ಬೆಳಗಾವಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಗುದ್ದಾಟ ತಾರಕಕ್ಕೇರಿದ್ದು, ಕಳೆದ ಕೆಲವು ದಿನಗಳ ಹಿಂದೆ ಸಿಎಂ, ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿ ಇದಕ್ಕೆಲ್ಲ ತೆರೆ ಹೇಳಿದಂತೆ ಕಾಣುತ್ತಿತ್ತು. ಆದರೆ ಈಗ ಮತ್ತೆ ಬೆಳಗಾವಿ ಅಧಿವೇಶನದಲ್ಲಿ ಸಿಎಂ ಕುರ್ಚಿ ಗುದ್ದಾಟ ಬೆಳಕಿಗೆ ಬಂದಿದೆ.
ಹೌದು, ಬೆಳಗಾವಿ ಅಧಿವೇಶನದ ಸಂದರ್ಭದಲ್ಲೇ ಪಕ್ಷವು ಸಿಎಂ ಸಿದ್ದರಾಮಯ್ಯ ಬಣ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳಾಗಿ ಸ್ಪಷ್ಟವಾಗಿ ಇಬ್ಬಾಗವಾಗಿರುವಂತೆ ಕಾಣಿಸುತ್ತಿದೆ. ಅಧಿವೇಶನದ ಸಂದರ್ಭದಲ್ಲಿ, ಯಾವುದೇ ಗೊಂದಲಗಳಿಲ್ಲ ಎಂದು ಬಿಂಬಿಸಲು ಹೈಕಮಾಂಡ್ ನಾಯಕರು ಪ್ರಯತ್ನಿಸಿದ್ದರು ಅಷ್ಟೆ. ಆದರೆ, ಬೆಳಗಾವಿಗೆ ಬಂದ ಕೂಡಲೇ ಎಲ್ಲವೂ ಹಳೇ ಸ್ಥಿತಿಗೆ ಮರಳಿದೆ.
ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ತಮ್ಮ ಬೆಂಬಲಿಗರ ಸಂಖ್ಯೆಯನ್ನು ಪ್ರದರ್ಶಿಸಲು ಪ್ರತ್ಯೇಕ ಡಿನ್ನರ್ ಮೀಟಿಂಗ್ಗಳನ್ನು ಆಯೋಜಿಸಿದ್ದಾರೆ. ಔತಣ ಕೂಟದ ವೇಳೆ, ತಮಗೆ 100ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ ಎಂದು ಆಪ್ತರ ಬಳಿ ಡಿಕೆ ಶಿವಕುಮಾರ್ ಹೇಳಿಕೊಂಡಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಡಿನ್ನರ್‌ನಲ್ಲಿ ಭಾಗವಹಿಸಿದ್ದ ಶಾಸಕರಿಗೆ ಈ ಭರವಸೆಯನ್ನು ಡಿಸಿಎಂ ನೀಡಿದ್ದಾರೆ. ಸಚಿವ ಸ್ಥಾನ ಉಳಿಸಿಕೊಳ್ಳಲು ಮತ್ತು ಮುಂದಿನ ಭವಿಷ್ಯದ ಲೆಕ್ಕಾಚಾರದಲ್ಲಿ ಹಲವು ಸಚಿವರು ಮತ್ತು ಶಾಸಕರು ಡಿ.ಕೆ. ಶಿವಕುಮಾರ್ ಅವರಿಗೆ ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಮಾರಾಟ ಮೇಳ ಉದ್ಘಾಟಿಸಿದ ಸಿಎಂ
ಹಾಗಾದ್ರೆ ರಾಜ್ಯ ರಾಜಕೀಯದಲ್ಲಿ ಸಿಎಂ ಕುರ್ಚಿ ಕದನ ಯಾವ ಮಟ್ಟಕ್ಕೆ ತಲುಪಲಿದೆ ಎಂದು ಕಾದು ನೋಡಬೇಕಿದೆ.
