ಚಿಕ್ಕಬಳ್ಳಾಪುರ: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಬದಲಾವಣೆ ಆಗುತ್ತಾರೆ ಎಂಬ ಕೂಗು ಜೋರಾಗಿ ಕೇಳುತ್ತಿರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಚ್ಚರಿ ಹೇಳಿಕೆಯನ್ನು ಹೇಳಿದ್ದಾರೆ.
ಹೈಕಮಾಂಡ್ ಏನೇ ತೀರ್ಮಾನ ಮಾಡಿದರು ಅದಕ್ಕೆ ನಾನು ಬದ್ಧವಿದ್ದೇನೆ, ಈಗಲೂ ಕೂಡ ನಾನು ಹೈಕಮಾಂಡ್ ಹೇಳಿದಂತೆ ಕೇಳುತ್ತಿದ್ದೇನೆ ಎಂದು ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಹೈಟೆಕ್ ರೇಷ್ಮೆ ಗೂಡಿನ ಮಾರುಕಟ್ಟೆಗೆ ಭೂಮಿ ಪೂಜೆಗೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಅವರು ಮಾತನಾಡಿ, ಎರಡೂವರೆ ವರ್ಷ ಆಗಲಿ ಆಮೇಲೆ ಸಂಪುಟ ಪುನಾರಚನೆ ಮಾಡೋಣ ಅಂತ ಹೇಳಿದ್ದೆ. ಈಗಲೂ ಹೈಕಮಾಂಡ್ ಇರು ಅಂದ್ರೆ ಇರ್ತೀನಿ ಅಂತ ಸ್ಪಷ್ಟಪಡಿಸಿದ್ರು. ಇದನ್ನೂ ಓದಿ: ಡಿಕೆಶಿ ಸಿಎಂ ಆಗಲೆಂದು ಆಶೀರ್ವದಿಸಿದ ನಾಗ ಸಾಧುಗಳು!
ಎಲ್ಲಾ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕೆಲಸಗಳನ್ನ ಮಾಡುತ್ತಿದ್ದೇವೆ. ಬಿಜೆಪಿಯವರಿಗೆ ಸುಳ್ಳೇ ಮನೆ ದೇವರು. ಸುಳ್ಳು ಹೇಳೋದು ಅವರ ಕೆಲಸ. ಗ್ಯಾರಂಟಿಗಳಿಗೆ 1 ಲಕ್ಷ ಕೋಟಿ ಖರ್ಚು ಮಾಡಿದ್ದೇವೆ. ಹೈಕಮಾಂಡ್ ಏನು ಹೇಳುತ್ತಾರೆ ಅದನ್ನೇ ಕೇಳೋದು. ನನ್ನನ್ನೇ ಮುಂದುವರೆಸಿ ಅಂದ್ರೆ ನಾನೇ ಮುಂದುವರೆಯುತ್ತೇನೆ. ಹೈಕಮಾಂಡ್ ಹೇಳಿದ್ರೆ ನಾನು ಒಪ್ಕೋಬೇಕು ಡಿಸಿಎಂ ಡಿಕೆ ಶಿವಕುಮಾರ್ ಸಹ ಒಪ್ಪಿಕೊಳ್ಳಬೇಕು ಎಂದರು.
