ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಕೂಗು ಜೋರಾಗಿ ಕೇಳುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿ ಸಿಎಂ ಕುರ್ಚಿ ಕದನಕ್ಕೆ ಬ್ರೇಕ್ ಹಾಕಿದ್ದಾರೆ.
ಇನ್ನು ಸಿಎಂ ಕುರ್ಚಿ ಕದನಕ್ಕೆ ಬ್ರೇಕ್ ಹಾಕಿದರು ಕೂಡ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ವಾಟಾಳ್ ನಾಗರಾಜ್ ಅವರು ಬ್ಯಾಟ್ ಬೀಸಿದ್ದಾರೆ.
ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವುದು ರಾಜ್ಯಕ್ಕೆ ಅನ್ಯಾಯಕರ ಹಾಗೂ ಅಪಾಯಕಾರಿ ಎಂದಿದ್ದಾರೆ. ಅಧಿಕಾರಿಗಳ ವರ್ಗಾವಣೆ ಮಾಡಿದಂತೆ ಸಿಎಂ ಬದಲಾವಣೆ ಮಾಡುವುದು ಸರಿಯಲ್ಲ ಎಂದು ಅವರು ಎಚ್ಚರಿಸಿದ್ದಾರೆ.
ಸಿದ್ದರಾಮಯ್ಯ ಅವರಂತೆ 3 ಪಕ್ಷಗಳಲ್ಲಿಯೂ ಪ್ರಭಾವಿ ಹಾಗೂ ಸಾಮರ್ಥ್ಯ ಹೊಂದಿದ ನಾಯಕ ಮತ್ತೊಬ್ಬರು ಇಲ್ಲ ಎಂದು ವಾಟಾಳ್ ನಾಗರಾಜ್ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಕುರುಬ ಸಮಾಜದಿಂದ ಚೌಧರಿ ಅವರಿಗೆ ಸನ್ಮಾನ
ಸಿಎಂ ಆರೋಗ್ಯವಾಗಿರುವ ತನಕ ಬದಲಾವಣೆ ಯೋಚನೆ ಮಾಡಬಾರದಿದ್ದು, ದುಡುಕಿ ತೆಗೆದುಕೊಳ್ಳುವ ನಿರ್ಧಾರ ರಾಜ್ಯಕ್ಕೆ ಅಪಾಯಕಾರಿಯಾಗಿದೆ ಎಂದು ಹೇಳಿದ್ದಾರೆ.
