ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ನಗರಕ್ಕೆ ಕೇಂದ್ರ ಸರ್ಕಾರವು 5700 ಕ್ಕೂ ಹೇಚ್ಚು ಎಲೆಕ್ಟ್ರಿಕ್ ಬಸ್ ಗಳನ್ನು ಬೆಂಗಳೂರಿ ನಗರಕ್ಕೆ ನೀಡಿರುವುದರಿಂದ ಇದು ನಮಗೆ ಸಂತಸ ತಂದಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, FAME ಯೋಜನೆಗಳು ಮತ್ತು PM E-ಡ್ರೈವ್ ಮೂಲಕ 21,000 ಕ್ಕೂ ಹೆಚ್ಚು ವಿದ್ಯುತ್ ಬಸ್ಗಳನ್ನು ನೀಡಲಾಗಿದೆ ಎಂದು ತಿಳಿಸಿತು. ಇವುಗಳಲ್ಲಿ 5,700 ಕ್ಕೂ ಹೆಚ್ಚು ಬಸ್ಗಳನ್ನು ಬೆಂಗಳೂರಿಗೆ ಹಂಚಿಕೆ ಮಾಡಲಾಗಿದೆ ಮತ್ತು 1,221 ಬಸ್ಗಳನ್ನು ಕಾರ್ಯಗತಗೊಳಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ, ವಿವಿಧ ಕಾರ್ಯಕ್ರಮಗಳಿಗೆ ಚಾಲನೆ
