Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಅನಿಷ್ಟ ರೈತವಿರೋಧಿ ಕಾಂಗ್ರೆಸ್ ಸರಕಾರ: ವಿಜಯೇಂದ್ರ
  • Uncategorized

ಅನಿಷ್ಟ ರೈತವಿರೋಧಿ ಕಾಂಗ್ರೆಸ್ ಸರಕಾರ: ವಿಜಯೇಂದ್ರ

Praja Vahini November 25, 2025
WhatsApp Image 2025-11-25 at 14.57.03
Spread the love

ದಾವಣಗೆರೆ: ರೈತ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಇಂದು (ಮಂಗಳವಾರ ನ. 25) ಹೋರಾಟಕ್ಕೆ ಚಾಲನೆ ನೀಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.

ಪ್ರತಿಭಟನೆಯ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸದೇ ಇರುವುದು ಅಕ್ಷಮ್ಯ ಅಪರಾಧ ಎಂದು ಅವರು ಆಕ್ಷೇಪಿಸಿದ್ದಾರೆ. ರಾಜ್ಯದಲ್ಲಿರುವ ಅನಿಷ್ಟ ರೈತವಿರೋಧಿ ಕಾಂಗ್ರೆಸ್ ಸರಕಾರವು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ; ಕಬ್ಬು ಬೆಳೆಗಾರರ ಸಮಸ್ಯೆ ಇತ್ಯರ್ಥವಾಗಿಲ್ಲ ಎಂದು ಟೀಕಿಸಿದರು.

ಮೆಕ್ಕೆ ಜೋಳದ ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ಲಕ್ಷ್ಮೇಶ್ವರದಲ್ಲಿ ಹೋರಾಟ ನಡೆಯುತ್ತಿದೆ. ನವಲಗುಂದದಲ್ಲಿ ರೈತ ಮುಖಂಡ ಶಂಕ್ರಣ್ಣ ಅಂಬಳಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಬಾಗಲಕೋಟೆ, ಶಿವಮೊಗ್ಗ ಸೇರಿ ಅನೇಕ ಜಿಲ್ಲೆಗಳಲ್ಲಿ ಹೋರಾಟ ನಡೆಯುತ್ತಿದೆ. ಕೇಂದ್ರವು ಬೆಂಬಲ ಬೆಲೆ ಘೋಷಿಸಿದ್ದರೂ ರಾಜ್ಯ ಸರಕಾರವು ಖರೀದಿ ಕೇಂದ್ರ ತೆರೆದಿಲ್ಲ ಎಂದು ಆಕ್ಷೇಪಿಸಿದರು.

ಮುಖ್ಯಮಂತ್ರಿಗಳು ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಬೇಕು. ತುಂಗಭದ್ರಾ ಅಣೆಕಟ್ಟಿಗೆ 32 ಕ್ರಸ್ಟ್ ಗೇಟ್ ಅಳವಡಿಸದೇ ಕೊಪ್ಪಳ, ಬಳ್ಳಾರಿ, ವಿಜಯನಗರ, ರಾಯಚೂರು ಸುತ್ತಲಿನ ರೈತರು ಎರಡನೇ ಬೆಳೆ ಬೆಳೆಯಲು ಆಗುತ್ತಿಲ್ಲ; ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಅನ್ಯಾಯ ಮಾಡಿದೆ. ಅವರಿಗೆ ಎಕರೆಗೆ 25 ಸಾವಿರ ಪರಿಹಾರ ಕೊಡಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ: ಜಿಟಿಟಿಸಿ ಮೂಲಕ ಗ್ರಾಮೀಣ ಅಭ್ಯರ್ಥಿಗಳಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಲು ಸಾಧ್ಯವಾಗಿದೆ: ಸಿಎಂ

ರಾಜ್ಯದ ರೈತರ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸದೇ ಇಡೀ ಸಚಿವಸಂಪುಟವು ದೆಹಲಿಯಲ್ಲಿ ಕುಳಿತಿದೆ. ಮುಖ್ಯಮಂತ್ರಿಗಳು ಮೆಕ್ಕೆಜೋಳ ಖರೀದಿ ಕೇಂದ್ರದ ಕುರಿತು ಚರ್ಚಿಸಲು ಸಭೆ ಕರೆದರೆ ಕೃಷಿ ಸಚಿವರು ದೆಹಲಿಯಲ್ಲಿದ್ದರು ಎಂದು ಟೀಕಿಸಿದರು.

ರೈತ ಮೋರ್ಚಾ ರಾಜ್ಯ ಅಧ್ಯಕ್ಷ ನಡಹಳ್ಳಿ, ರಾಜ್ಯದ ಹಿರಿಯ ನಾಯಕ ಸಿ.ಟಿ.ರವಿ, ಮುಖಂಡರಾದ ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ ಸೇರಿ ಜಿಲ್ಲೆಯ ನಾಯಕರು ಒಟ್ಟಾಗಿ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ.

About the Author

Praja Vahini

Editor

View All Posts

Spread the love

Post navigation

Previous: ಜಿಟಿಟಿಸಿ ಮೂಲಕ ಗ್ರಾಮೀಣ ಅಭ್ಯರ್ಥಿಗಳಿಗೆ ಹೆಚ್ಚಿನ ಉದ್ಯೋಗ ಕಲ್ಪಿಸಲು ಸಾಧ್ಯವಾಗಿದೆ: ಸಿಎಂ
Next: ನನ್ನ ಕಷ್ಟಕಾಲದಲ್ಲಿ ಜನರು ಮಾಡಿದ್ದ ಪ್ರಾರ್ಥನೆ ಮರೆಯುವುದಿಲ್ಲ: ಡಿಕೆಶಿ

Views:

26

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.