ಬೆಂಗಳೂರು: ಹೊಸ ವರ್ಷದ ಪ್ರಯುಕ್ತ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳ ಜೊತೆಗೆ ಪೊಲೀಸ್ ಇಲಾಖೆಯ ಐಜಿಪಿ ಮತ್ತು ಮೇಲ್ಮಟ್ಟದ ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆಯ ಸಿಸಿಎಫ್ ಹಾಗೂ ಮೇಲ್ಮಟ್ಟದ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ ಹೊಸ ವರ್ಷದ ಶುಭಾಶಯ ಕೋರಿದರು.
ಮುಖ್ಯಮಂತ್ರಿಗಳು ಸರ್ಕಾರದ ಎಲ್ಲಾ ಹಿರಿಯ ಅಧಿಕಾರಿಗಳ ಜೊತೆಗೆ ಹೊಸ ವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಬಳಿಕ ಮಾತನಾಡಿದರು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯಕಾರ್ಯದರ್ಶಿ ಅಂಜುಂ ಪರ್ವೇಜ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಸಲೀಂ ಸೇರಿ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
