Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ; ಮುಂದಿನ ಪೀಳಿಗೆಗೆ ದೇಶ ಭಕ್ತಿಯ ಸಂದೇಶ ರವಾನಿಸುವ ಕೆಲಸ: ಡಿಸಿಎಂ
  • Front news
  • Politics
  • State
  • ಬೆಳಗಾವಿ

ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ; ಮುಂದಿನ ಪೀಳಿಗೆಗೆ ದೇಶ ಭಕ್ತಿಯ ಸಂದೇಶ ರವಾನಿಸುವ ಕೆಲಸ: ಡಿಸಿಎಂ

Praja Vahini December 9, 2025
WhatsApp Image 2025-11-24 at 18.03.56
Spread the love

ಬೆಳಗಾವಿ: “ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶಿಸುತ್ತಿರುವುದು ಮುಂದಿನ ಪೀಳಿಗೆಗೆ ದೇಶ ಭಕ್ತಿಯ ಸಂದೇಶ ರವಾನಿಸುವ ಕೆಲಸವಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶ್ಲಾಘಿಸಿದರು.

ಬೆಳಗಾವಿ ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಬೃಹತ್ ರಾಷ್ಟ್ರಧ್ವಜ ಅನಾವರಣ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು.

“ಹೊಸ ದಾಖಲೆ ಬರೆಯುತ್ತಿರುವ ಸ್ಪೀಕರ್ ಖಾದರ್ ಅವರಿಗೆ ಅಭಿನಂದನೆಗಳು. ಕಳೆದ ವರ್ಷ ಮಹಾತ್ಮ ಗಾಂಧಿ ಅವರ ಸ್ವಾತಂತ್ರ್ಯ ಹೋರಾಟದ ನೇತೃತ್ವದ ಶತಮಾನೋತ್ಸವ ಹಿನ್ನೆಲೆಯಲ್ಲಿ ಸ್ಪೀಕರ್ ಅವರು ಸುವರ್ಣಸೌಧದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆ ಸ್ಥಾಪನೆ ಮಾಡಿದ್ದರು. ಈ ಸಂದರ್ಭದಲ್ಲಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇಂದು ನಮ್ಮ ಧಾರವಾಡದ ಖಾದಿ ಕೇಂದ್ರದಿಂದ ಬೃಹತ್ ತ್ರಿವರ್ಣ ಧ್ವಜ ತಯಾರಿಸಿ ಸುವರ್ಣಸೌಧದಲ್ಲಿ ಪ್ರದರ್ಶನ ಮಾಡಿದ್ದಾರೆ” ಎಂದರು.

“ರಾಜ್ಯದ ಜನರ ಪರವಾಗಿ ಸ್ಪೀಕರ್ ಹಾಗೂ ಅವರ ತಂಡಕ್ಕೆ ಅಭಿನಂದನೆ ತಿಳಿಸುತ್ತೇನೆ. ಇದು ಎಲ್ಲರಿಗೂ ಮಾದರಿಯಾಗುವ ಅತ್ಯುತ್ತಮ ಕೆಲಸ. ಇದನ್ನು ಸಾರ್ವಜನಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಬೇಕು. ಕಾಂಗ್ರೆಸ್ಸಿಗರ ಹೆಗಲ ಮೇಲೆ ರಾಷ್ಟ್ರಧ್ವಜ, ಎದೆಯ ಒಳಗೆ ರಾಷ್ಟ್ರಭಕ್ತಿ ಇದೆ” ಎಂದು ತಿಳಿಸಿದರು.

About the Author

Praja Vahini

Editor

View All Posts

Spread the love

Post navigation

Previous: ಬಿಜೆಪಿಗರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Next: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಖಾಸಗೀಕರಣ ಇಲ್ಲ; ಸಚಿವ ಡಾ. ಶರಣಪ್ರಕಾಶ್ ಪಾಟೀಲ್

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.