ಬೆಂಗಳೂರು: ಕಾಂಗ್ರೆಸ್ ಎಂದರೆ ಕೇವಲ ಒಂದು ರಾಜಕೀಯ ಪಕ್ಷವಲ್ಲ ಇದೊಂದು ಚಳುವಳಿ ಮತ್ತು ಸಿದ್ಧಾಂತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಯ ಭಾರತ್ ಜೋಡೋ ಭವನದಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು.
ನಾವೆಲ್ಲರೂ ಚಳವಳಿಯಲ್ಲಿದ್ದೇವೆ. ಸಮಾನತೆ , ಸಮಾನ ಅವಕಾಶಗಳನ್ನು ಎಲ್ಲರಿಗೂ ಕೊಡಬೇಕು ಎನ್ನುವ ಸಿದ್ಧಾಂತ ನಮ್ಮದು ಎಂದರು.
ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು
ಗ್ರಾಮ ಪಂಚಾಯಿತಿಯಿಂದ ರಾಜ್ಯ ಮಟ್ಟದವರೆಗೆ ಜನವರಿ 5 ರಿಂದ ನಿರಂತರವಾಗಿ ಆಂದೋಲನವನ್ನು ಪ್ರಾರಂಭಿಸಲು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯಲ್ಲಿ ತೀರ್ಮಾನಿಸಲಾಗಿದೆ. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು
ರಾಷ್ಟ್ರಪಿತನ ಹೆಸರನ್ನೇ ಅಳಿಸಲು ಹೊರಟಿರುವ ಪ್ರಯತ್ನವನ್ನು ವಿಫಲಗೊಳಿಸಬೇಕು. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು. MGNAREGA ಕಾರ್ಯಕ್ರಮದಡಿ ದಲಿತರು, ಹಿಂದುಳಿದವರಿಗೆ ಹೆಚ್ಚಾಗಿ ಕೆಲಸ ದೊರಕುತ್ತಿತ್ತು . ಕೇಂದ್ರ ಸರ್ಕಾರ ರಾಜ್ಯಗಳ ಅನುದಾನವನ್ನು ಕೊಡುತ್ತಿತ್ತು. ಈಗ ಹೊಸ ಕಾಯ್ದೆ ಜಾರಿಗೆ ತಂದು, 60% ಕೇಂದ್ರ 40% ರಾಜ್ಯ ಸರ್ಕಾರ ಕೊಡಬೇಕು ಎಂದು ತೀರ್ಮಾನಿಸಿದ್ದಾರೆ. ರಾಜ್ಯಗಳ ಮೇಲೆ ಭಾರಿ ಹೊರೆಯನ್ನೇ ಹೊರೆಸುತ್ತಿದ್ದಾರೆ. ಇದನ್ನು ವಿಫಲಗೊಳಿಸಬೇಕು ಎಂದು ಸಿಎಂ ಕರೆ ನೀಡಿದರು.
ಸ್ವಾತಂತ್ರ್ಯ ಉಳಿಸಿಕೊಳ್ಳೋಣ
ಸತ್ಯಾಗ್ರಹ, ಅಹಿಂಸೆ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟದ್ದು ಕಾಂಗ್ರೆಸ್. ಇದನ್ನು ಉಳಿಸಿಕೊಳ್ಳುವ ಕೆಲಸ ಮಾಡೋಣ ಎಂದರು.
*ಗಾಂಧಿಯವರನ್ನು ಕಂಡರೆ ಅವರಿಗೆ ಆಗುವುದೇ ಇಲ್ಲ. ನರೇಗಾ ಯೋಜನೆ ಹೆಸರನ್ನು ವಿಬಿ ಜಿ ರಾಮ್ ಜಿ ಎಂದು ಕರೆದಿದ್ದು ಇದರ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯನ್ನೇ ಮಾಡಲಿಲ್ಲ ಎಂದರು. ಇವರು ಹೇಳುವ ರಾಮ ದಶರಥ ರಾಮನಲ್ಲ, ಬಿಜೆಪಿ ಯ ರಾಮ ಎಂದರು.
*ದೇಶದಲ್ಲಿ ಬದಲಾವಣೆ, ಸಾಮಾಜಿಕ ನ್ಯಾಯ ಹಾಗೂ ಸಮಾನ ಅವಕಾಶಗಳು ಎಲ್ಲರಿಗೂ ಸಿಕ್ಕಿದ್ದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ*
ನೀತಿಯೇ ಇಲ್ಲದವರು ಯೋಜನಾ ಆಯೋಗದ ಹೆಸರನ್ನು ನೀತಿ ಆಯೋಗ ಎಂದು ಬದಲಾಯಿಸಿದ್ದಾರೆ ಎಂದು ಮುಖ್ಯಮಂತ್ರಿಗಳು ಟೀಕಿಸಿದರು. ದೇಶದಲ್ಲಿ ಬದಲಾವಣೆ, ಸಾಮಾಜಿಕ ನ್ಯಾಯ ಹಾಗೂ ಸಮಾನ ಅವಕಾಶಗಳು ಎಲ್ಲರಿಗೂ ಸಿಕ್ಕಿದ್ದರೆ ಅದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಎಂದರು.
*ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ್ದು ರಾಜೀವ್ ಗಾಂಧಿ*
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ್ದು ರಾಜೀವ್ ಗಾಂಧಿ. ಹಿಂದುಳಿದವರಿಗೆ , ಮಹಿಳೆಯರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾದ ಮೀಸಲಾತಿ ಇರಬಾರದು ಎಂದು ಬಿಜೆಪಿ ಉಪಾಧ್ಯಕ್ಷ ರಾಮ ಜೋಯಿಸ್ ಸುಪ್ರೀಂ ಕೋರ್ಟಿಗೆ ಹೋದರು. ಸುಪ್ರೀಂ ಕೋರ್ಟಿನಲ್ಲಿ ಮೀಸಲಾತಿ ಕೊಟ್ಟಿರುವುದು ಸಾಂವಿಧಾನಿಕವಾಗಿದೆ ಎಂದು ತೀರ್ಪು ನೀಡುತ್ತಾರೆ. ದೇಶಕ್ಕೆ ಬಿಜೆಪಿಯ ಮತಗಳ್ಳತನ ಬಿಟ್ಟರೆ ಬೇರೇನೂ ಕೊಡುಗೆ ನೀಡಿಲ್ಲ. ಸುಳ್ಳೇ ಅವರ ಮನೆ ದೇವರು ಎಂದರು.
*MGNAREGA ಹೆಸರು ಬದಲಾವಣೆ: ಪ್ರಧಾನಮಂತ್ರಿಗಳ ಕಚೇರಿಯಿಂದಲೇ ತೀರ್ಮಾನ*
ರಾಜಕೀಯದಲ್ಲಿ ಅಧಿಕಾರ ಬರುತ್ತೆ ಹೋಗುತ್ತದೆ, ಆದರೆ ಬಿಜೆಪಿಯವರು ಅಧಿಕಾರ ಹಿಡಿಯಲು ಮತಗಳ್ಳತನ ಸೇರಿದಂತೆ ಯಾವ ಮಟ್ಟಕ್ಕಾದರೂ ಇಳಿಯುತ್ತಾರೆ ಎಂದರು. MGNAREGA ಹೆಸರು ಬದಲಾವಣೆ ಮಾಡಿದ್ದರೂ ಮಹಾತ್ಮಾ ಗಾಂಧಿ ಹೆಸರು ಶಾಶ್ವತ. ಕಾರ್ಯಕ್ರಮದ ಹೆಸರು ಬದಲಾವಣೆ ಮಾಡಿದ್ದ ತಕ್ಷಣ ಅವರ ಹೆಸರನ್ನು ಅಳಿಸಲು ಸಾಧ್ಯವೇ ಎಂದರು. ಮನಮೋಹನ್ ಸಿಂಗ್ ಹಾಗೂ ಶ್ರೀಮತಿ ಸೋನಿಯಾ ಗಾಂಧಿ ಅವರು ರೂಪಿಸಿದ ಕಾರ್ಯಕ್ರಮ 2005 ರಿಂದ ಇಂದಿನವರೆಗೂ ಇತ್ತು. ಈಗ ಬದಲಾಯಿಸಿದ್ದಾರೆ. ಇದು ಸಚಿವ ಸಂಪುಟದಲ್ಲಿ ತೀರ್ಮಾನವಾಗಿಲ್ಲ. ಪ್ರಧಾನಮಂತ್ರಿಗಳ ಕಚೇರಿಯಿಂದಲೇ ತೀರ್ಮಾನವಾಗಿದೆ ಎಂದರು. ಸಂಬಂಧಪಟ್ಟ ಇಲಾಖೆ ಸಚಿವರಿಗೂ ಇದರ ಬಗ್ಗೆ ತಿಳಿಲಿಲ್ಲ. ಇದನ್ನು ಉಳಿಸಿಕೊಳ್ಳುವ ರಕ್ಷಿಸುವ ಕರ್ತವ್ಯ ನಮ್ಮದು ಎಂದರು.
