ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ ಬಳಿಕ ಮಹತ್ವದ ಸುದ್ದಿಗೋಷ್ಠಿಯನ್ನು ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಅವರು, ತಮ್ಮೆಲ್ಲರ ಸಹಕಾರದಿಂದ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಿದೆ. ಜನರಿಗೆ ಕೊಟ್ಟಿರುವ ಮಾತನ್ನು ನಾವು ಉಳಿಸಿಕೊಂಡು ಬರುತ್ತಿದ್ದೇವೆ. ರಾಜ್ಯದ ಜನತೆ ನಮ್ಮ ಮೇಲೆ ಅಪಾರವಾದ ವಿಶ್ವಾಸ ನಂಬಿಕೆ ಇಟ್ಟಿದ್ದಾರೆ. ನಂಬಿಕೆ ಇಡುವುದರ ಜೊತೆಗೆ ನಮಗೆ ಸಹಕಾರವನ್ನು ರಾಜ್ಯದ ಜನತೆ ನೀಡುತ್ತಿದ್ದಾರೆ ಎಂದು ಹೇಳಿದರು.
ಜನರ ಆಸೆ, ಆಕಾಂಕ್ಷೆ ಗಳನ್ನ ಈಡೇರಿಸಬೇಕಾಗಿರುವುದು ನಮ್ಮೆಲ್ಲರ ಕರ್ತವ್ಯ. ಆ ನಿಟ್ಟಿನಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಚನೆಯಾಗಿದ್ದು, ಹಿಂದೆ ಹೈಕಮಾಂಡ್ ಯಾವ ತೀರ್ಮಾನ ತೆಗೆದುಕೊಂಡಿದೆ ಅದೇ ಪ್ರಕಾರ ನಾವು ಪ್ರತಿಯೊಂದು ಕೆಲಸವನ್ನು ಮಾಡಿಕೊಂಡು ಹೋಗುತ್ತಿದ್ದೇವೆ.
ಡಿಸೆಂಬರ್ 8ನೇ ತಾರೀಕಿನಂದು ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿದ್ದು, ಅಲ್ಲೂ ಕೂಡ ನಾವು ಪ್ರತಿ ತಂತ್ರವನ್ನು ಹೂಡಿ ವಿರೋಧ ಪಕ್ಷವನ್ನು ಹೇಗೆ ಮಾಣಿಸಬೇಕು ಎಂಬುದರ ಬಗ್ಗೆ ಯೋಚಿಸುತ್ತಿವೆ ಎಂದು ಹೇಳಿದರು.
ರಾಜಕೀಯವಾಗಿ ನನ್ನದು ಹಾಗೂ ಸಿಎಂ ಸಿದ್ದರಾಮಯ್ಯ ಅವರದು ಒಂದೇ ತೀರ್ಮಾನ
ಪಕ್ಷದ ವರಿಷ್ಠರು ಅಂದರೆ ಹೈಕಮಾಂಡ್ ಏನು ಹೇಳುತ್ತದೆ ಆ ರೀತಿ ಹಿಂದೇನು ಕೆಲಸ ಮಾಡಿಕೊಂಡು ಬಂದಿದ್ದೇವೆ ಅದೇ ರೀತಿ ಮುಂದೇನು ಕೂಡ ಇದೇ ರೀತಿ ಕೆಲಸ ಮಾಡಿಕೊಂಡು ಹೋಗುತ್ತೇವೆ ಎಂದು ಹೇಳಿದರು.
ನಮ್ಮದು ಯಾವ ಗುಂಪು ಇಲ್ಲ.
ನನಗೆ ಗುಂಪಿನ ಅವಶ್ಯಕತೆ ಇಲ್ಲ. ನಮ್ಮದು ಒಂದೇ ಒಂದು ಗುಂಪು ಅದು ಕಾಂಗ್ರೆಸ್ ಗುಂಪು ಎಂದು ಹೇಳಿದರು. ಇದನ್ನೂ ಓದಿ: ಸಿಎಂ-ಡಿಸಿಎಂ ಹೈ ವೋಲ್ಟೇಜ್ ಬ್ರೇಕ್ ಫಾಸ್ಟ್ ಮೀಟಿಂಗ್
ಹೈಕಮಾಂಡ್ ಆದೇಶದ ಮೇರೆಗೆ ಸ್ವಲ್ಪ ದಿನ ಕಾಯಿರಿ ಎಂದು ಹೇಳಿದ್ದರು. ಅಂದು ಕೂಡ ನಾನು ಯಾವುದೇ ಒಂದು ಶಬ್ದವನ್ನು ಕೂಡ ಮಾತನಾಡಿಲ್ಲ ಎಂದು ಹೇಳಿದರು. ಇವತ್ತು ಕೂಡ ನಾನು ಯಾವುದೇ ರೀತಿ ಮಾತನಾಡುವುದಿಲ್ಲ ನಾವು ಒಟ್ಟಿಗೆ ಸೇರಿಕೊಂಡು ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದರು.
ಹೈಕಮಾಂಡ್ ಏನು ಹೇಳುತ್ತದೆ ಅದೇ ರೀತಿ ನಾವಿಬ್ಬರು ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗುತ್ತೇವೆ. ಪ್ರತಿಯೊಬ್ಬ ಶಾಸಕರನ್ನು ಎಷ್ಟು ಶಕ್ತಿಶಾಲಿಯಾಗಿ ಬೆಳೆಸಬೇಕು, ಪಕ್ಷವನ್ನು ಯಾವ ರೀತಿ ಶಕ್ತಿಶಾಲಿಯಾಗಿ ಬಳಸಬೇಕು ಅದು ನಮ್ಮಿಬ್ಬರ ಕರ್ತವ್ಯಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
