Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
  • Politics
  • State
  • ಬೆಳಗಾವಿ

ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

Praja Vahini December 16, 2025 1 minute read
WhatsApp Image 2025-12-16 at 12.39.41
Spread the love

ಬೆಳಗಾವಿ: ಗೃಹ ಇಲಾಖೆಯಿಂದ 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಇಂದು (ಮಂಗಳವಾರ ಡಿ. 16) ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಈ ಹಿಂದಿನ ಸರ್ಕಾರದಲ್ಲಿ 545 ಪಿ.ಎಸ್.ಐ ನೇಮಕಾತಿ ವಿಚಾರದಲ್ಲಿ ಗೊಂದಲ ಉಂಟಾಗಿ ನೇಮಕಾತಿ ಪ್ರಕ್ರಿಯೆ ಸ್ಥಗಿತವಾಗಿತ್ತು. ಸದ್ಯ ಸರ್ಕಾರ 947 ಪಿ.ಎಸ್.ಐ ಹುದ್ದೆಗಳನ್ನು ಭರ್ತಿ ಮಾಡಿದೆ. ಆಯ್ಕೆಗೊಂಡ ಅಭ್ಯರ್ಥಿಗಳು ತರಬೇತಿ ಪಡೆಯುತ್ತಿದ್ದಾರೆ. ತರಬೇತಿ ಪೂರ್ಣಗೊಂಡ ನಂತರ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ 42 ಪಿ.ಎಸ್.ಐ ಹುದ್ದೆಗಳ ಪೈಕಿ 32 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 33 ಪೊಲೀಸ್ ಠಾಣೆಗಳಿದ್ದು, 1549 ಹುದ್ದೆಗಳಲ್ಲಿ 1394 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. 155 ಹುದ್ದೆಗಳು ಖಾಲಿಯಿವೆ. ಪೊಲೀಸ್ ಠಾಣೆಗಳ ದಿನನಿತ್ಯದ ಕರ್ತವ್ಯಕ್ಕೆ ತೊಂದರೆಯಾಗದಂತೆ 103 ಗೃಹ ರಕ್ಷಕ ಸಿಬ್ಬಂದಿ ನೇಮಿಸಿಕೊಂಡು ಕರ್ತವ್ಯ ಭಾರವನ್ನು ಸರಿದೂಗಿಸಲಾಗಿದೆ ಎಂದರು. ಇದನ್ನೂ ಓದಿ: 2334 ಕಂಪೆನಿಗಳ ವಿರುದ್ಧ ಪ್ರಕರಣ ದಾಖಲು: ಕೆಹೆಚ್. ಮುನಿಯಪ್ಪ

ಮುಂಬರುವ ದಿನಗಳಲ್ಲಿ ಮಾನದಂಡಗಳನ್ನು ಆಧರಿಸಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಪೊಲೀಸ್ ಕಮಿಷನರೇಟ್ ಸ್ಥಾಪಿಸುವ ಕುರಿತು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಡದಂತೆ ಕಾಪಾಡಲು ಸ್ಪೆಷಲ್ ಆಕ್ಷನ್ ಪೋರ್ಸ್ ಶಿವಮೊಗ್ಗದಲ್ಲಿ ನಿಯೋಜಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.

 

About the Author

Praja Vahini

Editor

View All Posts

Spread the love

Post navigation

Previous: ವಿದ್ಯುತ್ ಕಳವು ಹಾಗೂ ವಿದ್ಯುತ್ ದುರ್ಬಳಕೆಯ ವಿರುದ್ಧ ಕ್ರಮ: ಕೆ. ಜೆ.ಜಾರ್ಜ್
Next: ನ್ಯಾಯ ಬೆಲೆ ಅಂಗಡಿಗಳಲ್ಲಿ ಇ-ಪಾಸ್, ಎಲೆಕ್ಟ್ರಾನಿಕ್ಸ್  ವೇಯಿಂಗ್ ಮಷಿನ್ ಅಳವಡಿಕೆ: ಮುನಿಯಪ್ಪ

Views:

24

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.