Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ನಾನು ಸಿಎಂ ಸೇರಿದಂತೆ 140 ಶಾಸಕರೂ ಒಂದೇ: ಡಿಕೆಶಿ
  • Politics
  • State
  • ಬೆಳಗಾವಿ

ನಾನು ಸಿಎಂ ಸೇರಿದಂತೆ 140 ಶಾಸಕರೂ ಒಂದೇ: ಡಿಕೆಶಿ

Praja Vahini December 13, 2025 1 minute read
WhatsApp Image 2025-12-13 at 11.20.02
Spread the love

ಬೆಳಗಾವಿ: ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಬೆಳಗಾವಿಯ ಸರ್ಕಿಟ್ ಹೌಸ್ ಹಾಗೂ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು, ಬಲ ಪ್ರದರ್ಶನ ಮಾಡುವ ಅಗತ್ಯ ನನಗಿಲ್ಲ. ನನ್ನ ಹಿಂದೆ ಯಾರೂ ಬರುವುದು ಬೇಡ, ನನ್ನ ಪರವಾಗಿ ಯಾರು ಮಾತನಾಡುವುದೂ ಬೇಡ. ನಾನು ಸಿಎಂ ಸೇರಿದಂತೆ 140 ಶಾಸಕರದೂ ಒಂದೇ ಗುಂಪು. ಅದು ಕಾಂಗ್ರೆಸ್ ಗುಂಪು. ಯಾವುದೇ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡಬೇಡಿ ಎಂದು ತಿಳಿಸಿದರು.

ಪ್ರೀತಿಯಿಂದ ಊಟಕ್ಕೆ ಕರೆದರೆ ಬರಲ್ಲ ಅನ್ನಲು ಆಗುತ್ತದೆಯೇ

ನಾನು ಯಾವುದೇ ಡಿನ್ನರ್ ಮೀಟಿಂಗ್ ಮಾಡಿಲ್ಲ. ದೊಡ್ಡಣ್ಣನವರ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷರು. ನನ್ನ ಸ್ನೇಹಿತರೂ ಹೌದು. ಅವರದು ದೊಡ್ಡ ಕುಟುಂಬ. ಕಳೆದ 15 ವರ್ಷಗಳಿಂದ ನಮ್ಮ ಮನೆಗೆ ಊಟಕ್ಕೆ ಬನ್ನಿ ಎಂದು ಕರೆಯುತ್ತಿದ್ದರು. ನಮ್ಮ ಕಾಂಗ್ರೆಸ್ ಕುಟುಂಬದವರನ್ನು ಮರೆಯಲು ಆಗುತ್ತದೆಯೇ? ಹೀಗಾಗಿ ನಾನೂ ಸೇರಿದಂತೆ ಒಂದಷ್ಟು ಜನರು ಊಟಕ್ಕೆ ಹೋಗಿದ್ದೆವು, ಅಷ್ಟೇ. ಅವರಿಗೆ ಗೌರವ ನೀಡುವ ಉದ್ದೇಶದಿಂದ ಅವರ ಮನೆಗೆ ಹೋಗಿದ್ದೆ. ಇದರ ಹೊರತಾಗಿ ಬೇರೇನೂ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ಬಿ.ಎಸ್.ಸುರೇಶ್

ದಿನ ಒಬ್ಬೊಬ್ಬ ಸ್ಥಳೀಯರು, ನಮ್ಮ ಕ್ಷೇತ್ರದವರು ಪ್ರೀತಿಯಿಂದ ಊಟ ತಂದು ಕೊಡುತ್ತಿದ್ದಾರೆ. ಊಟವನ್ನು ಬೇಡ ಎನ್ನಲು ಆಗುತ್ತದೆಯೇ? ಪ್ರೀತಿಯಿಂದ ಕರೆಯುತ್ತಾರೆ, ಅದಕ್ಕೆ ಒಂದೊಂದು ದಿನ ಒಂದೊಂದು ಕಡೆ ಊಟಕ್ಕೆ ಹೋಗುತ್ತೇವೆ. ಇದು ಯಾವ ಔತಣಕೂಟವೂ ಅಲ್ಲ, ಏನೂ ಅಲ್ಲ. ನನ್ನ ಕ್ಷೇತ್ರದ ಹುಡುಗನೊಬ್ಬ ಇಲ್ಲಿ ಕೆಲಸ ಮಾಡುತ್ತಿದ್ದಾನೆ. ಆತನ ಮನೆಯಿಂದ ಇವತ್ತು ಮುದ್ದೆ, ಉಪ್ಸಾರು ಊಟ ಮಾಡಿ ಕಳಿಸುತ್ತೇವೆ ಎನ್ನುತ್ತಿದ್ದಾನೆ. ಹೀಗೇ ಅವರು ಪ್ರೀತಿಯಿಂದ ಹೇಳಿದಾಗ, ಕರೆದಾಗ ಬೇಡ ಎನ್ನಲು ಆಗುತ್ತದೆಯೇ? ನಾಳಿದ್ದು ನಮ್ಮ ಆಸೀಫ್ ಸೇಠ್, ಫಿರೋಜ್ ಸೇಠ್ ಅವರು ಊಟಕ್ಕೆ ಕರೆದಿದ್ದಾರೆ ಎಂದರು

ಮತ ಕಳ್ಳತನ ವಿರುದ್ಧ ಪ್ರತಿಭಟನೆಗಾಗಿ ದೆಹಲಿಗೆ ಪ್ರಯಾಣ

ಮತ ಕಳ್ಳತನ ವಿರುದ್ಧದ ಹೋರಾಟದಲ್ಲಿ ಭಾಗವಹಿಸಲು ಶನಿವಾರ ದೆಹಲಿಗೆ ತೆರಳುತ್ತಿದ್ದೇನೆ. ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲೇ ಮತ ಕಳ್ಳತನ ವಿರುದ್ಧ ಹೋರಾಟ ಆರಂಭಿಸಿದರು. ನಾವು 2023ರಲ್ಲೇ ಚಿಲುಮೆ ಅಕ್ರಮದ ಮೂಲಕ ಮತ ಕಳ್ಳತನವನ್ನು ಪತ್ತೆ ಮಾಡಿದ್ದೆವು. ನಾನು, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರೆಲ್ಲರೂ ಚುನಾವಣಾ ಆಯೋಗಕ್ಕೆ ದೂರು ನೀಡಿ ಹೋರಾಟ ಮಾಡಿದೆವು. ನಂತರ ನಾವು ವಿಧಾನಸಭೆ ಚುನಾವಣೆಯಲ್ಲಿ ಗೆದ್ದೆವು. ಲೋಕಸಭೆ ಚುನಾವಣೆ ಸಮಯದಲ್ಲಿ ಆಗಿರುವ ಮತ ಕಳ್ಳತನವನ್ನು ರಾಹುಲ್ ಗಾಂಧಿ ಅವರು ಸಾಕ್ಷಿ ಸಮೇತ ಜನರ ಮುಂದಿಟ್ಟಿದ್ದಾರೆ. ಚುನಾವಣಾ ಆಯೋಗವು ನಿರ್ದಿಷ್ಟ ರಾಜಕೀಯ ಪಕ್ಷದ ಅಸ್ತ್ರವಾಗಿದ್ದು, ನಾವು ಅದರ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಈ ವಿಚಾರವಾಗಿ ರಾಜ್ಯದಲ್ಲಿ ನಡೆಸಿದ ಸಹಿ ಸಂಗ್ರಹ ಅಭಿಯಾನದಲ್ಲಿ 1.43 ಕೋಟಿ ಸಹಿ ಸಂಗ್ರಹವಾಗಿದ್ದು, ಎಲ್ಲಾ ಕಾರ್ಯಕರ್ತರು ಹಾಗೂ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ಕಳಪೆ ಚರಂಡಿ ಕಾಮಗಾರಿ ಮಾಡಿ ಅನುದಾನ ವ್ಯರ್ಥ
Next: ದಿ ಡೆವಿಲ್ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್

Views:

28

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.