ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಇಂದು (ಮಂಗಳವಾರ ಡಿ.16) 66ನೆಯ ಹುಟ್ಟು ಹಬ್ಬದ ಸಂಭ್ರಮ.
ಇನ್ನು ಹುಟ್ಟು ಹಬ್ಬದ ಪ್ರಯುಕ್ತ ರಾಜ್ಯನಾಯಕರು ಸೇರಿದಂತೆ ರಾಷ್ಟ್ರ ನಾಯಕರು ಕೂಡ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಹುಟ್ಟು ಹಬ್ಬದ ಶುಭ ಕೋರಿದ್ದಾರೆ.
ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ, “ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಉಕ್ಕು ಮತ್ತು ಭಾರೀ ಕೈಗಾರಿಕೆ ಕ್ಷೇತ್ರಗಳಲ್ಲಿ ಅವರ ಕಾರ್ಯ ಆತ್ಮನಿರ್ಭರ ಭಾರತ ನಿರ್ಮಾಣದ ಪ್ರಯತ್ನಗಳಿಗೆ ಬಲ ನೀಡುತ್ತಿದೆ. ಸಮಾಜ ಸೇವೆಯಲ್ಲಿ ದೀರ್ಘ ಹಾಗೂ ಆರೋಗ್ಯಕರ ಜೀವನ ಇರಲಿ” ಎಂದು ಹಾರೈಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಪ್ರಧಾನಿಯವರ ಆಶೀರ್ವಾದ ಮತ್ತು ಪಿತೃತ್ವದ ವಾತ್ಸಲ್ಯಕ್ಕೆ ಕೃತಜ್ಞತೆ ವ್ಯಕ್ತಪಡಿಸಿ, ಅವರ ಮಾರ್ಗದರ್ಶನ ಹಾಗೂ ವಿಶ್ವಾಸಕ್ಕೆ ಚಿರಋಣಿ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಅಂಬಿಗರ ಶರಣ ಸಂಸ್ಕೃತಿ ಉತ್ಸವಕ್ಕೆ ದಿನಾಂಕ ಫಿಕ್ಸ್
ಹೆಚ್ ಡಿ ಕೆ ಹುಟ್ಟು ಹಬ್ಬದ ಪ್ರಯುಕ್ತ ಮೈಸೂರಿನಲ್ಲಿ ಹಾಗೂ ಮಂಡ್ಯ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಜೆಡಿಎಸ್ ನ ಕಾರ್ಯಕರ್ತರು ಹಮ್ಮಿಕೊಳ್ಳುವುದರ ಜೊತೆಗೆ ಹೆಚ್ ಡಿ ಕುಮಾರಸ್ವಾಮಿ ಅವರ ಹುಟ್ಟು ಹಬ್ಬವನ್ನು ಭರ್ಜರಿ ಸೆಲೆಬ್ರೇಟ್ ಮಾಡುತ್ತಿದ್ದಾರೆ.
