ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರ ನಡುವಿನ ಕುರ್ಚಿ ಕಿತ್ತಾಟದ ಕದನ ಜೋರಾಗಿಯೇ ನಡೆಯುತ್ತಿದೆ. ಈ ಕದನದಲ್ಲಿ ಯಾರಿಗೆ ಏನು ಲಾಭವಾಗುತ್ತದೆ ಗೊತ್ತಿಲ್ಲ. ಆದರೆ ಇದರಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂದು ಬಿಜೆಪಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬೇಸರ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಇಂದು (ಶುಕ್ರವಾರ ನವಂಬರ್ 28) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಬ್ಬರ ನಡುವಿನ ಕುರ್ಚಿ ಕಿತ್ತಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ. ಕಾಂಗ್ರೆಸ್‌ನ ಆತಂರಿಕ ವಿಚಾರದ ಬಗ್ಗೆ ನಮಗೆ ಯಾವುದೇ ಕಾಳಜಿ ಇಲ್ಲ ಅಂತ ಕಾಂಗ್ರೆಸ್ ನಾಯಕರೇ ಹೇಳಿದ್ದಾರೆಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಹತ್ವಕಾಂಕ್ಷಿ ಯೋಜನೆಗಳನ್ನ ಲೋಕಾರ್ಪಣೆ ಮಾಡಿದ ಸಿಎಂ
ರಾಜ್ಯದ ಜನ ಅವರನ್ನ ಆಡಳಿತ ಪಕ್ಷವಾಗಿ ಆಯ್ಕೆ ಮಾಡಿದ್ದಾರೆ. ಜನರ ಪರವಾಗಿ ಆಡಳಿತ ನಡೆಸುವುದು ಅವರ ಆದ್ಯ ಕರ್ತವ್ಯವಾಗಿದೆ. ಅವರ ಪಕ್ಷದಲ್ಲಿ ಆಂತರಿಕವಾಗಿ ಏನು ನಡೆಯುತ್ತಿದೆಯೋ ಅದು ನಡೆಯಲ್ಲಿ, ಆದ್ರೆ ರಾಜ್ಯದ ಆಡಳಿತ ಜನರ ಹಿತಕ್ಕಾಗಿ ಕೆಲಸ ಮಾಡುವುದು ಮೊದಲ ಕರ್ತವ್ಯ ಅದನ್ನ ಮಾಡಲಿ ಎಂದು ಹೇಳಿದ್ದಾರೆ.
