Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ: ಸಿಎಂ
  • Politics
  • State
  • ಚಾಮರಾಜನಗರ

ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ: ಸಿಎಂ

Praja Vahini November 20, 2025 1 minute read
WhatsApp Image 2025-11-20 at 15.51.14
Spread the love

ಚಾಮರಾಜನಗರ: ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು ಈಗಲೂ ಜೆಡಿಎಸ್ ನಲ್ಲಿ ಇದ್ದಾರೆ. ಆದರೆ ನನ್ನ ಪರವಾಗಿಯೇ ಇದ್ದಾರೆ.  ಜಿ.ಟಿ.ದೇವೇಗೌಡರು 2006ರ ವರೆಗೂ ನನ್ನ ಜೊತೆಗೇ ಇದ್ದರು‌. ಜೆಡಿಎಸ್ ನಿಂದ ನನ್ನನ್ನು ಉಚ್ಚಾಟಿಸಿದ ಮೇಲೆ ಜಿ.ಟಿ.ದೇವೇಗೌಡರು ಅಲ್ಲೇ ಉಳಿದು ಬಿಟ್ಟರು. ಈಗ ಮತ್ತೆ ಒಂದು ರೀತಿಯಲ್ಲಿ ನಮ್ಮ ಜೊತೆಗೇ ಇದ್ದಾರೆ ಎಂದರು.

ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು ಎಂದರು.

ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದರು. ಇಂದು ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ ಎಂದರು. ಇದನ್ನೂ ಓದಿ: ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ನಾನು ಪಶು ಸಂಗೋಪನಾ ಸಚಿವನಾಗಿದ್ದಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಭನೆಗೆ ಪೂರ್ಣ ಸಹಕಾರ ನೀಡಿದ್ದೆ. ಈಗ ಒಂದು ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನಾನು ಹಾಲು ಉತ್ಪಾದಕರ ಅನುಕೂಲಕ್ಕಾಗಿ ಲೀಟರ್ ಗೆ 5ರೂ ನಂತೆ ಒಂದು ದಿನಕ್ಕೆ 5 ಕೋಟಿ ರೂಪಾಯಿ ಸಹಾಯ ಧನವನ್ನು ರೈತರಿಗೆ ನಮ್ಮ ಸರ್ಕಾರದಿಂದ ನೀಡಲಾಗುತ್ತಿದೆ  ಎಂದರು. ನಾವು ಎರಡು ಬಾರಿ ಹಾಲಿನ ದರವನ್ನು ಹೆಚ್ಚಿಸಿದರೂ ಆ ಹೆಚ್ಚುವರಿ ಹಣ ಹಾಲು ಉತ್ಪಾದಕರಿಗೇ ಹೋಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದರು.

ನಾನು ಮುಖ್ಯಮಂತ್ರಿ ಆದಾಗಿನಿಂದ ಎಲ್ಲಾ ಜಾತಿ, ಎಲ್ಲಾ ಧರ್ಮದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದ್ದೇವೆ‌. ಚಾಮರಾಜನಗರ ಜಿಲ್ಲೆಯ ಎಲ್ಲಾ ಜಾತಿಯ, ಎಲ್ಲಾ ಧರ್ಮದವರೂ ನನಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲೆಯನ್ನು ನಾನು ಯಾವತ್ತೂ ಮರೆಯುವುದಿಲ್ಲ ಎಂದರು.

ಚಾಮರಾಜನಗರಕ್ಕೆ ಅನೇಕ ಸಾರಿ ಬಂದಿದ್ದೀನಿ. ಈ ಜಿಲ್ಲೆಗೆ ಬಂದ್ರೆ ಮಂತ್ರಿ ಸ್ಥಾನ ಹೋಗ್ತದೆ ಅನ್ನೋ ಕೆಟ್ಟ ಮೌಡ್ಯ ಇದೆ. ಆದರೆ ಇಲ್ಲಿಗೆ ಬಂದು ಹೋದಷ್ಟೂ ನನ್ನ ಸ್ಥಾನ ಮಾತ್ರವಲ್ಲ, ನಮ್ಮ ಪಕ್ಷದ ಅಧಿಕಾರವೂ ಮತ್ತೆ ಮತ್ತೆ ಗಟ್ಟಿ ಆಗಿದೆ ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ
Next: ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ

Views:

30

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.