ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮ ಪತ್ನಿ ಪಾರ್ವತಿ ಅವರ ಆರೋಗ್ಯದಲ್ಲಿ ಏರುಪೇರು ಆಗಿದ್ದು ಶೇಷಾದ್ರಿಪುರಂನಲ್ಲಿರುವ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿನ್ನೆ ತಡರಾತ್ರಿ ದೆಹಲಿಯಿಂದ ನೇರವಾಗಿ ಆಸ್ಪತ್ರೆಗೆ ಭೇಟಿ ನೀಡಿ ಅವರ ಪತ್ನಿ ಆರೋಗ್ಯ ವಿಚಾರಿಸಿದ್ದಾರೆ.
ವಿಮಾನ ನಿಲ್ದಾಣದಿಂದ ನೇರವಾಗಿ ಶೇಷಾದ್ರಿಪುರಂನಲ್ಲಿರುವ ಆಸ್ಪತ್ರೆಗೆ ಆಗಮಿಸಿ ಐಸಿಯುನಲ್ಲಿರುವ ಪತ್ನಿಯ ಆರೋಗ್ಯ ವಿಚಾರಿಸಿದರು. ನಂತರ ಅರ್ಧಗಂಟೆಗೂ ಹೆಚ್ಚು ಕಾಲ ವೈದ್ಯರ ಜೊತೆ ಸಿಎಂ ಸಮಲೋಚನೆ ನಡೆಸಿದರು. ಇದನ್ನೂ ಓದಿ: ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥವು ಪಾರದರ್ಶಕತೆಗೆ ನಾಂದಿ ಹಾಡಿದೆ: ರಾಮಲಿಂಗಾ ರೆಡ್ಡಿ
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆರೋಗ್ಯ ಸ್ಥಿರವಾಗಿದ್ದು ಏನು ಸಮಸ್ಯೆ ಇಲ್ಲ. ಶ್ವಾಸಕೋಶ ಸೋಂಕು ಇದೆ, ಈಗ ಸುಧಾರಣೆ ಕಾಣುತ್ತಿದೆ. ಇನ್ನೂ 2-3 ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದು ಹೇಳಿ ತೆರಳಿದರು.
