ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು (ಸೋಮವಾರ ನವಂಬರ್ 17 ಸುವರ್ಣ ಕರ್ನಾಟಕ ಕಾರ್ಯನಿರತ ಗುತ್ತಿಗೆದಾರರ ಸಂಘದ ವತಿಯಿಂದ ಜೆಜೆಎಂ ಹಾಗೂ ಪಂಚಾಯತ್ ರಾಜ್ ಇಲಾಖೆ, ಲೋಕೋಪಯೋಗಿ ಇಲಾಖೆ, ನೀರಾವರಿ ಇಲಾಖೆ ಕಾಮಗಾರಿಯ ಬಾಕಿ ಬಿಲ್ ಬಿಡುಗಡೆ ಮಾಡಲು ಆಗ್ರಹಿಸಿ ಒಂದು ದಿನದ ಧರಣಿಯು ಸಂಘದ ರಾಜ್ಯದ್ಯಕ್ಷರಾದ ಜೋಗಿ ಜಯಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿದೆ.
ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಆಗಮಿಸಿ, ಗುತ್ತಿಗೆದಾರರ ಸಮಸ್ಯೆ ಆಲಿಸಬೇಕು. ಗುತ್ತಿಗೆದಾರರ ಜೀವ ಕಾಪಾಡುವುದು ಸರ್ಕಾರದ ಮೇಲಿದ್ದು ಕೂಡಲೇ ಸರ್ಕಾರ ಬಾಕಿ ಬಿಲ್ ಪಾವತಿಸಬೇಕು. ಮತ್ತು ಬಿಲ ಪಾವತಿಸುವ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಪಾಲು ಕೇಂದ್ರ ಸರ್ಕಾರದ ಪಾಲು ಎಂದು ನೆಪ ಹೇಳದೆ. ಟೆಂಡರ್ ಬಿಲ್ ಪಾವತಿಸಬೇಕು. ರಾಜ್ಯದಲ್ಲಿ ಗುತ್ತಿಗೆದಾರರು ಹತ್ತಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದು ನಮ್ಮ ಸಮಸ್ಯೆಗಳಿಗೆ ಸರ್ಕಾರ ಮುಕ್ತಿ ನೀಡಬೇಕು. ಗುತ್ತಿಗೆದಾರರ ಪರವಾಗಿ ಸರ್ಕಾರ ನಿಲ್ಲಬೇಕು ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಇದನ್ನೂ ಓದಿ: ಮಾಧ್ಯಮ ಎಂದರೆ ಕೇವಲ ಮಾಹಿತಿ ಕೊಡುವಂಥದ್ದಲ್ಲ: ಯು ಟಿ ಖಾದಿರ್
ಈ ವೇಳೆ ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಯ ತಾಲೂಕುಗಳ ಗುತ್ತಿಗೆದಾರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸದಸ್ಯರ, ಗುತ್ತಿಗೆದಾರರು ಭಾಗವಹಿಸಿದ್ದರು.
