ಆಶಾ ಕಾರ್ಯಕರ್ತೆ ಮೇಲೆ ದೌರ್ಜನ್ಯ, ಮೂವರ ಬಂಧನ

ಆಶಾ ಕಾರ್ಯಕರ್ತೆ ಮೇಲೆ ದೌರ್ಜನ್ಯ, ಮೂವರ ಬಂಧನ

ಮೈಸೂರು: ಬೆಂಗಳೂರಿನ ನಂತರ ಇದೀಗ ಮೈಸೂರಿನಲ್ಲೂ ಆಶಾ ಕಾರ್ಯಕರ್ತೆ ಮೇಲೆ ದೌರ್ಜನ್ಯ ನಡೆಸಿದ ಮೂವರನ್ನು ಬಂಧಿಸಲಾಗಿದೆ.

ಬನ್ನಿಮಂಟಪದ ಸರ್ಕಾರಿ ಆಸ್ಪತ್ರೆಯ ಆಶಾ ಕಾರ್ಯಕರ್ತೆ ಸುಮಯಾ ಫಿರ್ದೋಸ್ ಅವರು ಸೋಂಕು ಲಕ್ಷಣಗಳು ಸರ್ವೇ ಮಾಡುವ ವೇಳೆಯಲ್ಲಿ ಮೂವರು ಪುಂಡರು ದೌರ್ಜನ್ಯ ಎಸಗಿದ್ದರು. ಮಾಸ್ಕ್ ಹಾಕಿಕೊಂಡು ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದಿದ್ದಕ್ಕೆ ಮೆಹಬೂಬ್, ಖಲೀಲ್, ಜೀಸನ್ ಎಂಬುವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಆಶಾ ಕಾರ್ಯಕರ್ತೆ ಮೇಲೆ ಮುಗಿಬಿದ್ದಿದ್ದರು.

ಆಶಾ ಕಾರ್ಯಕರ್ತೆ ಎನ್ ಆರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದ್ಯ ಎನ್ ಆರ್ ಪುರ ಪೊಲೀಸ್ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಹೇಳಿಕೆ ಪಡೆದ ನಂತರ ಪೊಲೀಸರು ಕಾನೂನು ಪ್ರಕ್ರಿಯೆ ಆರಂಭಿಸಿದ್ದಾರೆ.

Related