ಬೆಂಗಳೂರು: ವಿಧಾನಸೌಧದ ನಿರ್ಮಾತೃ, ಮಾಜಿ ಮುಖ್ಯಮಂತ್ರಿಗಳೂ, ಕರ್ನಾಟಕ ಏಕೀಕರಣಕ್ಕಾಗಿ ಶ್ರಮಿಸಿದ ರಾಜ್ಯ ಕಂಡ ಹೆಮ್ಮೆಯ ನಾಯಕರಾದ ಕೆಂಗಲ್ ಹನುಮಂತಯ್ಯ ಅವರ ಪುಣ್ಯಸ್ಮರಣೆಯ ಪ್ರಯುಕ್ತ ವಿಧಾನಸೌಧದ ಆವರಣದಲ್ಲಿರುವ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪನಮನ ಸಲ್ಲಿಸಿ ಗೌರವಿಸಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿಗಳು ಕೆಂಗಲ್ ಹನುಮಂತಯ್ಯ ನವರು ವಿಧಾನಸೌಧವನ್ನು ರಾಜ್ಯಕ್ಕೆ ಬಿಟ್ಟು ಹೋಗಿರುವ ಸಾಕ್ಷಿ ಎಂದು ಹೇಳಿದರು. ಇದನ್ನೂ ಓದಿ: ಪುಟ್ಟಣ್ಣ ಕಣಗಾಲ್ ಕನ್ನಡ ಸಂಸ್ಕೃತಿಯ ನೇಕಾರರು: ಕೆ.ವಿ.ಪಿ
ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
