Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮಹಿಳೆಯರು ಕರುಣೆಯ ಕಡಲು, ಮಮತೆಯ ಮುಗಿಲು: ಡಿಕೆಶಿ
  • Bangalore
  • Politics
  • State

ಮಹಿಳೆಯರು ಕರುಣೆಯ ಕಡಲು, ಮಮತೆಯ ಮುಗಿಲು: ಡಿಕೆಶಿ

Praja Vahini December 4, 2025 1 minute read
WhatsApp Image 2025-12-04 at 16.09.56 (1)
Spread the love

ಬೆಂಗಳೂರು: ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ ಸಂಘವಾಗಿರಬೇಕು. ಇದು ನಾನು ನಿಮಗೆ ನೀಡುತ್ತಿರುವ ಸಲಹೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು (ಗುರುವಾರ ಡಿ. 04) ನಡೆದ ಸರ್ಕಾರಿ ಮಹಿಳಾ ನೌಕರರ ಸಮ್ಮೇಳನ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದ ಅವರು, ನಾನು ಬಂಗಾರಪ್ಪನವರ ಸರ್ಕಾರದಲ್ಲಿ ಸಚಿವನಾಗಿದ್ದಾಗಿನಿಂದ. ಅಂದರೆ 40 ವರ್ಷಗಳಿಂದ ಈ ಸಂಘವನ್ನು ಗಮನಿಸಿಕೊಂಡು ಬಂದಿದ್ದೇನೆ. ನಿಮ್ಮ ಒಗ್ಗಟ್ಟು ಬಿಡಬೇಡಿ. ಲಿಂಗಾಯತರ, ಹಿಂದುಳಿದ ವರ್ಗಗಳ, ಒಕ್ಕಲಿಗರ, ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಸಂಘ ಎಂದು ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ. ಈ ಆಲೋಚನೆಯನ್ನು ನಿಮ್ಮ ತಲೆಯಿಂದ ತೆಗೆದುಹಾಕಿ ಎಂದು ಕಿವಿಮಾತು ಹೇಳಿದರು.

ಮಹಿಳೆಯರು ಕರುಣೆಯ ಕಡಲು, ಮಮತೆಯ ಮುಗಿಲು

ಸಂಘಟನೆ ಬಹಳ ಮುಖ್ಯ. ಶಿಕ್ಷಣ ಇಲಾಖೆಯಲ್ಲಿ 50%ಗೂ ಹೆಚ್ಚು ಜನ ಇದ್ದೀರಿ. ಮಹಿಳೆಯರು ಕರುಣೆಯ ಕಡಲು, ಮಮತೆಯ ಮುಗಿಲು. ನಾನಾಗಲಿ, ಸಿದ್ದರಾಮಯ್ಯ ಅವರಾಗಲಿ, ಯಾವುದೇ ವ್ಯಕ್ತಿಯಾಗಲಿ ಮಹಿಳೆಯರ ಕೊಡುಗೆ ಇಲ್ಲದೆ ಯಾವುದೇ ಪುರುಷ ಯಶಸ್ವಿಯಾಗಲಾರ. ನಾವೆಲ್ಲರೂ ರಾಜಕಾರಣ ಮಾಡಿಕೊಂಡು ಮನೆಗೆ ಸಮಯ ನೀಡುವುದಿಲ್ಲ. ನಮ್ಮ ಮನೆ ನಡೆಸಿ ನಿಭಾಯಿಸುತ್ತಿರುವವರು ಮಹಿಳೆಯರು. ನನಗೂ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ನನಗಿಂತ ಹೆಚ್ಚು ದಕ್ಷತೆಯಿಂದ ಕೆಲಸ ಮಾಡುತ್ತಾರೆ. ಅವರು ಈಗ ಮಾಡಿರುವ ಸಾಧನೆ ನಾನು ಆ ವಯಸ್ಸಿನಲ್ಲಿ ಮಾಡಿರಲಿಲ್ಲ ಎಂದು ಬಣ್ಣಿಸಿದರು.

ಮಹಿಳೆಯರು ಪುರುಷರಿಗಿಂತ ಹೆಚ್ಚು ಸಮರ್ಥರಿದ್ದೀರಿ. ಡಿಜಿಯಾಗಿ, ಸರ್ಕಾರ ಮುಖ್ಯ ಕಾರ್ಯದರ್ಶಿಯಾಗಿ ಆಡಳಿತದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ನೀವು ಯಾರಿಗೂ ಕಮ್ಮಿ ಇಲ್ಲ ಎಂದು ಸಾಬೀತುಪಡಿಸಿದ್ದೀರಿ. ನೀವುಗಳು ದೂರಿನ ಪೆಟ್ಟಿಗೆಯಂತೆ ಆಗಬಾರದು. ನಿಮ್ಮ ಹಕ್ಕನ್ನು ಚಲಾಯಿಸಬೇಕು. ಹೆಣ್ಣು ಕುಟುಂಬದ ಕಣ್ಣು ಎಂದು ನಾವು ನಂಬಿದ್ದೇವೆ. ನಾವು ಎಲ್ಲೇ ಹೋದರು, ಗ್ರಾಮ ದೇವತೆ ಯಾವುದು ಎಂದು ಕೇಳುತ್ತೇವೆ. ಬೆಂಗಳೂರಿನ ಗ್ರಾಮ ದೇವತೆ ಅಣ್ಣಮ್ಮ. ಭೂಮಿಯನ್ನು ಭೂತಾಯಿ ಎಂದು ಕರೆಯುತ್ತೇವೆ. ನಾಡ ದೇವತೆ ಚಾಮುಂಡೇಶ್ವರಿ ಎಂದು ಪರಿಗಣಿಸಿದ್ದೇವೆ. ಹೀಗೆ ಮಹಿಳೆಯರಿಗೆ ಉನ್ನತ ಸ್ಥಾನ ನೀಡಲಾಗಿದೆ” ಎಂದು ತಿಳಿಸಿದರು. ಇದನ್ನೂ ಓದಿ: ಮಹಿಳಾ ನೌಕರರಿಗಾಗಿ ಋತುಚಕ್ರ ರಜೆ ಘೋಷಿಸಿದ ಸಿಎಂ

ನಾಯಕತ್ವ ಗುಣ ಬೆಳೆಸಿಕೊಂಡು ನಾಯಕಿಯರಾಗಿ

ನೀವು ನಾಯಕತ್ವ ಗುಣ ಬೆಳೆಸಿಕೊಂಡು ನಾಯಕಿಯರಾಗಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ್ದು ಕಾಂಗ್ರೆಸ್. ಪಂಚಾಯ್ತಿಯಲ್ಲಿ ನಾವು 50% ಮೀಸಲಾತಿ ನೀಡಿದ್ದು, ಸಂಸತ್ ಚುನಾವಣೆಯಲ್ಲಿ 33% ಜಾರಿಯಾಗುವ ಹಂತದಲ್ಲಿದೆ. ಇದರಿಂದ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 70 ಕ್ಷೇತ್ರಗಳಲ್ಲಿ ಮಹಿಳಾ ಶಾಸಕಿಯರು ಆಯ್ಕೆಯಾಗಲಿದ್ದಾರೆ. ನಾಯಕತ್ವ ಗುಣ ಇರುವ ಸರ್ಕಾರಿ ಮಹಿಳಾ ನೌಕರರಿಗೆ ನಾವು ಟಿಕೆಟ್ ನೀಡಿ ಗೆಲ್ಲಿಸಿದ್ದೇವೆ. ಹಲವರು ಶಾಸಕಿಯರಾಗಿದ್ದಾರೆ. ಮೀಸಲಾತಿ ಬಂದ ನಂತರ ಯಾರು ನಾಯಕಿಯರಾಗುತ್ತೀರೋ ಗೊತ್ತಿಲ್ಲ ಎಂದು ಹೇಳಿದರು.

 

About the Author

Praja Vahini

Editor

View All Posts

Spread the love

Post navigation

Previous: ಮಹಿಳಾ ನೌಕರರಿಗಾಗಿ ಋತುಚಕ್ರ ರಜೆ ಘೋಷಿಸಿದ ಸಿಎಂ
Next: ಡಾ.ಅಂಬೇಡ್ಕರ್ ವಸತಿ ನಿಲಯದಲ್ಲಿ ಹತ್ತಾರು ಸಮಸ್ಯೆಗಳ ಖಂಡಿಸಿ ಅಹೋರಾತ್ರಿ ಧರಣಿ!

Views:

33

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.