Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಭಿನ್ನಾಭಿಪ್ರಾಯಗಳಿಗೆ ಬ್ರೇಕ್ ಹಾಕಿದ ಸಿಎಂ-ಡಿಸಿಎಂ
  • Bangalore
  • Politics
  • State

ಭಿನ್ನಾಭಿಪ್ರಾಯಗಳಿಗೆ ಬ್ರೇಕ್ ಹಾಕಿದ ಸಿಎಂ-ಡಿಸಿಎಂ

Praja Vahini November 29, 2025 1 minute read
WhatsApp Image 2025-11-29 at 14.17.05
Spread the love

ಬೆಂಗಳೂರು: ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾನು ಹಾಗೂ ಡಿ.ಕೆ.ಶಿವಕುಮಾರ್ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಿ ಸರ್ಕಾರದ ವಿರುದ್ಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ತಮ್ಮ ನಿವಾಸದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೊಂದಿಗೆ ಇಂದು (ಶನಿವಾರ ನ. 29) ಜಂಟಿ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು, ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ. ನಾವಿಬ್ಬರೂ ಪಕ್ಷದ ವರಿಷ್ಠರು ಸೂಚಿಸಿದಂತೆ ನಡೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿದ್ದೇವೆ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವ ಕೆಲಸ ಮಾಡಲು ಸೂಚಿಸಿದ್ದಾರೆ. ನಾಳೆಯಿಂದ ಯಾವುದೇ ಗೊಂದಲ ಇರುವುದಿಲ್ಲ. ಈಗಲೂ ಇಲ್ಲ . ನಮ್ಮ ನಡುವೆ ಆಗಿರುವ ಒಪ್ಪಂದದ ಬಗ್ಗೆ ಹೈ ಕಮಾಂಡಿಗೆ ಮಾಹಿತಿ ನೀಡಲಾಗುವುದು ಎಂದರು.

ಆದರೆ ಗೊಂದಲ ಸೃಷ್ಟಿಯಾಗಿದೆ. ಕೆಲವು ಮಾಧ್ಯಮಗಳು ಇದನ್ನು ಸೃಷ್ಟಿಸಿದ್ದಾರೆ ಎಂದರು.   ಕೆಲವು ಶಾಸಕರು ಸಚಿವ ಸಂಪುಟ ಪುನರ್ ರಚನೆಗೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿದರಬಹುದು. ಹಾಗೆಂದು ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಕೆಲವರು ಇಂಥ ಕಾರಣಕ್ಕೆ ಭೇಟಿ ನೀಡಿರುವುದಾಗಿ ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಅಧಿಕಾರ ಹಂಚಿಕೆ ವಿವಾದಕ್ಕೆ ಪ್ರಮುಖ ಕಾರಣ ಬಿಚ್ಚಿಟ್ಟ ಸಿಎಂ!

ಉಪಹಾರ ಸಭೆಯಲ್ಲಿ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್, ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು. ಉಪಹಾರ ಸಭೆಯಲ್ಲಿ ಏನೂ ಮಾತನಾಡಿಲ್ಲ. ಡಿ.ಕೆ.ಶಿವಕುಮಾರ್  ಮತ್ತು ನಾನು ನಮ್ಮ ಮನೆಯಲ್ಲಿ ಒಟ್ಟಿಗೆ ಉಪಹಾರ ಸೇವಿಸಿದ್ದೇವೆ. ಪಕ್ಷದ ವರಿಷ್ಠರಾದ ವೇಣುಗೋಪಾಲ್ ಅವರು ಪೊನ್ನಣ್ಣ ಅವರಿಗೆ ಕರೆ ಮಾಡಿ ಡಿ.ಕೆ.ಶಿವಕುಮಾರ್ ಅವರನ್ನು ಉಪಾಹಾರಕ್ಕೆ ಕರೆಯಲು ಸೂಚಿಸಿದ್ದರು. ಡಿ.ಕೆ ಶಿವಕುಮಾರ್ ಅವರಿಗೂ ಇದನ್ನೇ ತಿಳಿಸಿದರು. ಡಿ.ಕೆ. ಶಿವಕುಮಾರ್ ಅವರೇ, ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಆಹ್ವಾನವಿತ್ತಿದ್ದರು. ಮತ್ತೊಂದು ದಿನ ಊಟಕ್ಕೆ ಬರೋಣ ಎಂದು ತಿಳಿಸಿ ನಮ್ಮ ಮನೆಗೇ ಉಪಾಹಾರಕ್ಕೆ ಕರೆದೆವು ಎಂದರು.

2028 ರಲ್ಲಿ ಕಾಂಗ್ರೆಸ್ ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ತೀರ್ಮಾನ: ಕಾರ್ಯತಂತ್ರಗಳ ಬಗ್ಗೆ ಚರ್ಚೆ

ಇತ್ತೀಚಿನ ದಿನಗಳಲ್ಲಿ ಅನಗತ್ಯವಾಗಿ ಕೆಲವು ಗೊಂದಲಗಳು ನಿರ್ಮಾಣವಾಗಿವೆ. ನಾವು ಈ ಬಗ್ಗೆ ಮಾತನಾಡಿದ್ದೇವೆ. 2028 ರ  ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಕಾರ್ಪೋರೇಷನ್, ತಾಲ್ಲೂಕು , ಜಿಲ್ಲಾ ಹಾಗೂ ಗ್ರಾಮ ಪಂಚಾಯತ್ ಚುನಾವಣೆಗಳು ಬಹಳ ಮುಖ್ಯವಾಗಿದ್ದು, ಈ ಬಗ್ಗೆ ಚರ್ಚೆ ಮಾಡಿದ್ದೇವೆ. 2028 ರಲ್ಲಿ ಕಾಂಗ್ರೆಸ್ ನ್ನು ಮತ್ತೆ ಅಧಿಕಾರಕ್ಕೆ ತರಬೇಕೆಂದು ಚರ್ಚಿಸಲಾಗಿದೆ.  2022 ರ ವಿಧಾನ ಸಭಾ ಚುನಾವಣೆಯಲ್ಲಿ ಕೆಲಸ ಮಾಡಿದಂತೆಯೇ ಮುಂದೆಯೂ ಒಟ್ಟಿಗೆ ಸಾಗುವ ತೀರ್ಮಾನ ಮಾಡಿದ್ದೇವೆ ಎಂದರು.

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಈಗಲೂ ಇಲ್ಲ,  ಮುಂದೆಯೂ ಇರುವುದಿಲ್ಲ. ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಪ್ರಾರಂಭವಾಗಲಿದೆ. ನಾವು  ವಿರೋಧ ಪಕ್ಷದವರನ್ನು ಸಮರ್ಥವಾಗಿ ಇವರಿಗೆ ಎದುರಿಸಿದ್ದೇವೆ ಮುಂದೆಯೂ ಎದುರಿಸುತ್ತೇವೆ. ಬಿಜೆಪಿ,  ಜೆಡಿಎಸ್ ಅಪಪ್ರಚಾರ, ಸುಳ್ಳು ಆರೋಪಗಳನ್ನು, ಅಪವಾದಗಳನ್ನು ಮಾಡುವುದು ಬಿಜೆಪಿ ಹಾಗೂ ಜೆಡಿಎಸ್ ಅವರ ಚಾಳಿ. ಇವರಿಬ್ಬರನ್ನೂ ಸಮರ್ಥವಾಗಿ ನಾನು ಮತ್ತು ಉಪಮುಖ್ಯಮಂತ್ರಿಗಳು ಎದುರಿಸುತ್ತೇವೆ. ಅದಕ್ಕೆ ಅಗತ್ಯವಿರುವ ಕಾರ್ಯತಂತ್ರಗಳನ್ನು ರೂಪಿಸಿಕೊಂಡಿದ್ದೇವೆ ಎಂದರು.

 

 

About the Author

Praja Vahini

Editor

View All Posts

Spread the love

Post navigation

Previous: ಅಧಿಕಾರ ಹಂಚಿಕೆ ವಿವಾದಕ್ಕೆ ಪ್ರಮುಖ ಕಾರಣ ಬಿಚ್ಚಿಟ್ಟ ಸಿಎಂ!
Next: ಗ್ರಾಮಕ್ಕೆ ಬಾಸ್ ವ್ಯವಸ್ಥೆ, ಸಚಿವರಿಗೆ ಧನ್ಯವಾದ ತಿಳಿಸಿದ ವಿದ್ಯಾರ್ಥಿಗಳು

Views:

35

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.