Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಗಣಿ ಧಣಿಗೆ ಮತ್ತೆ ಎದುರಾಯಿತು ಸಂಕಷ್ಟ!
  • Crime
  • Politics
  • State
  • ಬಳ್ಳಾರಿ

ಗಣಿ ಧಣಿಗೆ ಮತ್ತೆ ಎದುರಾಯಿತು ಸಂಕಷ್ಟ!

Praja Vahini December 29, 2025 1 minute read
WhatsApp Image 2025-12-29 at 11.08.56
Spread the love

ಬಳ್ಳಾರಿ: ಗಣಿಧಣಿ ಜನಾರ್ಧನ್ ರೆಡ್ಡಿ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಸುಪ್ರೀಂ ಕೋರ್ಟ್ ಸಮಿತಿಯಿಂದ ಗಡಿ ಒತ್ತುವರಿ ಸಲ್ಲಿಕೆಯಲ್ಲಿ ಸಂಕಷ್ಟ ಎದುರಾಗಿದೆ ಎಂದು ತಿಳಿದುಬಂದಿದೆ.

ಹೌದು, ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಶಾಸಕ ಜನಾರ್ಧನ ರೆಡ್ಡಿ ಅವರಿಗೆ ಮತ್ತೆ ಗಣಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಕಷ್ಟ ಎದುರಾಗಿದೆ. ಆಂಧ್ರದ ಅನುಮತಿ ಬಳಸಿ ರಾಜ್ಯದ ಗಡಿ ಒತ್ತುವರಿ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಸುದಾಂಶು ದುಲಿಯಾ ನೇತೃತ್ವದಲ್ಲಿ ಸಮಿತಿ ಮಾಡಲಾಗಿತ್ತು. ಬಳ್ಳಾರಿಗೆ ತಿಂಗಳ ಹಿಂದೆ ಸರ್ವೇಗೆ ಬಂದಿದ್ದ ನಿವೃತ್ತ ನ್ಯಾ. ಸುದಾಂಶು ದುಲಿಯಾ ನೇತೃತ್ವದ ಸಮಿತಿಯಿಂದ ಗಡಿ ಒತ್ತುವರಿ ಬಗ್ಗೆ ವರದಿ ಸಲ್ಲಿಕೆ ಮಾಡಲಾಗಿದೆ.

ಆಂಧ್ರದ ರಾಯದುರ್ಗ ತಾಲೂಕಿನ ಮಲಪನಗುಡಿ ಗ್ರಾಮದಲ್ಲಿ ಡ್ರೋಣ್‌ ಮೂಲಕ ನಡೆದಿದ್ದ ಸರ್ವೇಯಲ್ಲಿ ಜನಾರ್ದನ ರೆಡ್ಡಿ ಒಡೆತನದ ಓಎಂಸಿ 2 ಹೆಸರಿನಲ್ಲಿ 39.50 ಹೆಕ್ಟೇರ್, ಅಂತರಗಂಗಮ್ಮ ಹೆಸರಿನ 68.50 ಹೆಕ್ಟೇರ್ ಪ್ರದೇಶಗಳಲ್ಲಿ ಗಣಿಗುತ್ತಿಗೆ ಪ್ರದೇಶ ಮತ್ತು ಗಡಿಗಳ ಹೊಂದಾಣಿಕೆ ಆಗಿಲ್ಲ. ಹೀಗಾಗಿ ಈ ಕಂಪನಿಗಳು ಕರ್ನಾಟಕ ರಾಜ್ಯದಲ್ಲಿ ಅತಿಕ್ರಮಣ ಮಾಡಿವೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ.ಕರ್ನಾಟಕ ಮತ್ತು ಆಂಧ್ರದ ನಡುವಿನ ಗಡಿ ನಾಶ ಪಡಿಸಿ, ಬಳ್ಳಾರಿ ಮೀಸಲು ಅರಣ್ಯ ಪ್ರದೇಶಗಳಾದ ವಿಠಲಾಪುರ, ತುಮಟಿ ಸೇರಿ ವಿವಿಧೆಡೆ ಅಕ್ರಮವಾಗಿ 28.90 ಲಕ್ಷ ಟನ್ ಅಕ್ರಮ ಅದಿರು ಸಾಗಾಟ ಮಾಡಿದ ಆರೋಪ ಇದೆ. ಈಗಾಗಲೇ ಅಕ್ರಮ ಸಾಬೀತಾಗಿ ಆಂಧ್ರದ ಸಿಬಿಐ (CBI) ವಿಚಾರಣಾಧೀನ ನ್ಯಾಯಾಲಯ ಜನಾರ್ದನ ರೆಡ್ಡಿಗೆ ಶಿಕ್ಷೆಯನ್ನೂ ಪ್ರಕಟಿಸಿತ್ತು.

ಅಮಿಕಸ್ ಕ್ಯೂರಿ ಹಾಗೂ ಆಂಧ್ರದ ಸಮ್ಮಿ ರೆಡ್ಡಿ ನೀಡಿದ್ದ ವರದಿ ಅನ್ವಯ ಕೋರ್ಟ್ ಹೊಸ ಸಮಿತಿ ರಚಿಸಿತ್ತು. ಸದ್ಯ ಈಗಿನ ನಿವೃತ್ತ ನ್ಯಾ. ದುಲಿಯಾ ಸಮಿತಿ ವರದಿಯಲ್ಲೂ ಅತಿಕ್ರಮಣ ನಡೆದಿದೆ ಎನ್ನುವುದು ದೃಢ ಪಟ್ಟಿದೆ. ಇದನ್ನೂ ಓದಿ: ಎಲ್-1 ಗುತ್ತಿಗೆದಾರರಿಗೆ ವಂಚನೆ ಖಂಡನೀಯ

ನಿವೃತ್ತಿ ನ್ಯಾ. ದುಲಿಯಾ ವರದಿಗೆ ಗಣಿಗುತ್ತಿಗೆ ಪಡೆದ ಮಾಲೀಕರಿಂದ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದ್ದು ಜನವರಿ 5 ದೆಹಲಿಯಲ್ಲಿ ನಡೆಯಲಿರುವ ಸಭೆ ಹಮ್ಮಿಕೊಳ್ಳಲಾಗಿದೆ. ದಾಖಲೆ ಸಲ್ಲಿಸದಿದ್ದರೆ ದುಲಿಯಾ ಸಮಿತಿ ವರದಿಯನ್ನು ಮೂರು ತಿಂಗಳ ಒಳಗೆ ಅಂತಿಮಗೊಳಿಸಿ, ವರದಿ ಆಧಾರ ಮೇಲೆ ಶಿಕ್ಷೆ ಪ್ರಕಟಿಸುವ ಸಾಧ್ಯತೆ ಇದೆ.

About the Author

Praja Vahini

Editor

View All Posts

Spread the love

Post navigation

Previous: ಎಲ್-1 ಗುತ್ತಿಗೆದಾರರಿಗೆ ವಂಚನೆ ಖಂಡನೀಯ
Next: ಮೈಸೂರು: ಕ್ಷಣಮಾತ್ರದಲ್ಲೇ ಕೆಜಿಗಟ್ಟಲೆ ಚಿನ್ನ ಎಸ್ಕೇಪ್

Views:

39

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.