Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ
  • Politics
  • State
  • ಚಾಮರಾಜನಗರ

ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

Praja Vahini November 20, 2025 1 minute read
WhatsApp Image 2025-11-20 at 15.49.57
Spread the love

ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. 5 ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಇಂದು (ಗುರುವಾರ ನ. 20) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ತಿಳಿಸಿದರು.

2028 ರಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು 5 ವರ್ಷ ಆಡಳಿತ ನಡೆದು ಜನಾದೇಶ ಇದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ನವೆಂಬರ್ ಕ್ರಾಂತಿ ಎಂಬ ವಿಷಯವನ್ನು ಮಾಧ್ಯಮದವರೇ ಸೃಷ್ಟಿಸಿದರು. ಜನರು ಆಸೆಯಂತೆ ಐದು ವರ್ಷ ಸರ್ಕಾರ ನಡೆಸಿ ನಂತರವೂ ಪುನ: ಕಾಂಗ್ರೆಸ್ ಪಕ್ಷವೇ ಆಯ್ಕೆಯಾಗಿ ಬರಲಿದೆ ಎಂದು ತಿಳಿಸಿದರು.

ಸಂಪುಟ ಪುನರ್ರಚನೆ: ಪಕ್ಷದ ವರಿಷ್ಠರು ತೀರ್ಮಾನಿಸಬೇಕಿದೆ

ಐದು ವರ್ಷವೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರಿಕೆ ಬಗ್ಗೆ ನಡೆಯುತ್ತಿರುವ ಚರ್ಚೆಗೆ ಉತ್ತರಿಸಿ, ಇದು ಅನಾವಶ್ಯಕ ಚರ್ಚೆ. ಎರಡೂವರೆ ವರ್ಷದ ನಂತರ ಸಂಪುಟ ಪುನರ್ರಚನೆ ಮಾಡಬಹುದು ಎಂದು ತಿಳಿಸಿದ ನಂತರವಷ್ಟೇ, ಮುಖ್ಯಮಂತ್ರಿ ಬದಲಾವಣೆಯ ವಿಷಯ ಮುನ್ನಲೆಗೆ ಬಂದಿರುವುದು. ಸಂಪುಟ ಪುನರ್ರಚನೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಬೇಕಿದೆ. ಒಟ್ಟು 34 ಸಚಿವರ ಸ್ಥಾನವಿದ್ದು, ಅದರಲ್ಲಿ ಎರಡು ಸ್ಥಾನಗಳು ಖಾಲಿಯಿದೆ. ಸಂಪುಟ ಪುನರ್ರಚನೆ ಸಂದರ್ಭದಲ್ಲಿ ಈ ಖಾಲಿ ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗುವುದು ಎಂದರು. ಇದನ್ನೂ ಓದಿ: ನೀರಿನ ಅಕ್ರಮ ರೋಬೋಟಿಕ್ ತಂತ್ರಜ್ಞಾನದ ಮೂಲಕ ತಡೆ: ಡಿಕೆಶಿ

ಜನರು ಅಪೇಕ್ಷಿಸುವವರೆಗೆ ಬಜೆಟ್ ಮಂಡನೆ

2028 ರಲ್ಲಿಯೂ ಸಿದ್ದರಾಮಯ್ಯನವರ ನೇತೃತ್ವದಲ್ಲಿಯೇ ಚುನಾವಣೆ ಎದುರಿಸಲಾಗುವುದೇ ಎಂಬುದಕ್ಕೆ ಉತ್ತರಿಸಿ, ಈ ಬಗ್ಗೆ ಭವಿಷ್ಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಜನರು ಎಲ್ಲಿವರೆಗೆ ಅಪೇಕ್ಷಿಸುವರೋ, ಅಲ್ಲಿಯವೆಗೆ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ತಿಳಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ನೀರಿನ ಅಕ್ರಮ ರೋಬೋಟಿಕ್ ತಂತ್ರಜ್ಞಾನದ ಮೂಲಕ ತಡೆ: ಡಿಕೆಶಿ
Next: ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ: ಸಿಎಂ

Views:

25

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.