ಬೆಂಗಳೂರು: ಐಪಿಎಲ್ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಕೊನೆಗೂ ಸಿಹಿ ಸುದ್ದಿಯನ್ನು ನೀಡಿದೆ. ಕಳೆದ ಬಾರಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ಪ್ರಥಮ ಬಾರಿಗೆ ಟ್ರೋಪಿ ಗೆದ್ದ ಖುಷಿಯಲ್ಲಿ ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ ಆರ್ಸಿಬಿ ತಂಡದ ಆಟಗಾರರಿಗೆ ಸನ್ಮಾನಿಸುವ ಕುರಿತಾಗಿ ವಿಧಾನಸೌಧದ ಮುಂಭಾಗದಲ್ಲಿ ಆರ್ಸಿಬಿ ತಂಡದ ಆಟಗಾರರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ ಸಾವು ನೋವುಗಳಾಗಿದ್ದರಿಂದ 2026ನೆಯ ಸಾಲಿನ ಐಪಿಎಲ್ ಆಟವನ್ನು ಬೆಂಗಳೂರಿನಲ್ಲಿ ನಡೆಸಲು ಹಲವಾರು ಅಡೆತಡೆಗಳಿದ್ದವು. ಆದರೆ ಇದೀಗ ಕೋಟ್ಯಂತರ ಐಪಿಎಲ್ ಅಭಿಮಾನಿಗಳಗೆ ಹಾಗೂ ಆರ್ಸಿಬಿ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಸಹಿಸುತಿಯನ್ನು ನೀಡಿದೆ.
ಹೌದು, 2026ರ ಐಪಿಎಲ್ ಸೇರಿದಂತೆ ಮುಂಬರುವ ಎಲ್ಲಾ ಕ್ರಿಕೆಟ್ ಪಂದ್ಯಗಳನ್ನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೇ ನಡೆಸಲು ಸಚಿವ ಸಂಪುಟ ಬಹುತೇಕ ಒಪ್ಪಿಗೆ ಸೂಚಿಸಿದೆ. ಗೃಹ ಇಲಾಖೆಗೆ ಜವಾಬ್ದಾರಿ ನೀಡಿ ಮೈಕೆಲ್ ಡಿ ಕುನ್ಹಾ ವರದಿಯ ಶಿಫಾರಸುಗಳನ್ನ ಅಳವಡಿಸಿಕೊಂಡು ಪಂದ್ಯಕ್ಕೆ ಅವಕಾಶ ಮಾಡಿಕೊಡಲು ಬೆಳಗಾವಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದನ್ನೂ ಓದಿ: ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ಬಂಪರ್ ಕೊಡುಗೆ ನೀಡಿದ ಸಿಎಂ
ಪಂದ್ಯಗಳು ನಡೆಯುವ ಸಂದರ್ಭದಲ್ಲಿ ಹೆಚ್ಚಿನ ಭದ್ರತೆ ಒದಗಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಪಂದ್ಯದ ವೇಳೆ ಏನೇನು ಕ್ರಮ ಅನುಸರಿಸಬೇಕು ಅನ್ನೋದರ ಬಗ್ಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಕಾಡೆಮಿಯು (KSCA) ಗೃಹ ಇಲಾಖೆಯೊಂದಿಗೆ ಚರ್ಚಿಸಬೇಕಿದೆ. ಬಳಿಕ ಗೃಹ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ ಬಳಿಕ ತೀರ್ಮಾನ ಕೈಗೊಳ್ಳಲು ಸಂಪುಟ ನಿರ್ಧರಿಸಿದೆ.
