Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ: ಡಿಸಿಎಂ ಡಿ.ಕೆ.ಶಿವಕುಮಾರ್
  • Front news
  • Politics
  • State

ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ: ಡಿಸಿಎಂ ಡಿ.ಕೆ.ಶಿವಕುಮಾರ್

Praja Vahini December 10, 2025
e67b0723-d4d6-40f5-b61c-09722809c024
Spread the love

ಬೆಳಗಾವಿ: “ನಾನು ನೀರಾವರಿ ಇಲಾಖೆ ಜವಾಬ್ದಾರಿ ತೆಗೆದುಕೊಂಡ ಮೇಲೆ ವಿಶೇಷವಾಗಿ ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ ನೀಡಿದ್ದೇವೆ. ಕೃಷ್ಣಾ, ಮಹದಾಯಿ ಯೋಜನೆಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಈ ಹಿಂದೆ ಬಜೆಟ್‌ ಮೀರಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿತ್ತು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು.

ವಿಧಾನ ಪರಿಷತ್ ಕಲಾಪದ ಶೂನ್ಯ ವೇಳೆಯಲ್ಲಿ ಸದಸ್ಯ ಸಿ.ಟಿ.ರವಿ ಅವರು ಉತ್ತರ ಕರ್ನಾಟಕ ನೀರಾವರಿ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದಾಗ ಶಿವಕುಮಾರ್‌ ಅವರು ಪ್ರತಿಕ್ರಿಯೆ ನೀಡಿದರು.

“ನೀರಾವರಿ ಇಲಾಖೆಯ ವಾರ್ಷಿಕ ಬಜೆಟ್‌ 22 ಸಾವಿರ ಕೋಟಿ. ಇದರಲ್ಲಿ ಸುಮಾರು 5 ಸಾವಿರ ಕೋಟಿಯಷ್ಟು ಹೊಸ ಕೆಲಸಗಳನ್ನು ತೆಗೆದುಕೊಳ್ಳಬಹುದಿತ್ತು. ಆದರೆ ಈ ಹಿಂದೆ 25 ಸಾವಿರ ಕೋಟಿ ಮೊತ್ತದ ಕಾಮಗಾರಿಗಳನ್ನು ತೆಗೆದುಕೊಳ್ಳಲಾಗಿದೆ. ಯಾರ ಕಾಲದಲ್ಲಿ ಬಜೆಟ್‌ ಗೂ ಮೀರಿ ಕಾಮಗಾರಿಗಳನ್ನು ತೆಗೆದುಕೊಳ್ಳಲಾಯಿತು ಎಂದು ಪ್ರಸ್ತಾಪಿಸಿದರೆ ರಾಜಕೀಯ ಎಂದು ಎಲ್ಲರೂ ಮುಗಿಬೀಳುತ್ತಾರೆ” ಎಂದರು.

“ಹಣಕಾಸಿನ ಪರಿಸ್ಥಿಗೆ ಅನುಗುಣವಾಗಿ ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಲ್ಲಿ ಒಂದಷ್ಟನ್ನು ಕೈಗೆತ್ತಿಕೊಂಡಿದ್ದೇವೆ, ಒಂದಷ್ಟನ್ನು ತೆಗೆದುಕೊಂಡಿಲ್ಲ. ಚಿಕ್ಕೋಡಿ, ಅಥಣಿ, ಕಾಗವಾಡ, ಗೋಕಾಕ್‌, ರಾಮದುರ್ಗ ಸೇರಿದಂತೆ ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಲು ಇಂದು ಸಂಜೆ 3 ಗಂಟೆಗೆ ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ. ಇನ್ನೊಮ್ಮೆ ಸವಿವರವಾಗಿ ಇದಕ್ಕೆ ಉತ್ತರಿಸುತ್ತೇನೆ” ಎಂದರು.

ಮೇಕೆದಾಟು ಯೋಜನೆಗೆ ನ್ಯಾಯ ಸಿಕ್ಕಿದೆ

“ನಮ್ಮ ನೀರು ನಮ್ಮ ಹಕ್ಕು ಪಾದಯಾತ್ರೆ ಹಾಗೂ ನನ್ನ ಒತ್ತಡ ಮತ್ತು ಪರಿಶ್ರಮದ ಫಲದಿಂದ ಮೇಕೆದಾಟು ವಿಚಾರದಲ್ಲಿ ನಮಗೆ ಸುಪ್ರೀಂಕೋರ್ಟ್‌ ನಿಂದ ನ್ಯಾಯ ಸಿಕ್ಕಿದೆ” ಎಂದರು.

About the Author

Praja Vahini

Editor

View All Posts

Spread the love

Post navigation

Previous: ಬಾಕಿ ಬೆಳೆವಿಮೆ ಪರಿಹಾರ ವಿತರಣೆಗೆ ಕ್ರಮ: ಸಚಿವ ಚಲುವನಾರಾಯಣ ಸ್ವಾಮಿ
Next: ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಕಲ್ಯಾಣ ಚತುಷ್ಪಥ ರಸ್ತೆ ನಿರ್ಮಾಣ: ಸಚಿವ ಸತೀಶ ಜಾರಕಿಹೊಳಿ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.