Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಣ, ಗುಂಪುಗಾರಿಕೆ ರಾಜಕೀಯ ನನ್ನ ರಕ್ತದಲ್ಲೇ ಇಲ್ಲ
  • Bangalore
  • Politics
  • State

ಬಣ, ಗುಂಪುಗಾರಿಕೆ ರಾಜಕೀಯ ನನ್ನ ರಕ್ತದಲ್ಲೇ ಇಲ್ಲ

Praja Vahini November 21, 2025
WhatsApp Image 2025-11-21 at 17.12.59
Spread the love

ಬೆಂಗಳೂರು: ನನ್ನ ಬಳಿ ಯಾವ ಬಣವೂ ಇಲ್ಲ. ನಾನು ಯಾವುದೇ ಬಣದ ನಾಯಕನಲ್ಲ. ನಾನು 140 ಶಾಸಕರ ಅಧ್ಯಕ್ಷ. 140 ಶಾಸಕರೂ ನನಗೆ ಮುಖ್ಯ. ಗುಂಪುಗಾರಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾವ ಗುಂಪನ್ನು ದೆಹಲಿಗೆ ಕರೆದುಕೊಂಡು ಹೋಗಲು ನನಗೆ ಇಚ್ಛೆ ಇಲ್ಲ. ನಾನು ಗುಂಪುಗಾರಿಕೆ ಮಾಡುವುದಿಲ್ಲ. ಮಾನ್ಯ ಮುಖ್ಯಮಂತ್ರಿಗಳು ಸಚಿವ ಸಂಪುಟ ಪುನಾರಚನೆ ಮಾಡುವುದಾಗಿ ಘೋಷಿಸಿದ್ದಾರೆ. ಹೀಗಾಗಿ ಮಂತ್ರಿ ಸ್ಥಾನದ ಆಕಾಂಕ್ಷೆ ಇರುವವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ದಿಲ್ಲಿಗೆ ಹೋಗುವುದು ಸಹಜ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಹಕ್ಕು ಅವರಿಗೆ ಇದೆ. ನಾನು ಯಾರನ್ನೂ ಕರೆದುಕೊಂಡು ಹೋಗಿಲ್ಲ. ಕೆಲವರು ಮುಖ್ಯಮಂತ್ರಿಗಳ ಜೊತೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದರೆ, ಮತ್ತೆ ಕೆಲವರು ತಾವಾಗಿಯೇ ಹೋಗಿದ್ದಾರೆ. ಇದರಲ್ಲಿ ತಪ್ಪೇನಿದೆ? ನಾವು ಯಾರನ್ನೂ ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಸಿಎಂಗೆ ಆಲ್ ದಿ ಬೆಸ್ಟ್

ಒಂದು ಪಕ್ಷದ ಶಾಸಕರು ಮಂತ್ರಿ, ಮುಖ್ಯಮಂತ್ರಿ ಆಗಲು ಅರ್ಹರಿರುತ್ತಾರೆ. ಮಾನ್ಯ ಮುಖ್ಯಮಂತ್ರಿಗಳು ಐದು ವರ್ಷ ತಾವೇ ಸಿಎಂ ಆಗಿ ಇರುವುದಾಗಿ ಹೇಳಿದ್ದಾರೆ. ಐ ವಿಶ್ ಹಿಮ್ ಆಲ್ ದ ಬೆಸ್ಟ್ (ಅವರಿಗೆ ಶುಭ ಕೋರುತ್ತೇನೆ”) ಎಂದರು.

ಸಿಎಂ ತಮ್ಮ ವಿಚಾರಧಾರೆ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ. ನಾನುಂಟು ಹೈಕಮಾಂಡ್ ಉಂಟು. ಹೈಕಮಾಂಡ್ ಹೇಳಿದಂತೆ ಕೇಳುವುದಾಗಿ ಸಿಎಂ ಹೇಳಿದ್ದಾರೆ. ನಾನೂ ಹೇಳಿದ್ದೇನೆ. ಅದಕ್ಕೆ ನಾವು ಬದ್ಧ. ಅಷ್ಟು ಬಿಟ್ಟರೆ ಬೇರೇನೂ ಇಲ್ಲ ಎಂದರು.  ಇದನ್ನೂ ಓದಿ:  ಮೆಕ್ಕೆಜೋಳ ಆಮದು ನಿಲ್ಲಿಸುವಂತೆ ಕೇಂದ್ರಕ್ಕೆ ಒತ್ತಾಯ: ಸಿಎಂ

ಎರಡೂವರೆ ವರ್ಷಗಳಿಂದ ಡಿನ್ನರ್ ಮೀಟಿಂಗ್ ಆಗುತ್ತಲೇ ಇವೆ

ನನಗೆ ಡಿನ್ನರ್ ಸಭೆಗಳ ಬಗ್ಗೆ ಗೊತ್ತಿಲ್ಲ. ನಾಲ್ಕೈದು ಡಿಸಿಎಂ ಮಾಡಬೇಕು, ಅಧ್ಯಕ್ಷರ ಬದಲಾವಣೆ ಮಾಡಬೇಕು ಎಂದು ಎರಡೂವರೆ ವರ್ಷಗಳಿಂದ ಡಿನ್ನರ್ ಸಭೆಗಳನ್ನು ಮಾಡುತ್ತಲೇ ಇದ್ದಾರೆ. ಇನ್ನು ಹೆಚ್ಚು ಸಭೆಗಳನ್ನು ಮಾಡಲಿ” ಎಂದು ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಮೆಕ್ಕೆಜೋಳ ಆಮದು ನಿಲ್ಲಿಸುವಂತೆ ಕೇಂದ್ರಕ್ಕೆ ಒತ್ತಾಯ: ಸಿಎಂ
Next: ಅಹಿಂದ ಪಕ್ಷವಲ್ಲಾ, ಸಂಘಟನ ಶಕ್ತಿ-ಡಾ.ಮೇಟಿ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.