ರಾಯಚೂರು: ಕಾಂತರಾ ಚಾಪ್ಟರ್ 1 ಸಕ್ಸಸ್ ಬೆನ್ನಲ್ಲೇ ನಟ ರಿಷಬ್ ಶೆಟ್ಟಿಯವರು ದೇವರ ಮೊರೆ ಹೋಗಿದ್ದು, ಇಂದು (ಬುಧವಾರ ಡಿಸೆಂಬರ್ 24) ರಂದು ರಾಯಚೂರಿನಲ್ಲಿರುವ ರಾಯರ ಮಠಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದಿದ್ದಾರೆ.
ಹೌದು, ನಟ, ನಿರ್ದೇಶಕ ರಿಷಬ್ ಶೆಟ್ಟಿ ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ, ರಾಯರ ದರ್ಶನ ಪಡೆದಿದ್ದಾರೆ. ಪತ್ನಿ ಪ್ರಗತಿ ಹಾಗೂ ತಮ್ಮ ಇಬ್ಬರು ಮಕ್ಕಳೊಂದಿಗೆ ಆಗಮಿಸಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿಯವರಿಂದ ಆಶೀರ್ವಚನ ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ನಿಂದನೆಯ ವಿರುದ್ಧ ಸಿಡಿದ ವಿಜಯಲಕ್ಷ್ಮಿ-15 ಇನ್ಸ್ಟಾಗ್ರಾಂ ಖಾತೆಗಳ ಮೇಲೆ ದೂರು
