ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರು ನಗರದಲ್ಲಿ ಸುರಂಗ ರಸ್ತೆಗಳನ್ನು ನಿರ್ಮಿಸಲು ತಯಾರಿ ನಡೆಸುತ್ತಿದ್ದು, ಇದರ ವಿರುದ್ಧ ಈಗಾಗಲೇ ವಿರೋಧ ಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಹೌದು, ಬೆಂಗಳೂರು ನಗರದಲ್ಲಿ ಸುರಂಗ ರಸ್ತೆ ಬೇಡ ಇದರ ಬದಲಾಗಿ ಮೆಟ್ರೋ ಯೋಜನೆಗಳನ್ನು ಇನ್ನಷ್ಟು ವಿಸ್ತರಿಸಿದರೆ ನಗರದಲ್ಲಿರುವ ಜನತೆಗೆ ಉಪಯೋಗವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಹೇಳಿದ್ದಾರೆ.
ಈ ಕುರಿತು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದುಡ್ಡು ಹೊಡೆಯುವ ಸುರಂಗ ರಸ್ತೆ ಬೇಡ; ಸರಕಾರ ಎಡವುವುದು ಬೇಡ. ಬದಲಾಗಿ ಜನೋಪಯುಕ್ತವೆನಿಸಿದ ಮೆಟ್ರೋ ಯೋಜನೆಯನ್ನು ವಿಸ್ತರಿಸಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರ ಪ್ರಕೃತಿಯನ್ನು ನಾಶಪಡಿಸಿ, ಕೆರೆಗಳನ್ನು ಹಾಳುಮಾಡಿ, ಅವೈಜ್ಞಾನಿಕ ಮೇಲುಸೇತುವೆಗಳನ್ನು ನಿರ್ಮಿಸಿ, ಸ್ಯಾಂಕಿ ಕೆರೆಯ ನಾಶಕ್ಕೆ ಮುಂದಾಗಿದ್ದು, ಈ ಕೆರೆಯ ಸಂರಕ್ಷಣೆಗಾಗಿ ಸಹಿ ಸಂಗ್ರಹ, ವೀಕ್ಷಣೆ ಹಾಗೂ ಸರ್ಕಾರದ ಅಧಿಕಾರಿಗಳೊಂದಿಗೆ ಪರಿಶೀಲನೆಯನ್ನು ಇಂದು (ಶನಿವಾರ ನ. 15)ಮಲ್ಲೇಶ್ವರದ 18ನೇ ಕ್ರಾಸ್ ಬಳಿ ಇರುವ ಸ್ಯಾಂಕಿ ಕೆರೆಯ ಮುಖ್ಯದ್ವಾರದ ಬಳಿ ಹಮ್ಮಿಕೊಳ್ಳಲಾಗಿತ್ತು. ಇದನ್ನೂ ಓದಿ: ನದಿಯಂತೆ ಬಂಗಾಳದಲ್ಲಿ ನಮ್ಮ ಗೆಲುವಿಗೆ ದಾರಿ: ಮೋದಿ
ಬೆಂಗಳೂರಿನಲ್ಲಿ ಮೆಟ್ರೋ ಯೋಜನೆ ಸಾಫಲ್ಯಗೊಂಡಿದೆ. ಸುಮಾರು 60 ಲಕ್ಷಕ್ಕೂ ಹೆಚ್ಚು ಜನರು ಇದರಲ್ಲಿ ಪ್ರಯಾಣ ಮಾಡುತ್ತಾರೆ. ಸುರಂಗ ರಸ್ತೆಯಿಂದ ಪರಿಸರವೂ ಹಾಳಾಗುತ್ತದೆ. ಸುರಂಗ ಮಾಡಿದ ಕಲ್ಲು ಮಣ್ಣನ್ನು ಎಲ್ಲಿ ಹಾಕುತ್ತೀರಿ ಎಂದು ಕೇಳಿದರು.
