ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯರವರ ಅಧ್ಯಕ್ಷತೆಯಲ್ಲಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಬಳ್ಳಾರಿ ಜಿಲ್ಲೆಯ ಕಾರ್ಖಾನೆ ಹಾಗೂ ಕೈಗಾರಿಕೋದ್ಯಮಕ್ಕೆ ಸಂಬಂಧಿಸಿದ ವಿಶೇಷ ಸಭೆಯಲ್ಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕರು ಹಾಗೂ ಮಾಜಿ ಸಚಿವರಾದ ಬಿ. ನಾಗೇಂದ್ರರವರು ಭಾಗವಹಿಸಿ ಭಾರತ್ ಜೋಡೋ ಯಾತ್ರೆಯ ವೇಳೆ ಕಾಂಗ್ರೆಸ್ ಹೈಕಮಾಂಡ್ ನಾಯಕರಾದ ರಾಹುಲ್ ಗಾಂಧಿ ರವರು ಬಳ್ಳಾರಿ ಜಿಲ್ಲೆಯ ಕನಸಿನ ಯೋಜನೆಯಾದ ಅಂತರ್ ರಾಷ್ಟ್ರೀಯ ಮಟ್ಟದ ಮೇಗಾ ಜೀನ್ಸ್ ಅಪೇರಲ್ ಪಾರ್ಕ್ ನಿರ್ಮಾಣದ ಬಗ್ಗೆ ನುಡಿದಿ ದ್ದರು ಅವರ ಆಶಯದಂತೆ ಮೇಗಾ ಜೀನ್ಸ್ ಅಪೇರಲ್ ಪಾರ್ಕ್ ಪೂರ್ವ ತಯಾರಿ ಹಾಗೂ ಮಂಜೂರಾಗಬೇಕಾದ ಅನುದಾನದ ಬಗ್ಗೆ ಚರ್ಚೆ ನಡೆಸಲಾಯಿತು ಹಾಗೂ ಬಳ್ಳಾರಿಯ ಜೀನ್ಸ್ ವಾಷಿಂಗ್ ಸ್ಪಾ0ಜ್ ಐರನ್ ಮಾಲೀಕರ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅವರಿಗೆ ಸ್ಥಳದಲ್ಲಿಯೇ ನ್ಯಾಯ ಕೊಡಿಸುವಲ್ಲಿ ಯಶಸ್ವಿಯಾದರು
ಈ ಸಂಧರ್ಭದಲ್ಲಿ ಕೈಗಾರಿಕಾ ಸಚಿವರಾದ ಎಂ. ಬಿ. ಪಾಟೀಲ್, ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಜೆಡ್. ಜಮೀರ್ ಅಹಮದ್ ಖಾನ್, ಬಳ್ಳಾರಿ ಸಂಸದರಾದ ಈ. ತುಕಾರಾಂ, ಶಾಸಕರಾದ ಶ್ರೀಮತಿ ಅನ್ನಪೂರ್ಣ ರವರು, ಕೆ. ಕೆ. ಆರ್. ಡಿ. ಬಿ. ಅಧ್ಯಕ್ಷರಾದ ಅಜಯ್ ಸಿಂಗ್, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ನರೇಂದ್ರ ಸ್ವಾಮಿ, ಬಳ್ಳಾರಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಶೋಭಾ ರಾಣಿ, ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು
