ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸುಮಾರು 10 ಕಡೆ ನಿನ್ನೆ (ಮಂಗಳವಾರ ನವೆಂಬರ್ 25) ರಂದು ಲೋಕಾಯುಕ್ತ ಅಧಿಕಾರಿಗಳು ಏಕ ಕಾಲಕ್ಕೆ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಚಾಟಿಪಿಸಿದ್ದಾರೆ.
ಹೌದು, ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಇಂಚಿಂಚು ಶೋಧ ನಡೆಸಿದ್ದು, ಭ್ರಷ್ಟ ಅಧಿಕಾರಿಗಳ ಖಜಾನೆ ಕಂಡು ಲೋಕಾಯುಕ್ತ ಪೊಲೀಸರು ಶಾಕ್ ಆಗಿದ್ದಾರೆ.
ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ನಡೆದ ದಾಳಿಯಲ್ಲಿ ಚಿನ್ನ, ಬೆಳ್ಳಿ, ನಗದು ಹಾಗೂ ಅನೇಕ ಆಸ್ತಿ ದಾಖಲೆಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ಬಂಪರ್ ಕೊಡುಗೆ ನೀಡಿದ ಸಿಎಂ
ಲೋಕಾಯುಕ್ತ ದಾಳಿ ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿ RTO ಶಾಖಾಧ್ಯಕ್ಷ ಕೃಷ್ಣಮೂರ್ತಿ P, ಮಂಡ್ಯ ನಗರ ಪಾಲಿಕೆ CAO ಪುಟ್ಟಸ್ವಾಮಿ, ಬೀದರ್ನ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಪ್ರೇಮ್ ಸಿಂಗ್, ಮೈಸೂರಿನ ರೆವಿನ್ಯೂ ಇನ್ಸ್ಪೆಕ್ಟರ್ ರಾಮಸ್ವಾಮಿ C, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕ ಸುಭಾಶ್ ಚಂದ್ರ, ಪಶು ಕ್ಲಿನಿಕ್ ಹಿರಿಯ ಪರೀಕ್ಷಕ ಸತೀಶ್, ಶಿವಮೊಗ್ಗ SIMS ಕಾಲೇಜಿನ FDA ಲಕ್ಷ್ಮೀಪತಿ C.N., ದಾವಣಗೆರೆ APMC ಸಹಾಯಕ ನಿರ್ದೇಶಕ ಪ್ರಭು J ಹಾಗೂ ಮಡಿಕೇರಿ PWD ಇಂಜಿನಿಯರ್ ಗಿರೀಶ್ D.M. ಅವರ ಮನೆ-ಕಚೇರಿಗಳಲ್ಲಿ ನಡೆದಿವೆ.
