ಬೆಂಗಳೂರು: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಇಂದು 66ನೇ ಹುಟ್ಟುಹಬ್ಬದ ಸಂಭ್ರಮ.
ಹೌದು, ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಹುಟ್ಟು ಹಬ್ಬದ ಸಂಭ್ರಮದಲ್ಲಿ ತೊಡಗಿದ್ದು ಅವರ ಅಭಿಮಾನಿಗಳು ಸೇರಿದಂತೆ ಜೆಡಿಎಸ್ ನ ಕಾರ್ಯಕರ್ತರು ಹೆಚ್ ಡಿ ಕುಮಾರಸ್ವಾಮಿ ಅವರ ಹುಟ್ಟು ಹಬ್ಬವನ್ನು ಭರ್ಜರಿ ಸೆಲೆಬ್ರೇಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ಹೆಚ್ ಡಿಕೆ ಹುಟ್ಟುಹಬ್ಬಕ್ಕೆ ಶುಭ ಕೋರಿದ ಪ್ರಧಾನಿ
ಅಲ್ಲದೆ ಪರಿಷತ್ ಶಾಸಕ ಟಿಎ ಶರವಣ ಅವರು ಕೂಡ ಕುಮಾರಸ್ವಾಮಿ ಅವರ ಮನೆಗೆ ಭೇಟಿ ನೀಡಿ ಹೂಗುಚ್ಚ ನೀಡುವ ಮೂಲಕ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ.
ಇಂದು ಕಾರ್ಯಕರ್ತರಿಂದ ಸನ್ಮಾನ ಸ್ವೀಕರಿಸಲಿರುವ ಕುಮಾರಸ್ವಾಮಿ ಅವರು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ, ರಾಷ್ಟ್ರಪತಿಗಳೊಂದಿಗೆ ಜಯಂತಿ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ.
