Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಯುಕೆಪಿ ಯೋಜನೆಗೆ ಮಹಾರಾಷ್ಟ್ರ, ಆಂಧ್ರ ಅಡ್ಡಗಾಲು: ಡಿಸಿಎಂ
  • Front news
  • Politics
  • State

ಯುಕೆಪಿ ಯೋಜನೆಗೆ ಮಹಾರಾಷ್ಟ್ರ, ಆಂಧ್ರ ಅಡ್ಡಗಾಲು: ಡಿಸಿಎಂ

Praja Vahini December 9, 2025 1 minute read
WhatsApp Image 2025-11-29 at 14.17.05 (1)
Spread the love

ಬೆಳಗಾವಿ: “ಕೃಷ್ಣಾ ಮೇಲ್ದಂಡೆ ಯೋಜನೆ ಹಂತ- 3ರ ಅನುಷ್ಠಾನಕ್ಕೆ 2013 ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೆ ಬಾಕಿ ಉಳಿಸಿಕೊಂಡಿದೆ. ಮೊದಲನೇ ಬಾರಿಗೆ ಮಹಾರಾಷ್ಟ ಎರಡನೇ ಬಾರಿಗೆ ಆಂಧ್ರ ಪ್ರದೇಶದ ಅಡ್ಡಗಾಲು ಹಾಕಿವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಹೇಳಿದರು.

ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆ ವಿವಿಧ ಶಾಸಕರುಗಳು ನೀರಾವರಿ ಯೋಜನೆಗಳ ಸಂಬಂಧ ಕೇಳಿದ ಪ್ರಶ್ನೆಗಳಿಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ವಿಧಾನಸಭೆಯಲ್ಲಿ ಉತ್ತರಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ (ಹಂತ-3) ಸಂಬಂಧ ಭೂಸ್ವಾಧೀನ ಪರಿಹಾರ ಸೇರಿದಂತೆ ಇತರೇ ವಿಚಾರಗಳ ಬಗ್ಗೆ ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ ಅವರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್ ಅವರು, “ದೆಹಲಿಯಲ್ಲಿರುವ ತಮ್ಮ ಸ್ನೇಹಿತರ ಮೇಲೆ ಒತ್ತಡ ಹೇರಿ ಈ ಯೋಜನೆಗೆ ಅನುಮತಿ ಕೊಡಿಸಿದರೆ, ಕೂಡಲೇ ಸಾಲ ಮಾಡಿ ಈ ಯೋಜನೆ ಪೂರ್ಣಗೊಳಿಸಲಾಗುವುದು. ಕೇಂದ್ರ ಸಚಿವರಾದ ಸೋಮಣ್ಣ ಅವರ ಜೊತೆ ಮೂರು ಬಾರಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರು ಈ ಬಗ್ಗೆ ಕರೆದಿದ್ದ ಸಂಬಂಧಪಟ್ಟ ರಾಜ್ಯಗಳ ಸಭೆಯನ್ನು ಕಾರಾಣಾಂತರಗಳಿಂದ ಮುಂದೂಡಿದ್ದೇನೆ ಎಂದು ತಿಳಿಸಿದ್ದರು” ಎಂದರು.

ಯೋಜನೆ ಪೂರ್ಣಗೊಳಿಸಲು ಬದ್ಧ

“ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರವಾಗಿ ಸಿದ್ದರಾಮಯ್ಯ ಅವರು ಹಾಗೂ ನಾವು ಚರ್ಚೆ ಮಾಡಿ ಭೂ ಪರಿಹಾರದ ಬಗ್ಗೆ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದೇವೆ. ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಆಗಿದ್ದ ಭೂ ಪರಿಹಾರ ತೀರ್ಮಾನವನ್ನ ಮಾರ್ಪಾಡು ಮಾಡಿ ಒಂದು ಹಂತಕ್ಕೆ ತಂದಿದ್ದೇವೆ. ಈ ಯೋಜನೆ ಪೂರ್ಣಗೊಳಿಸಲು ನಾವು ಬದ್ದವಾಗಿದ್ದೇವೆ. ಎಲ್ಲಾದರೂ ಹಣ ತಂದು ವೆಚ್ಚ ಮಾಡಲು ಯೋಜನೆ ರೂಪಿಸಿದ್ದೇವೆ. ವರ್ಷಕ್ಕೆ 15-20 ಸಾವಿರ ಕೋಟಿ ನೀಡಬೇಕು, ಮುಂದಿನ ಮೂರ್ನಾಲ್ಕು ವರ್ಷದಲ್ಲಿ ಭೂಸ್ವಾಧೀನ ಪೂರ್ಣಗೊಳಿಸಬೇಕು ಎಂದು ಹೊರಟಿದ್ದೇವೆ. ಕೆಲವು ಕಡೆ ಕೆಲಸವನ್ನೂ ಪ್ರಾರಂಭ ಮಾಡಿದ್ದೇವೆ” ಎಂದರು. ಕ್ಷೇತ್ರದ ಎಡದಂಡೆ ನಾಲ ವಿಭಾಗದಲ್ಲಿ ಒಟ್ಟು 14 ವಿತರಣಾ ನಾಲೆಗಳಲ್ಲಿ ಎಂಟು ನಾಲೆಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಆರು ನಾಲೆಗಳು ಬಾಕಿಯಿವೆ. ಇಲ್ಲಿ ಒಂದಷ್ಟು ಹಳೇ ನಾಲೆಗಳಿವೆ. ಇವುಗಳ ಬಗ್ಗೆ ವರದಿ ತರಿಸಿಕೊಂಡಿದ್ದೇನೆ” ಎಂದರು.

 

About the Author

Praja Vahini

Editor

View All Posts

Spread the love

Post navigation

Previous: ಘಟಪ್ರಭಾ ಹಾಗೂ ಚಿಕ್ಕೋಡಿ ಶಾಖಾ ಕಾಲುವೆ ಆಧುನೀಕರಣಕ್ಕೆ 1722 ಕೋಟಿ ಯೋಜನೆ
Next: 5.75 ಕೋಟಿ ವೆಚ್ಚದಲ್ಲಿ ಬಿಳಿಗಿರಿ ರಂಗನಬೆಟ್ಟ ಅಭಿವೃದ್ಧಿಗೆ ಕ್ರಮ: ಹೆಚ್.ಕೆ. ಪಾಟೀಲ್

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.