ಬೆಂಗಳೂರು: ರಶ್ಮಿಕಾ ಮಂದಣ್ಣ ನಟನೆ ಮಾಡಿರುವ ಎಲ್ಲಾ ಸಿನಿಮಾಗಳು ಸೂಪರ್ ಡೂಪರ್ ಹೀಟ್ ಗಳಾಗಿದ್ದು, ಅವರು ಇತ್ತೀಚಿಗೆ ವಿಭಿನ್ನ ಪಾತ್ರಗಳ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ.
ಹೌದು, ಕನ್ನಡ ಚಿತ್ರರಂಗದಿಂದ ಬೆಳೆದು ಈಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹೆಸರು ಮಾಡುತ್ತಿರುವ ರಶ್ಮಿಕಾ ಮಂದಣ್ಣ ಅವರು ಹೊಸ ಲುಕ್ಕಿನಲ್ಲಿ ಅಭಿಮಾನಿಗಳ ಮುಂದೆ ಬರಲು ರೆಡಿಯಾಗಿದ್ದಾರೆ. ರಶ್ಮಿಕಾ ಮಂದಣ್ಣ ಅವರ ಸಿನಿಮಾ ಜರ್ನಿಯಲ್ಲಿ ಇದು ಮಹತ್ವದ ಪಾತ್ರವಾಗಿದ್ದು ಸಿಕ್ಕಾಪಟ್ಟೆ ಮಾಸ್ ಅವತಾರದಲ್ಲಿ ಅಭಿಮಾನಿಗಳ ಮುಂದೆ ಬರಲಿದ್ದಾರೆ.
ಯೆಸ್...ಸಿಕ್ಕಾಪಟ್ಟೆ ಮಾಸ್ ಲುಕ್ಕಿನಲ್ಲಿ ನಟಿ ರಶ್ಮಿಕ ಮಂದಣ್ಣ ಅವರು ಮೈಸಾ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ‘ಮೈಸಾ’ ಸಿನಿಮಾದ ಮೇಲೆ ನಿರೀಕ್ಷೆ ಹೆಚ್ಚುವಂತೆ ಮಾಡಿದ್ದಾರೆ. ಈ ಸಿನಿಮಾದಿಂದ ಫಸ್ಟ್ ಗ್ಲಿಂಪ್ಸ್ ಬಿಡುಗಡೆ ಆಗಿದೆ. ಈ ಸಿನಿಮಾದಲ್ಲಿ ಅವರು ಹಿಂದೆಂದೂ ಕಾಣಿಸಿಕೊಳ್ಳದ ಗೆಟಪ್ನಲ್ಲಿ ಪ್ರೇಕ್ಷಕರ ಎದುರು ಬರಲಿದ್ದಾರೆ. ಆ ಪಾತ್ರ ಹೇಗಿರಲಿದೆ ಎಂಬುದನ್ನು ತಿಳಿಸಲು ಈ ಗ್ಲಿಂಪ್ಸ್ ರಿಲೀಸ್ ಮಾಡಲಾಗಿದೆ.
ರವೀಂದ್ರ ಪುಲ್ಲೆ ಅವರು ‘ಮೈಸಾ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ನಿರ್ದೇಶಕರಾಗಿ ಇದು ಅವರ ಮೊದಲ ಸಿನಿಮಾ. ಹಾಗಿದ್ರೂ ಕೂಡ ಓರ್ವ ಅನುಭವಿ ನಿರ್ದೇಶಕನ ರೀತಿಯಲ್ಲಿ ಅವರು ಸಿನಿಮಾ ಮಾಡಿದ್ದಾರೆ ಎಂಬುದಕ್ಕೆ ಫಸ್ಟ್ ಗ್ಲಿಂಪ್ಸ್ ಟೀಸರ್ನಲ್ಲಿ ಸುಳಿವು ಸಿಕ್ಕಿದೆ. ‘ಅನ್ಫಾರ್ಮುಲಾ ಫಿಲ್ಮ್ಸ್’ ಸಂಸ್ಥೆಯ ಮೂಲಕ ‘ಮೈಸಾ’ ಸಿನಿಮಾ ನಿರ್ಮಾಣ ಆಗುತ್ತಿದೆ. ಇದನ್ನೂ ಓದಿ: ರಾಯರ ದರ್ಶನ ಪಡೆದ ರಿಷಬ್ ಶೆಟ್ಟಿ
ಇನ್ನು ಮೈಸಾ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಕನ್ನಡ, ತೆಲುಗು, ಹಿಂದೆ, ತಮಿಳು ಮುಂತಾದ ಭಾಷೆಗಳಲ್ಲಿ ಫಸ್ಟ್ ಗ್ಲಿಂಪ್ಸ್ ರಿಲೀಸ್ ಆಗಿದೆ. ಕೈಯಲ್ಲಿ ಬೇಡಿ, ಬಂದೂಕು, ಮೈಯೆಲ್ಲಾ ರಕ್ತ, ಮುಖದಲ್ಲಿ ನೋವು, ಆಕ್ರೋಶ.. ಹೀಗೆ ಮೊದಲ ಲುಕ್ನಲ್ಲೇ ಕಥೆಯ ಬಗ್ಗೆ ಒಂದಷ್ಟು ಸುಳಿವು ಬಿಟ್ಟುಕೊಡಲಾಗಿದೆ.
