ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಶಕ್ತಿ ಯೋಜನೆಯ ಹಣ ಬಿಡುಗಡೆ ಮಾಡದಿದ್ದಕ್ಕೆ ವಿರೋಧ ಪಕ್ಷಗಳು ರಾಜ್ಯ ಸರ್ಕಾರವನ್ನು ಆರೋಪಿಸುತ್ತಿರುವ ಬೆನ್ನೆಲೆ ಇದೀಗ ಶಕ್ತಿ ಯೋಜನೆಯ 24ನೆಯ ಕಂತಿನ ಹಣವನ್ನು ಡಿಸೆಂಬರ್ ಅಂತ್ಯದೊಳಗಾಗಿ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತರಿಸಿದ್ದಾರೆ.
ಹೌದು, ಬರುವ ಶನಿವಾರದೊಳಗೆ 24ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗುವ ನಿರೀಕ್ಷೆಯಿದ್ದು, ಇದರಿಂದ ಸಹಜವಾಗಿಯೇ ಫಲಾನುಭವಿಗಳ ಮುಖದಲ್ಲಿ ಮಂದಹಾಸ ಮೂಡಿದೆ. ಪಂಚ ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಇತ್ತೀಚಿನ ದಿನಗಳಲ್ಲಿ ಗ್ರಹಣ ಹಿಡಿದಿತ್ತು. ಚಳಿಗಾಲದ ಅಧಿವೇಶನದಲ್ಲಿ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಕಂತುಗಳನ್ನು ಬಿಟ್ಟು ಇತರ ತಿಂಗಳ ಹಣ ಮಾತ್ರ ಬಿಡುಗಡೆ ಮಾಡಲಾಗಿದೆ ಎಂದು ವಿಪಕ್ಷಗಳು ಸರ್ಕಾರದ ವಿರುದ್ಧ ಹೋರಾಟ ನಡೆಸಿದ್ದವು. ಇದನ್ನೂ ಓದಿ: ಮಕ್ಕಳ ಆಯೋಗದಿಂದ ವಸತಿ ನಿಲಯ ಸ್ಥೀತಿ-ಗತಿ ಪರಿಶೀಲನೆ
