Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಪಕ್ಷದ ಹೈಕಮಾಂಡ್: ಡಿಕೆಸು
  • Bangalore
  • Front news
  • Politics
  • State

ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಪಕ್ಷದ ಹೈಕಮಾಂಡ್: ಡಿಕೆಸು

Praja Vahini November 16, 2025 1 minute read
WhatsApp Image 2025-10-29 at 16.30.33
Spread the love

ಬೆಂಗಳೂರು: ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಹೈಕಮಾಂಡ್. ಹೈಕಮಾಂಡ್ ಯಾವ ತೀರ್ಮಾನ ಮಾಡಲಿದೆ ಎಂದು ಕಾದು ನೋಡೋಣ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು.

ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ನೀಡಿರುವ ಸುದ್ದಿ ಬಗ್ಗೆ ಕೇಳಿದಾಗ, “ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ನೋಡಿದ್ದೇನೆ. ಇದು ಸಿಎಂ ಹಾಗೂ ಹೈಕಮಾಂಡ್ ನಾಯಕರಿಗೆ ಬಿಟ್ಟ ವಿಚಾರ. ಕಾದು ನೋಡೋಣ” ಎಂದರು.

ಸಂಪುಟ ಪುನಾರಚನೆ ಆದರೆ ನಾಯಕತ್ವ ಬದಲಾವಣೆ ಆಗುವುದಿಲ್ಲ ಎಂಬ ಚರ್ಚೆ ಇದೆಯಲ್ಲ ಎಂದು ಕೇಳಿದಾಗ, “ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಏನೇ ಇದ್ದರೂ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆಯೇ ಹೊರತು ಬೇರೆಯವರಲ್ಲ” ಎಂದು ಪ್ರತಿಕ್ರಿಯಿಸಿದರು.

ಡಿ.ಕೆ. ಶಿವಕುಮಾರ್ ಅವರು ಈಗಾಗಲೇ ದೆಹಲಿಗೆ ಹೋಗಿದ್ದು, ನೀವೂ ತೆರಳುತ್ತಿರುವ ಕಾರಣ ಎಂದು ಕೇಳಿದಾಗ, ನಾನು ಈಗಾಗಲೇ ದೆಹಲಿಗೆ ತೆರಳಿರುವುದಾಗಿ ಮಾಧ್ಯಮಗಳು ಪ್ರಕಟಿಸಿವೆ. ನಾನು ದೆಹಲಿಗೆ ಹೋಗುವುದು ಹೊಸತಲ್ಲ. ಶಿವಕುಮಾರ್ ಅವರು ಅವರ ಕೆಲಸದ ಮೇಲೆ ಹೋಗಿದ್ದಾರೆ, ನನ್ನ ಪಾಡಿಗೆ ನಾನು ಹೋಗುತ್ತಿರುವೆ” ಎಂದು ತಿಳಿಸಿದರು.

ನಿಮ್ಮ ಸಹೋದರ ಸಿಎಂ ಆಗಬೇಕು ಎಂಬ ಆಸೆ ನಿಮ್ಮದು ಎಂದು ಕೇಳಿದಾಗ, “ಈ ವಿಚಾರ ಸಾಕಷ್ಟು ಬಾರಿ ಹೇಳಿದ್ದೇನೆ. ಎಲ್ಲದಕ್ಕೂ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ. ಸಿಎಂ, ಸಚಿವರು, ಶಾಸಕರು, ಶಿವಕುಮಾರ್ ಎಲ್ಲರಿಗೂ ಹೈಕಮಾಂಡ್ ತೀರ್ಮಾನವೇ ಮುಖ್ಯ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆ ಕಾದು ನೋಡಬೇಕು” ಎಂದು ತಿಳಿಸಿದರು.

ಯಾರ ಕ್ಲೇಮ್ ಏನಿದೆಯೋ ಗೊತ್ತಿಲ್ಲ

ಶಿವಕುಮಾರ್ ಅವರ ಕ್ಲೇಮ್ ಮೇಲೆ ಎಲ್ಲವೂ ನಿಂತಿದೆಯಲ್ಲವೇ ಎಂದು ಕೇಳಿದಾಗ, “ಕಾದು ನೋಡೋಣ, ಇಲ್ಲಿ ಶಿವಕುಮಾರ್ ಒಬ್ಬರೇ ಕ್ಲೇಮ್ ಮಾಡುತ್ತಿಲ್ಲವಲ್ಲ. ಬಹಳಷ್ಟು ಜನರ ಕ್ಲೇಮ್ ಇದೆ. ಯಾರ ಕ್ಲೇಮ್ ಏನಿದೆಯೋ ಗೊತ್ತಿಲ್ಲವಲ್ಲ” ಎಂದರು.

ಸಂಪುಟ ಪುನಾರಚನೆಯಾದರೆ ಸಿಎಂ ಬದಲಾವಣೆ ಇಲ್ಲ ಎಂಬ ಪರಮೇಶ್ವರ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಹಿರಿಯ ಸಚಿವರು, ಅವರು ಹೇಳುತ್ತಾರೆ. ಸಚಿವ ಸಂಪುಟ ಪುನಾರಚನೆ ಸಿಎಂ ಪರಮಾಧಿಕಾರ. ಹೈಕಮಾಂಡ್ ಅಪ್ಪಣೆಯೊಂದಿಗೆ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ವಿಚಾರದಲ್ಲಿ ಹೈಕಮಾಂಡ್ ಶಿವಕುಮಾರ್ ಅವರ ಬಳಿ ಚರ್ಚೆ ಮಾಡಿದರೆ, ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗೆ ಅಗತ್ಯವಾದ ಸಲಹೆ ನೀಡುತ್ತಾರೆ. ಸಿಎಂ ಈಗಾಗಲೇ ಇದ್ದಾರೆ. ಸಿಎಂ ಇಲ್ಲದಿದ್ದಾಗ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಮಾಡಬಹುದು” ಎಂದು ತಿಳಿಸಿದರು.

 

ಸೋಲು ಗೆಲುವು ಸಹಜ

ಬಿಹಾರ ಚುನಾವಣೆ ಬಗ್ಗೆ ಕೇಳಿದಾಗ, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಗೆಲುವು ಸೋಲು ಇದ್ದೇ ಇರುತ್ತದೆ. ಬಿಹಾರದಲ್ಲಿ ಚುನಾವಣೆಗೂ ಮುನ್ನ ಎನ್ ಡಿಎ ಸರ್ಕಾರ ಕರ್ನಾಟಕ ಗ್ಯಾರಂಟಿ ಯೋಜನೆ ಮಾದರಿಯಲ್ಲೇ ಅನುಷ್ಠಾನ ಮಾಡಿತು. ಹೀಗಾಗಿ ಮಹಿಳಾ ಮತದಾರರು ಎನ್ ಡಿಎ ಪರ ಒಲವು ತೋರಿದ್ದಾರೆ. 10 ಸಾವಿರ ರೂ. ಒಟ್ಟಿಗೆ ಮಹಿಳೆಯರ ಖಾತೆಗೆ ಹಾಕಿದ ಪರಿಣಾಮ ಹಾಗೂ ಚುನಾವಣೆ ಮುನ್ನ 47 ಲಕ್ಷ ಮತಗಳನ್ನು ಮತಪಟ್ಟಿಯಿಂದ ಕಿತ್ತು ಹಾಕಿದ್ದು ಪ್ರಮುಖ ಕಾರಣವಾಗಿದೆ. ಜನ ತೀರ್ಪು ನೀಡಿದ್ದು, ಅದನ್ನು ಸ್ವಾಗತಿಸುತ್ತೇವೆ. ನಮ್ಮ ಪಕ್ಷಕ್ಕೆ ಸೋಲು, ಗೆಲುವು ಹೊಸತಲ್ಲ. ವಿರೋಧ ಪಕ್ಷವಾಗಿ ಕೆಲಸ ಮಾಡುತ್ತಾ ಪಕ್ಷ ಸಂಘಟನೆ ಮಾಡುತ್ತೇವೆ” ಎಂದು ತಿಳಿಸಿದರು.

 

 

About the Author

Praja Vahini

Editor

View All Posts

Spread the love

Post navigation

Previous: ಹಗಲು ರಾತ್ರಿ ಪಕ್ಷ ಕಟ್ಟಿದ್ದೇನೆ, ಕಾಂಗ್ರೆಸ್ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವವನು ನಾನಲ್ಲ: ಡಿಸಿಎಂ
Next: ಮೆಟ್ರೋ: ತುಮಕೂರು ನಗರವಾಸಿಗಳಿಗೆ ಸಿಹಿ ಸುದ್ದಿ!

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.