Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೆಟ್ರೋ: ತುಮಕೂರು ನಗರವಾಸಿಗಳಿಗೆ ಸಿಹಿ ಸುದ್ದಿ!
  • Bangalore
  • State

ಮೆಟ್ರೋ: ತುಮಕೂರು ನಗರವಾಸಿಗಳಿಗೆ ಸಿಹಿ ಸುದ್ದಿ!

Praja Vahini November 17, 2025 1 minute read
WhatsApp Image 2025-11-17 at 11.34.50 (1)
Spread the love

ಬೆಂಗಳೂರು: ಬೆಂಗಳೂರು ನಗರದಲ್ಲಿರುವ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸಲು ಈಗಾಗಲೇ ನಗರದಲ್ಲಿ ಮೆಟ್ರೋ ಸಂಚಾರ ಪ್ರಾರಂಭವಾಗಿ ಹಲವು ವರ್ಷಗಳು ಕಳೆಯುತ್ತಾ ಬಂದಿದ್ದು, ಸಾರ್ವಜನಿಕರು ಪ್ರತಿನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ನಮ್ಮ ಮೆಟ್ರೋ ಬಳಸುವ ಮೂಲಕ ಸಗಮ ಸಂಚಾರ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ.

ಇನ್ನು ನಮ್ಮ ಮೆಟ್ರೋ ಕೇವಲ ಬೆಂಗಳೂರು ನಗರದಲ್ಲಿ ಮಾತ್ರವಲ್ಲದೇ ಇದೀಗ ತುಮಕೂರು ನಗರಕ್ಕೂ ನಮ್ಮ ಮೆಟ್ರೋ ಲಗ್ಗೆ ಇಡಲು ಮುಂದಾಗಿದ್ದು, ಈಗಾಗಲೇ ತುಮಕೂರಿಗೆ ನಮ್ಮ ಮೆಟ್ರೋ ಡಿಪಿಆರ್ ತಯಾರಿಸಲು ಬಿಎಮ್ಆರ್‌ಸಿಎಲ್ ಟೆಂಡರ್‌ ಕರೆಯಲಾಗಿದೆ ಎಂದು ತಿಳಿದಿದೆ.

ಹೌದು, ತುಮಕೂರಿಗೆ ಮೆಟ್ರೋ ಸೇವೆಗಳನ್ನು ವಿಸ್ತರಿಸಲು ಸಮಗ್ರ ಯೋಜನಾ ವರದಿ ತಯಾರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಟೆಂಡರ್ ಕರೆದಿದೆ.

ಈಗಾಗಲೇ ಸಿಲ್ಕ್ ಇನ್‌ಸ್ಟಿಟ್ಯೂಟ್‌ನಿಂದ ಮಾದಾವರದವರೆಗೆ ಹಸಿರು ಮಾರ್ಗದ ಮೆಟ್ರೋ ಸೇವೆಯಿದೆ. ಹೊಸ ಪ್ರಸ್ತಾವಿತ 59.6 ಕಿಮೀ ಮಾರ್ಗವು ಮಾದಾವರದಿಂದ ತುಮಕೂರುವರೆಗೆ ವಿಸ್ತರಣೆಯಾಗಲಿದೆ.

ಈ ಹಿಂದೆ ಮಾದಾವರ-ತುಮಕೂರು ಕಾರಿಡಾರ್‌ನ ಡಿಪಿಆರ್‌ಗಾಗಿ ಕಾರ್ಯಸಾಧ್ಯತಾ ಅಧ್ಯಯನವನ್ನು ಕೈಗೊಳ್ಳಲು ಸರ್ಕಾರದ ನಿರ್ದೇಶನ ನೀಡಿತ್ತು. ಮೇ ತಿಂಗಳಲ್ಲಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾದ ಕಾರ್ಯಸಾಧ್ಯತಾ ಅಧ್ಯಯನವನ್ನು ಅಂತಿಮವಾಗಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಡಿಯಲ್ಲಿ ಜಾರಿಗೊಳಿಸಲು ಅನುಮೋದಿಸಲಾಗಿದೆ.

ಈ ಯೋಜನೆಗೆ 20,649 ಕೋಟಿ ರೂ. ವೆಚ್ಚವಾಗುವ ನಿರೀಕ್ಷೆ ಇದೆ. ಬಿಡ್‌ದಾರರು 4.5 ಲಕ್ಷ ರೂ. ಹೆಚ್ಚು ಮುಂಗಡ ಹಣದೊಂದಿಗೆ (EMD) ನ.20ರ ಒಳಗಡೆ ಟೆಂಡರ್‌ಗೆ ಅರ್ಜಿ ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಬಿಡ್‌ದಾರರ ಆಯ್ಕೆಯ ನಂತರ ಡಿಪಿಆರ್ ತಯಾರಿಕೆಗೆ ಕನಿಷ್ಠ 4-5 ತಿಂಗಳುಗಳು ಬೇಕಾಗುತ್ತದೆ ಎಂದು ನಿರೀಕ್ಷಿಸಲಾಗಿದೆ.

 

About the Author

Praja Vahini

Editor

View All Posts

Spread the love

Post navigation

Previous: ಸಂಪುಟ ಪುನಾರಚನೆ, ಪವರ್ ಶೇರಿಂಗ್ ಎಲ್ಲವನ್ನು ತೀರ್ಮಾನ ಮಾಡುವುದು ಪಕ್ಷದ ಹೈಕಮಾಂಡ್: ಡಿಕೆಸು
Next: ವಿಚಾರಣೆಗೆ ಹಾಜರಾಗುವಂತೆ ಅರವಿಂದ್ ರೆಡ್ಡಿಗೆ ನೋಟಿಸ್ ಜಾರಿ!

Views:

29

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.