Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಾಯಕತ್ವ ಬದಲಾವಣೆ ಕುರಿತು ಹೆಚ್.ಸಿ ಮಹಾದೇವಪ್ಪ ಹೇಳಿದ್ದೇನು?
  • Bangalore
  • Politics
  • State

ನಾಯಕತ್ವ ಬದಲಾವಣೆ ಕುರಿತು ಹೆಚ್.ಸಿ ಮಹಾದೇವಪ್ಪ ಹೇಳಿದ್ದೇನು?

Praja Vahini November 21, 2025
WhatsApp Image 2025-11-21 at 13.36.50
Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಬದಲಾವಣೆ ಕೂಗು ಕಳೆದ ಕೆಲವು ದಿನಗಳಿಂದ ಜೋರಾಗಿ ಕೇಳುತ್ತಿದ್ದು, ಇದೀಗ ಈ ಕುರಿತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್. ಸಿ. ಮಹಾದೇವಪ್ಪ ನವರು ಮಾತನಾಡಿದ್ದಾರೆ.

ನಾಯಕತ್ವ ಬದಲಾವಣೆಯ ಕುರಿತಾಗಿ ಕಾಂಗ್ರೆಸ್ ಪಕ್ಷದ ಒಳಗೆ ಯಾವುದೇ ಪ್ರಶ್ನೆಗಳು ಏಳದಿದ್ದರೂ ನಮ್ಮ ಮಾಧ್ಯಮ ಮಿತ್ರರು ಪ್ರತಿದಿನ ಅದೇ ಪ್ರಶ್ನೆಗಳನ್ನು ಸರ್ಕಾರದ ಮುಖ್ಯಸ್ಥರು, ಸಚಿವರು ಹಾಗೂ ನಾಯಕರ ಬಳಿ ಕೇಳುತ್ತಿರುವುದು ಮುಜುಗರ ತರುವಂತಿದೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ಅವರು, ಸರ್ಕಾರವೊಂದು ತಾನು ಜನರಿಗೆ ನೀಡಿದ ಪ್ರಣಾಳಿಕೆಗಳನ್ನು ಸಮರ್ಥವಾಗಿ ಜಾರಿಗೊಳಿಸಿ, ಜನ ಸಾಮಾನ್ಯರ ಬದುಕು ಹಸನಾಗುವ ನಿಟ್ಟಿನಲ್ಲಿ ಆಡಳಿತವನ್ನು ನೀಡುತ್ತಿರುವಾಗ, ಆಡಳಿತಾತ್ಮಕ ಸ್ಥಿರತೆ, ಜನರ ನಂಬಿಕೆಗೆ ವಿರುದ್ಧವಾಗಿ, ಜನರನ್ನು ಗೊಂದಲಗೊಳಿಸುವ ಹಾಗೆ ಪ್ರತಿದಿನ ಕೇಳುತ್ತಿರುವ ಪ್ರಶ್ನೆಗಳು ಆಡಳಿತಾತ್ಮಕ ದೃಷ್ಟಿಯಿಂದ ಅಷ್ಟೊಂದು ಸಮಂಜಸವಾಗಿ ಕಾಣುತ್ತಿಲ್ಲ.

ಒಂದು ರಾಜಕೀಯ ಪಕ್ಷವು ಕಾಲದ ಅಗತ್ಯಕ್ಕೆ ತಕ್ಕಂತೆ, ಜನರ ಅಭಿಪ್ರಾಯವನ್ನು ಆಧರಿಸಿ, ನಾಯಕರ ಸಾಮರ್ಥ್ಯವನ್ನು ಅರ್ಥೈಸಿ ಪಕ್ಷದ ವ್ಯಾಪ್ತಿಯ ಒಳಗೆ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ. ಇದು ಯಾವುದೇ ಬಹಿರಂಗ ಒತ್ತಡದಿಂದ ಅಥವಾ ವ್ಯಕ್ತಿಗತ ಆಸೆಗಳಿಂದ ಜರುಗುವಂತಹ ಪ್ರಕ್ರಿಯೆ ಅಲ್ಲ. ಇದನ್ನೂ ಓದಿ: ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ಸಿಎಂ ಮಹತ್ವದ ಸಭೆ!

ನಾಯಕತ್ವ ಬದಲಾವಣೆಯ ನಿರ್ಧಾರ ಏನಾದರೂ ಇದ್ದರೆ ಅದನ್ನು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮಾಧ್ಯಮದ ಮುಂದೆಯೇ ಬಂದು ತಿಳಿಸುತ್ತದೆ. ಹೀಗಾಗಿ ಹೋದಲ್ಲಿ ಬಂದಲ್ಲಿ ರಚ್ಚೆ ಹಿಡಿದವರಂತೆ ನಾಯಕತ್ವ ಬದಲಾವಣೆಯ ಪ್ರಶ್ನೆಯನ್ನು ಕೇಳುವ ಬದಲು, ಜನರ ನಂಬಿಕೆಯನ್ನು ಹೆಚ್ಚಿಸುವಂತಹ ಮತ್ತು ಜನರ ಬದುಕಿಗೆ ಪ್ರಯೋಜನ ಆಗುವಂತಹ ಮತ್ತು ಆಡಳಿತಾತ್ಮಕವಾಗಿ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ಮಾಡಬೇಕೆಂದು ಪ್ರಜಾಪ್ರಭುತ್ವದ 4ನೇ ಅಂಗವಾದ ಮಾಧ್ಯಮ ಮಿತ್ರರನ್ನು ವಿನಂತಿಸುತ್ತೇನೆ.

ಸಾರ್ವಜನಿಕ ಜೀವನದಲ್ಲಿ ಜನರ ಸುಭದ್ರ ಬದುಕಿಗೇ ಮೊದಲ ಪ್ರಾಶಸ್ತ್ಯ ಇದ್ದು, ಇದಕ್ಕೆ ಪೂರಕವಾಗಿಯೇ ನಮ್ಮ ಸರ್ಕಾರ ಸಮರ್ಥವಾಗಿ ಕೆಲಸ ಮಾಡುತ್ತಿರುವಾಗ, ಸುಮ್ಮನೇ ಸೃಷ್ಟಿಸುವ ಒತ್ತಡಗಳು ಜನರಲ್ಲಿ ಗೊಂದಲ ಮೂಡಿಸದಿರಲಿ ಎಂದು ಹೇಳಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ಸಿಎಂ ಮಹತ್ವದ ಸಭೆ!
Next: ಮೆಕ್ಕೆಜೋಳ ಆಮದು ನಿಲ್ಲಿಸುವಂತೆ ಕೇಂದ್ರಕ್ಕೆ ಒತ್ತಾಯ: ಸಿಎಂ

Views:

37

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.