ಮಾಡುವಂತಾಯಿತು.

ಸಹಕಾರ ಕ್ಷೇತ್ರದಿಂದಾಗಿ ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ದೊಡ್ಡ ಚೈತನ್ಯ ಸಿಕ್ಕಿದೆ. ಲಕ್ಷಾಂತರ ಕುಟುಂಬಗಳ ಬದುಕಿಗೆ ಆಧಾರವಾಗಿದೆ.

ನಾನು ಮೊದಲಿಗೆ ಮುಖ್ಯಮಂತ್ರಿಯಾಗಿ ಹಾಲಿನ ಪ್ರೋತ್ಸಾಹ ಧನವನ್ನು ಲೀಟರಿಗೆ 3 ರೂ. ಮಾಡಿದ್ದೆ. ಈಗ ಪ್ರೋತ್ಸಾಹ ಧನವನ್ನು ಲೀಟರಿಗೆ 5 ರೂ.ಗೆ ಹೆಚ್ಚಿಸಿ ಪ್ರತೀ ದಿನ ಸರ್ಕಾರದಿಂದ 5 ಕೋಟಿ ರೂಪಾಯಿ ಸಹಾಯಧನವನ್ನು ಹಾಲು ಉತ್ಪಾದಕರಿಗೆ ನೀಡಲಾಗುತ್ತಿದೆ. 40 ಲಕ್ಷ ರೈತರಿಗೆ ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಸಹಾಯ ಧನ ಜಮೆ ಆಗುತ್ತಿದೆ. ಇದಕ್ಕೆಲ್ಲಾ ಹಾಲು ಮಹಾ ಮಂಡಳ ತಾಯಿಬೇರು ಇದ್ದಹಾಗೆ ಎಂದರು.

About the Author

Praja Vahini

Editor

View All Posts

Spread the love

Post navigation

Previous: ಬಿ.ಎಸ್.ವಿಶ್ವನಾಥ್ ಅವರು ಸಹಕಾರ ಕ್ಷೇತ್ರದಲ್ಲಿ ಅಪ್ರತಿಮ ಕೊಡುಗೆ ನೀಡಿದವರು: ಸಿಎಂ
Next: ನದಿಯಂತೆ ಬಂಗಾಳದಲ್ಲಿ ನಮ್ಮ ಗೆಲುವಿಗೆ ದಾರಿ: ಮೋದಿ

Views:

32

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.